Homeಮುಖಪುಟಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

- Advertisement -
- Advertisement -

ಮುಸ್ಲಿಂ ಹೆಂಗಸರನ್ನು ಅಪಹರಿಸಿ ರೇಪ್‌ ಮಾಡಲು ಕರೆ ನೀಡಿದ ಸ್ವಾಮೀಜಿಯ ವಿಡಿಯೊ ವೈರಲ್‌ ಆಗಿದ್ದು, ತನಿಖೆ ನಡೆಸಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸೀತಾಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಸೀದಿಯ ಹೊರಗೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಹಿಂದೂ ಅರ್ಚಕ ಈ ರೀತಿಯ ಕರೆ ನೀಡಿದ್ದಾನೆ ಎನ್ನಲಾಗಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಕೇಸರಿ ವಸ್ತ್ರಗಳನ್ನು ಧರಿಸಿದ ವ್ಯಕ್ತಿಯೊಬ್ಬರು, ಖೈರಾಬಾದ್ ಎಂಬ ಸಣ್ಣ ಪಟ್ಟಣದಲ್ಲಿ ಜೀಪಿನ ಒಳಗೆ ಕೂತು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಚೀಪಿನ ಪಕ್ಕದಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನೂ ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೈಕ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿಯ ಮುಂದೆ “ಜೈ ಶ್ರೀ ರಾಮ್” ಎಂದು ಕೂಗುವ ದುಷ್ಕರ್ಮಿಗಳು, ಪ್ರಚೋದನಾಕಾರಿ ಮಾತುಗಳಿಗೆ ಜೈಕಾರ ಕೂಗಿದ್ದಾರೆ.

ತನ್ನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಈ ವ್ಯಕ್ತಿಯು ಆರೋಪಿಸಿದ್ದು ಇದಕ್ಕಾಗಿ ₹ 28 ಲಕ್ಷ ಸಂಗ್ರಹಿಸಲಾಗಿದೆ ಎಂದಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಂ ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಬೇಕೆಂದು ಪ್ರಚೋದಿಸಲಾಗಿದೆ. ಈ ಮಾತುಗಳಿಗೆ ಯುವಕರು ಹರ್ಷೋದ್ಘಾರ ಮಾಡಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ವೀಡಿಯೋವನ್ನು ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್, ಈ ವೀಡಿಯೊವನ್ನು ಏಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಬೈರ್‌‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸೀತಾಪುರ ಪೊಲೀಸರು, “ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಜುಬೇರ್ ಅವರ ಪೋಸ್ಟ್ ಗಮನಿಸಿರುವ ಹಲವಾರು ಟ್ವಿಟರ್ ಬಳಕೆದಾರರು ಈ ಧಾರ್ಮಿಕ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆಲವರು ಈತನನ್ನು “ಬಜರಂಗ ಮುನಿ” ಎಂದು ಗುರುತಿಸಿದ್ದಾರೆ. ಯುಎನ್‌ ಮಾನವ ಹಕ್ಕುಗಳ ಸಂಸ್ಥೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಹೆಚ್ಚಿದ ಮುಸ್ಲಿಂ ದ್ವೇಷ

ಬಲಪಂಥೀಯ ಸಂಘಟನೆಗಳ ದಿನದಿಂದ ದಿನಕ್ಕೆ ಸಮಾಜದಲ್ಲಿ ಸಾಮರಸ್ಯ ಕದಡುವುದು ಹೆಚ್ಚಾಗುತ್ತಿದೆ. ಪ್ರಚೋದನಾಕಾರಿ ಭಾಷಣಗಳಿಂದಲೇ ಗುರುತಿಸಿಕೊಂಡಿರುವ ಯತಿ ನರಸಿಂಗಾನಂದ, ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಬಳಿಕವೂ ಇದೇ ಪ್ರವೃತ್ತಿ ಮುಂದುವರಿಸಿದರು.

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಗಾನಂದ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸ್ವಾಮಿಜೀಯನ್ನ ಒಳಗೆ ಹಾಕಬೇಕಿದೆ ,ಕಾವಿದಾರಿಗಳಿಂದ ಈ ಪದ ಬಳಕೆ ಅಕ್ಷಮ್ಯ ಅಪರಾಧ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...