Homeಮುಖಪುಟವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ.

- Advertisement -
- Advertisement -

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು, ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆ ನೀಡಿದ್ದಾರೆ.

“ಸರ್ಕಾರ ಯಾವ ಮಾಧ್ಯಮದಲ್ಲಿ ವ್ಯವಹಿಸುತ್ತದೆಯೋ ಅದೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ. ಇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ, ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಅಮಿತ್‌ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹೇಳಿರುವುದಾಗಿ ಗೃಹ ಸಚಿವಾಲಯವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು. ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸುವ ಅಗತ್ಯವಿಲ್ಲ ಎಂದು ಶಾ ಸ್ಪಷ್ಟಪಡಿಸಿದ್ದಾರೆ. ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅಮಿತ್‌ ಶಾ ಅವರು ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಡಿಯ ಬಿ ಮಹತಾಬ್ ಅದರ ಉಪಾಧ್ಯಕ್ಷರಾಗಿದ್ದಾರೆ.

ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಮತ್ತು ಹಿಂದಿ ಬೋಧನಾ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಗೃಹ ಸಚಿವರು ಒತ್ತಿ ಹೇಳಿದ್ದಾರೆ.

ಸಚಿವ ಸಂಪುಟದ 70 ಪ್ರತಿಶತದಷ್ಟು ಕಾರ್ಯಸೂಚಿಯನ್ನು ಈಗ ಹಿಂದಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸಮಿತಿಯ ಸದಸ್ಯರಿಗೆ ಅವರು ತಿಳಿಸಿದ್ದಾರೆ. ಈಶಾನ್ಯದ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಾಗರಿಗೆ ಪರಿವರ್ತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

‘ಈ ಎಲ್ಲಾ ರಾಜ್ಯಗಳು ಹತ್ತನೇ ತರಗತಿಯವರೆಗಿನ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ’ ಎಂದು ಅವರು ತಿಳಿಸಿದ್ದಾರೆ.

ಸಮಿತಿಯ ವರದಿಯ 11ನೇ ಸಂಪುಟವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ಸಮಿತಿಯು ಸರ್ವಾನುಮತದಿಂದ ಅನುಮೋದನೆ ನೀಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಅಧಿಕಾರಿಗಳು ಮತ್ತು ಯುವಕರು ಹಿಂದಿಯ ಹೆಚ್ಚಿನ ಬಳಕೆಗೆ ಒತ್ತಾಯಿಸುತ್ತಲೇ ಇದ್ದಾರೆ, ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳು ಪ್ರಾಥಮಿಕವಾಗಿ ಭಾಷೆಯ ಕಾರಣದಿಂದಾಗಿ ರಕ್ಷಿಸಲ್ಪಟ್ಟಿವೆ ಎಂದು ಅಮಿತ್‌ ಷಾ ಅಭಿಪ್ರಾಯಪಟ್ಟಿದ್ದಾರೆ.

2019ರ ಹಿಂದಿ ದಿವಸ್‌ನಲ್ಲಿ ಭಾಷೆಯ ಕುರಿತು ಭಾಷಣ ಮಾಡಿದ್ದ ಅಮಿತ್ ಶಾ, “ಒಂದು ರಾಷ್ಟ್ರ, ಒಂದು ಭಾಷೆ” ಕಲ್ಪನೆಯನ್ನು ಮುಂದಿಟ್ಟಿದ್ದರು. “ಭಾರತ ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಆದರೆ ಪ್ರಪಂಚದ ಎದುರು ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಇಡೀ ದೇಶವು ಹೊಂದುವುದು ಅವಶ್ಯಕವಾಗಿದೆ. ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಹಿಂದಿ” ಎಂದಿದ್ದರು.

ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ, ವಿವಿಧ ರಾಜ್ಯಗಳ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ‘ಭಾರತದ ವೈವಿಧ್ಯತೆಯ ಮೂಲ ತತ್ವಗಳ ಮೇಲಿನ ದಾಳಿ ಇದಾಗಿದೆ’ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟರೆ, ‘ಸಂವಿಧಾನದ 29ನೇ ವಿಧಿ ಬಹು ಭಾಷೆಗಳನ್ನು ಗೌರವಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಿಳಿಸಿದ್ದರು.

ಅಲ್ಲಿಂದೀಚೆಗೆ, ಷಾ ಅವರು ತಮ್ಮ ಭಾಷೆಯ ಪ್ರತಿಪಾದನೆಯನ್ನು ಕಡಿಮೆ ಮಾಡಿದ್ದಾರೆ. ಹಿಂದಿ ಯಾವುದೇ ಪ್ರಾದೇಶಿಕ ಭಾಷೆಯೊಂದಿಗೆ ಸ್ಪರ್ಧಿಸುತ್ತಿಲ್ಲ, ಕೇವಲ ಪ್ರಾದೇಶಿಕ ಭಾಷಿಗರಿಗೆ ಪೂರಕವಾಗಿದೆ ಎಂದು ಪದೇ ಪದೇ  ಹೇಳುತ್ತಾ ಬಂದಿದ್ದಾರೆ.

ಹಿಂದಿ ಹೇರಿಕೆಯನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಅಧಿಕೃತ ಭಾಷೆ ಹಾಗೂ ಸಂವಹನ ಮಾಧ್ಯಮದ ಕುರಿತು ಅಮಿತ್‌ ಶಾ ಹಾಗೂ ಗೃಹ ಸಚಿವಾಲಯದ ನಿಲುವನ್ನು ಒಬ್ಬ ಕನ್ನಡಿಗನಾಗಿ ನಾನು ವಿರೋಧಿಸುತ್ತೇನೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ; ಹಾಗಾಗಲೂ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಂದಿ ಹೇರಿಕೆಯ ಈ ಹುನ್ನಾರ ಕಂಡನಾರ್ಹ. ನಮಗೆ ಇಂಗ್ಲೀಷೇ ಸಂಪರ್ಕ ಬಾಶೆಯಾಗಿರಲಿ, ಹಿಂದಿ ಬೇಡ.

  2. I do not know Hindi and do want to speak. I am kannadiga and i need kannada and English only to live in India.
    Most of the North Indian people work in southern
    States ask them to learn South Indian languages. This will help them to understand local culture.

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...