Homeಕರ್ನಾಟಕಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಶ್ರೀರಾಮಸೇನೆಯ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆ ಪ್ರತಿಭಟನೆ

ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು

- Advertisement -
- Advertisement -

ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕಲ್ಲಂಗಡಿ ಹಣ್ಣಿನ ಬಡ ವ್ಯಾಪಾರಿ ನಬಿಸಾಬ್ ಅವರ ಮೇಲೆ ಗೂಂಡಾಗಿರಿ ನಡೆಸಿ, ತಿನ್ನುವ ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಅಮಾನವೀಯಕೃತ್ಯ ಎಸಗಿರುವ ಶ್ರೀರಾಮಸೇನೆಯ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುತ್ವ ಕರ್ನಾಟಕ ವೇದಿಕೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಗೂ ಮುನ್ನ ಬಹುತ್ವ ಕರ್ನಾಟಕ ವೇದಿಕೆಯಡಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ತಹಸಿಲ್ದಾರ್‌‌ ಕಾರ್ಯಾಲಯದ ಮುಂದೆ ಸಾರ್ವಜನಿಕರಿಗೆ ಉಚಿತವಾಗಿ ಕೆಲವೊತ್ತು ಕಲ್ಲಂಗಡಿ ಹಣ್ಣುಗಳನ್ನು ಹಂಚಿ ಸೌಹಾರ್ದತೆ ಸಂದೇಶ ಸಾರಿದರು. ಹಿಂದೂ-ಮುಸ್ಲಿಂ ವ್ಯಾಪಾರಿಗಳು ಪರಸ್ಪರ ಸಹೋದರರು, ಕೋಮುವಾದಿ ಸಂಘಟನೆಗಳು ಹಾಗೂ ವ್ಯಕ್ತಿಗಳು ನಮ್ಮ ನಡುವಿನ ಸಾಮರಸ್ಯ ಕದಡಲು ಸಾಧ್ಯವಿಲ್ಲ ಎಂದು ಏಕತೆಯ ಸಂಕೇತ ಬಿಂಬಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಹಕ್ಕುಗಳ ಹೋರಾಟಗಾರ ಅಶೋಕ ನಂಜಲದಿನ್ನಿ, “ಕೆಲವು ಕೋಮುವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳು ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರಿಗೆ ಧರ್ಮದ ನಶೆ ಏರಿಸಿ; ಇಲ್ಲ-ಸಲ್ಲದ ಕಪೋಲ ಕಲ್ಪಿತ ದುಷ್ಟ ವಿಚಾರಗಳನ್ನು ತಲೆಯಲ್ಲಿ ತುಂಬಿ, ಬಡ ಮುಸ್ಲಿಂ ಜನರ ಮೇಲೆ ಎತ್ತಿಕಟ್ಟಿ ಅವರ ಬದುಕನ್ನು ಹಾಳುಮಾಡುತ್ತಿದ್ದಾರೆ. ಇಂತವರಿಂದ ಪ್ರೇರೇಪಣೆಗೊಂಡು ದುಷ್ಕೃತ್ಯ ನಡೆಸಿದ ದಲಿತ, ಶೂದ್ರ, ಹಿಂದುಳಿದ ವರ್ಗದ ಯುವಕರು ಜೈಲಿಗೆ ಹೋದರೆ ಬದುಕು ಬೀದಿಗೆ ಬೀಳುತ್ತದೆ. ಪರಸ್ಪರ ದಲಿತ, ಶೂದ್ರ ಹಾಗೂ ಹಿಂದುಳಿದ ವರ್ಗದವರನ್ನು ಮುಸ್ಲಿಂ ಸಮುದಾಯದವರ ಮೇಲೆ ಛೂ ಬಿಟ್ಟು ಇತ್ತ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಅವರ ಹಿಡನ್ ಅಜೆಂಡಾವಾಗಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಬಹುತ್ವ ವೇದಿಕೆಯ ಸಂಚಾಲಕ ನಾಗರಾಜ ಪೂಜಾರ್ ಮಾತನಾಡಿ, “ಕಳೆದ ಹಲವು ದಿನಗಳಲ್ಲಿ ರಾಜ್ಯಾದ್ಯಂತ ಕೋಮುಸಾಮರಸ್ಯ ಕದಡುವಂತಹ ದುಷ್ಕೃತ್ಯಗಳು ಸರಣಿಯೋಪಾದಿಯಲ್ಲಿ ನಡೆಯುತ್ತಿವೆ. ಅಲ್ಲದೇ ಸರ್ಕಾರದ ಭಾಗವಾಗಿರುವ ಗೃಹ ಸಚಿವರೇ ಬಹಿರಂಗವಾಗಿ ಕೋಮು ಸಂಘಟನೆಗಳ ಏಜೆಂಟರಂತೆ ಮಾತನಾಡುತ್ತಿದ್ದಾರೆ. ಇನ್ನು ಮುಖ್ಯಮಂತ್ರಿಗಳು ಈ ಹಿಂದೆಯೇ ಕ್ರಿಯೆಗೆ-ಪ್ರತಿಕ್ರಿಯೆ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮತೀಯವಾದ ಮತ್ತು ಮತೀಯವಾದಿಗಳನ್ನು ಬೆಂಬಲಿಸಿ ಸಂವಿಧಾನ ಮತ್ತು ನಾಡಿನ ಜನರಿಗೆ ದ್ರೋಹ ಬಗೆದಿದ್ದಾರೆ” ಎಂದು ಹೇಳಿದರು.

ಮನುಜಮತ ಬಳಗದ ಬಸವರಾಜ ಬಾದರ್ಲಿ ಮಾತನಾಡಿ, “ಕೋಮುವಾದಿ ಬಜರಂಗಿಗಳು ಬಡ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಬೀದಿ ಎಸೆದು ರೈತರಿಗೆ, ಅವರ ಶ್ರಮಕ್ಕೆ ಅವಮಾನ ಮಾಡಿದ್ದಾರೆ. ಶಾಂತಿ-ಸೌಹಾರ್ದತೆಯಿಂದ ಬದುಕುತ್ತಿರುವ ಹಿಂದೂ-ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಕೆಲ ಶಕ್ತಿಗಳು ಹವಣಿಸುತ್ತಿದ್ದು ಅದರ ಭಾಗವಾಗಿ ಈ ಘಟನೆ ನಡೆದಿದೆ” ಎಂದು ವಿಶ್ಲೇಷಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ (ಕೋಡಿಹಳ್ಳಿ ಬಣ) ಮುಖಂಡ ರಾಮಯ್ಯ ಜವಳಗೇರಾ ಮಾತನಾಡಿ, “ಸಂಪೂರ್ಣ ಆಡಳಿತ ವೈಫಲ್ಯ ಕಂಡಿರುವ ಬಿಜೆಪಿ ಸರ್ಕಾರವು ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜಿತ ಕಾರ್ಯತಂತ್ರದಭಾಗವಾಗಿ ಜನರ ಮನಸ್ಸನ್ನು ದಿಕ್ಕು ತಪ್ಪಿಸಲು, ಕೋಮುವಾದಿ ಸಂಘಟನೆಗಳ ದುಷ್ಕೃತ್ಯಗಳಿಗೆ ಪ್ರೋತ್ಸಾಹಿಸುತ್ತಿರುವುದಲ್ಲದೇ ಧರ್ಮ/ ಧರ್ಮಗಳ ನಡುವೆ ಕೋಮುಗಲಭೆ ಸೃಷ್ಟಿಮಾಡಲು ಕೀಳುಮಟ್ಟಕ್ಕಿಳಿದು ಏನೆಲ್ಲಾ ಹುನ್ನಾರ ನಡೆಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ವೆಂಕಟೇಶ ಗಿರಿಜಾಲಿ, ಮಂಜುನಾಥ ಗಾಂಧಿನಗರ, ಬಸವರಾಜ ಹಸಮಕಲ್, ಶಾಮೀದ್‌ಸಾಬ್ ಸಿದ್ರಾಂಪುರ, ಸೈಯ್ಯದ್ ಬಾಷಾ, ಹುಸೇನ್ ಬಾಷಾ, ಖಾಸಿಂಸಾಬ್, ಸಮ್ಮದ್ ಚೌದ್ರಿ, ಪಂಪಾಪತಿ, ಅರ್ಶದ್, ಎಂ.ಎಡಿ.ಅಸೀಫ್, ಯಂಕಪ್ಪ, ಹೊಳೆಯಪ್ಪ ದಿದ್ದಿಗಿ, ಅಬೂಬಕರ್, ಎಂ.ಡಿ.ಮಂಜಿಲ್. ಶೇಖ್, ಸುಹೈಲ್ ಅಲಿ, ಸಬ್ಜಲಿಸಾಬ್, ಶಫಿ ಸೇರಿದಂತೆ ಇನ್ನಿತರರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಧಾರವಾಡದ ಮುಸ್ಲಿಂ ವರ್ತಕನ ಕಲ್ಲಂಗಡಿ ಹಣ್ಣು ಧ್ವಂಸ: ದುಷ್ಕರ್ಮಿಗಳ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...