Homeಮುಖಪುಟಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ನವದೆಹಲಿ: ಭಿನ್ನಾಭಿಪ್ರಾಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ವಕ್ತಾರೊಬ್ಬರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದೆ. ಹಿಂದಿಯನ್ನು ಪ್ರಚಾರ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಲಹೆ ನೀಡಿರುವುದನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹದ ಕೇಸ್ ಹಾಕಲಾಗಿದೆ.

ಬಿಜೆಪಿ ಯುವ ಮೊರ್ಚಾದ ರಾಜ್ಯಾಧ್ಯಕ್ಷ ಎಂ. ಭರೀಶ್ ಶರ್ಮಾ ಅವರು ಏಪ್ರಿಲ್ 11ರಂದು ನೀಡಿದ ದೂರಿನ ಆಧಾರದ ಮೇಲೆ ಮಣಿಪುರ ಪೊಲೀಸರು ಇಂಫಾಲ್ ಮೂಲದ ವಕೀಲ, ಕಾಂಗ್ರೆಸ್‌ ವಕ್ತಾರ ಸನೌಜಮ್ ಶ್ಯಾಮಚರಣ್ ಸಿಂಗ್ (ಸನೂ) ಅವರನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ದೂರಿನ ಮೇರೆಗೆ ಇಂಫಾಲ್ ಪೊಲೀಸರ ತಂಡವು ಏಪ್ರಿಲ್ 12ರಂದು ಬೆಳಗಿನ ಜಾವ 1 ಗಂಟೆಗೆ ಸನೌರನ್ನು ಬಂಧಿಸಲಾಯಿತು. ಮಂಗಳವಾರ ಸಂಜೆ ಸನೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಸನೂ ವಿರುದ್ಧ ಆರೋಪ ಹೊರಿಸಲಾಗಿದೆ.

ಏಪ್ರಿಲ್ 9ರಂದು ಇಂಪ್ಯಾಕ್ಟ್ ಟಿವಿಯಲ್ಲಿ ಸನೂ ಅವರು ಭಾಗವಹಿಸಿ, ‘ಹಿಂದಿ: ಏಕೀಕರಣ ಅಥವಾ ಹೇರಿಕೆ’ ವಿಷಯದ ಚರ್ಚೆಯಲ್ಲಿ ಮಾತನಾಡಿದ್ದರು.

ಇಂಫಾಲ್‌ನಿಂದ ‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಉಪಾಧ್ಯಕ್ಷರೂ ಆದ ವಕೀಲ ರವಿ ಖಾನ್, “ಸನೂ ಅವರನ್ನು ಏಪ್ರಿಲ್ 12ರಂದು ರಾತ್ರಿ 8:30 ರ ಸುಮಾರಿಗೆ ಇಂಫಾಲ್ ವೆಸ್ಟ್‌ನ ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಒಂದೂವರೆ ಗಂಟೆಗಳ ಕಾಲ ಪೊಲೀಸ್ ಅಥವಾ ನ್ಯಾಯಾಂಗ ಬಂಧನದ ಪರ, ವಿರುದ್ಧದ ವಾದಗಳನ್ನು ಆಲಿಸಿದ ನಂತರ, ಮ್ಯಾಜಿಸ್ಟ್ರೇಟ್ ರಾತ್ರಿ 10 ಗಂಟೆಗೆ ಜಾಮೀನು ನೀಡಿದರು” ಎಂದು ತಿಳಿಸಿದ್ದಾರೆ.

ಪ್ರಕರಣವು ಮುಂದುವರಿಯಲಿದ್ದು, ಮುಂದಿನ ಏಪ್ರಿಲ್ 27ರಂದು ಕೆಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸನೂಗೆ ತಿಳಿಸಲಾಗಿದೆ.

ಸ್ಥಳೀಯ ಬಿಜೆಪಿ ಯುವ ಮುಖಂಡ ನೀಡಿದ ದೂರಿನಲ್ಲಿ, “ಚರ್ಚೆಯ ಸಮಯದಲ್ಲಿ ಸನೂ ಅವರು ಭಾರತದ ಮುಖ್ಯ ಭೂಭಾಗವನ್ನು ನಿಂದಿಸಿದ್ದಾರೆ. ಮಾತ್ರವಲ್ಲದೆ ಅಮಿತ್‌ ಶಾ ವಿರುದ್ಧ ಅಸಭ್ಯ, ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತವಾಗಿ ಅವಮಾನಿಸಿದ್ದಾರೆ. ಭಾರತದ ಹಿಂದೂಗಳನ್ನು ಪ್ರಾಣಿ ಎಂದು ಕರೆದಿದ್ದಾರೆ. ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಇದರಿಂದಾಗಿ ಇಡೀ ಭಾರತದ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ” ಎಂದು ಆರೋಪಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷೆ ಎ.ಶಾರದಾ ದೇವಿ ಶರ್ಮಾ ದೇಶದ್ರೋಹ ಪ್ರಕರಣವನ್ನು ಸಮರ್ಥಿಸಿದ್ದಾರೆ. ದೇಶಾದ್ಯಂತ ಜನರು ಹಿಂದಿಯನ್ನು ಅಳವಡಿಸಿಕೊಳ್ಳುವಂತೆ ಅಮಿತ್‌ ಶಾ ಹೇಳಿರುವ ವಿಚಾರವನ್ನು ಬದಿಗೊತ್ತಿರುವ ಶಾರದಾ ಶರ್ಮಾ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರ ನಡುವೆ ಈಶಾನ್ಯ ರಾಜ್ಯದಾದ್ಯಂತ ಹಲವಾರು ನಾಗರಿಕ ಸಮಾಜ, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಿಂದಿ ಹೇರಿಕೆಯ ವಿರುದ್ಧ ಬೀದಿಗಿಳಿದಿವೆ.

ದೇಶದ್ರೋಹ ದುರ್ಬಳಕೆಯೇ?

ದೇಶಾದ್ಯಂತ ಪೊಲೀಸರು ದೇಶದ್ರೋಹದ ಆರೋಪಗಳನ್ನು ತ್ವರಿತವಾಗಿ ಬಳಸುತ್ತಿದ್ದಾರೆ. ಈ ಸೆಕ್ಷನ್ ಅನ್ನು ವಿನಾಕಾರಣ ಬಳಸುತ್ತಿರುವುದು ಚರ್ಚೆಯ ವಿಷಯವಾಗಿದೆ.

ಕೇದಾರ್ ನಾಥ್ ಸಿಂಗ್ ವರ್ಸಸ್‌‌ ಬಿಹಾರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೀಗೆ ಹೇಳಿದೆ: “ಹೇಳಿಕೆಗಳು, ಎಷ್ಟೇ ಪ್ರಬಲವಾದ ಪದಗಳಿದ್ದರೂ, ಹಿಂಸಾಚಾರವನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿಲ್ಲದಿದ್ದರೆ, ಅವುಗಳನ್ನು ದೇಶದ್ರೋಹವೆಂದು ಪರಿಗಣಿಸಲಾಗುವುದಿಲ್ಲ”.

ಮೇ 2021 ರಲ್ಲಿ, ಸರ್ವೋಚ್ಚ ನ್ಯಾಯಾಲಯವು “ದೇಶದ್ರೋಹದ ಮಿತಿಗಳನ್ನು ವ್ಯಾಖ್ಯಾನಿಸಲು ಸಮಯ ಬಂದಿದೆ” ಎಂದಿತ್ತು.


ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...