Homeಮುಖಪುಟಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

ಮುಸ್ಲಿಂ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ್ದ ದುಷ್ಕರ್ಮಿ ‘ಬಜರಂಗ ಮುನಿ’ ಅರೆಸ್ಟ್‌‌

- Advertisement -
- Advertisement -

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದ, ಉತ್ತರ ಪ್ರದೇಶದ ಸೀತಾಪುರದ ಖೈರಾಬಾದ್‌ನಲ್ಲಿರುವ ಮಹರ್ಷಿ ಶ್ರೀ ಲಕ್ಷ್ಮಣ್ ದಾಸ್ ಉದಾಸಿನ್ ಆಶ್ರಮದ ಮುಖ್ಯಸ್ಥ ಭಜರಂಗ ಮುನಿ ದಾಸ್‌‌‌ನನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಯು ಧಾರ್ಮಿಕ ಮೆರವಣಿಗೆಯೊಂದರಲ್ಲಿ ಪೊಲೀಸರ ಸಮ್ಮುಖದಲ್ಲೆ ಆಘಾತಕಾರಿ ಬೆದರಿಕೆಗಳನ್ನು ಹಾಕಿದ್ದನು. ಬೆದರಿಕೆ ಹಾಕಿದ 11 ದಿನಗಳ ನಂತರ ಆತನ ಬಂಧನ ನಡೆದಿದೆ.

ಎಪ್ರಿಲ್ 2 ರಂದು ನಡೆದ ರ್‍ಯಾಲಿಯಲ್ಲಿ ದುಷ್ಕರ್ಮಿ ಬಜರಂಗ ಮುನಿ ದ್ವೇಷ ಭಾಷಣ ಮಾಡುವ ಎರಡು ನಿಮಿಷಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು ಮತ್ತು ಪ್ರತಿಭಟನೆಗಳೂ ದಾಖಲಾಗಿದ್ದವು. ಭಾಷಣದಲ್ಲಿ ಆತ ಅತ್ಯಾಚಾರ ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಕರೆ ನೀಡಿದ್ದನು. ಅವನ ಈ ಹೇಳಿಕೆಗೆ ಅಲ್ಲಿ ಸೇರಿದ್ದ ಜನರು ಜೈಶ್ರೀರಾಂ ಎಂಬ ಘೋಷಣೆ ಹಾಕಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊ ಕಳೆದ ಶುಕ್ರವಾರ ವೈರಲ್ ಆಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ತೀಕ್ಷ್ಣ ಖಂಡನೆ ವ್ಯಕ್ತಪಡಿಸಿತ್ತು. ಇಂತಹ ಹೇಳಿಕೆಗಳನ್ನು ನೀಡುತ್ತಿರುವಾಗ ಪೊಲೀಸರು ಮೂಕಪ್ರೇಕ್ಷಕರಾಗಿ ಇರಬಾರದು ಎಂದು ಹೇಳಿದ್ದ ಆಯೋಗ ಅವನನ್ನು ಬಂಧಿಸುವಂತೆ ಕೋರಿತ್ತು.

ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಇದರ ನಂತರ ದುಷ್ಕರ್ಮಿ ಭಜರಂಗ ಮುನಿ ದಾಸ್‌ ವಿರುದ್ದ ಎಪ್‌ಐಆರ್‌ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ದ್ವೇಷ ಭಾಷಣ, ಅವಹೇಳನಕಾರಿ ಹೇಳಿಕೆಗಳು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾದ ಕೆಲವೇ ಗಂಟೆಗಳ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಬಜರಂಗ ಮುನಿ ಕ್ಷಮೆ ಯಾಚಿಸುತ್ತಿರುವ ವೀಡಿಯೋ ಕಾಣಿಸಿಕೊಂಡಿತ್ತು. “ನನ್ನ ಹೇಳಿಕೆಯನ್ನು ತಪ್ಪು ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ. ಅದಕ್ಕಾಗಿ ನಾನು ಬೇಷರತ್ ಕ್ಷಮೆಯಾಚಿಸುತ್ತೇನೆ” ಎಂದು ಅವನು ಹೇಳಿದ್ದನು.

ಕಳೆದ ತಿಂಗಳು ಹರಿದ್ವಾರ ಸೇರಿದಂತೆ ಅನೇಕ ಸ್ಥಳಗಳಲ್ಲಿ ದ್ವೇಷದ ಭಾಷಣಗಳ ಸರಣಿ ಕಾರ್ಯಕ್ರಮಗಳು ನಡೆದಿತ್ತು. ಅದರಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ಕೈಗಿತ್ತಿಕೊಳ್ಳಲು ಮತ್ತು ನರಮೇಧ ಎಸಗಲು ಮುಕ್ತ ಕರೆಗಳನ್ನು ನೀಡಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಇದರ ವಿರುದ್ದ ಭಾರತೀಯ ಸೇನೆಯ ಐದು ಮಾಜಿ ಮುಖ್ಯಸ್ಥರು, ಅಧಿಕಾರಿಗಳು ಮತ್ತು ದೇಶದ ಗಣ್ಯರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಇದರ ನಂತರ ಕಾರ್ಯಕ್ರಮ ನಡೆಸಿದ್ದ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿತ್ತು.

ಪ್ರಕರಣದ ಪ್ರಮುಖ ಆರೋಪಿ ಯತಿ ನರಸಿಂಹಾನಂದ್‌‌ ದೆಹಲಿಯಲ್ಲಿ ಮತ್ತೊಂದು ದ್ವೇಷದ ಭಾಷಣವನ್ನು ಮಾಡಿ, ಅಲ್ಲಿ ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ್ದನು. ಈತ ಒಂದು ತಿಂಗಳ ಹಿಂದೆಯಷ್ಟೆ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಇಂದು ದ್ವೇಷ ಭಾಷಣ ಪ್ರಕರಣಗಳ ತನಿಖೆ ಮತ್ತು ಕ್ರಮ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 22 ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಹರಿದ್ವಾರದಂತೆಯೇ ಹಿಮಾಚಲ ಪ್ರದೇಶದಲ್ಲಿ ಏಪ್ರಿಲ್ 17ರಂದು ಕಾರ್ಯಕ್ರಮ ನಡೆಯಲಿದೆ ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:  ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...