Homeಕರ್ನಾಟಕಸಂತೋಷ್‌ ಸಾವಿನ ಹಿಂದೆ ‘ಸಿಡಿ ಪ್ರಕರಣ’ದ ತಂಡದ ಕೈವಾಡವಿದೆ: ರಮೇಶ್‌ ಜಾರಕಿಹೊಳಿ

ಸಂತೋಷ್‌ ಸಾವಿನ ಹಿಂದೆ ‘ಸಿಡಿ ಪ್ರಕರಣ’ದ ತಂಡದ ಕೈವಾಡವಿದೆ: ರಮೇಶ್‌ ಜಾರಕಿಹೊಳಿ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿಂದೆ, ಆಪಾದಿತ ‘ಸಿಡಿ ಪ್ರಕರಣ’ದಲ್ಲಿದ್ದ ಮಹಾನಾಯಕನ ತಂಡದ ಕೈವಾಡವಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. “ಸಿಡಿ ಪ್ರಕರಣ ಮತ್ತು ಸಂತೋಷ್‌ ಸಾವಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ತಾನು ಏಪ್ರಿಲ್ 18 ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ವಾಸ್ತವ ಸಂಗತಿಗಳನ್ನು ಬಹಿರಂಗಪಡಿಸುವುದಾಗಿ ಅವರು ಘೋಷಿಸಿದ್ದಾರೆ. ಗುರುವಾರ ಬೆಳಗಾವಿ ತಾಲೂಕಿನ ಬಡಾಸ ಗ್ರಾಮದಲ್ಲಿ ಸಂತೋಷ್ ಪಾಟೀಲ್ ಅವರ ಸಮಾಧಿ ಸ್ಥಳಕ್ಕೆ ತೆರಳಿದ ಜಾರಕಿಹೊಳಿ, ಅವರಿಗೆ ಗೌರವ ಸಲ್ಲಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂತೋಷ್ ಅವರು ಕಾಂಗ್ರೆಸ್‌ನಲ್ಲಿದ್ದಾಗ ಅವರೊಂದಿಗೆ ತಾನು ಒಳ್ಳೆಯ ಸಂಬಂಧ ಹೊಂದಿದ್ದೆ. ನನ್ನೊಂದಿಗೆ ಅವರು ಬಿಜೆಪಿ ಸೇರಿದ್ದಾರೆ. ಅವರ ಪತ್ನಿ ಜಯಶ್ರೀ ಮತ್ತು ಅವರ ಮಗನಿಗೆ ನಾವು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ. ಜೊತೆಗೆ ಸರ್ಕಾರದಿಂದ ಸಹಾಯ ಪಡೆಯಲು ಪ್ರಯತ್ನಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ಈಶ್ವರಪ್ಪ ಮತ್ತು ನಾನು ಒಂದೇ ತಂಡದ ಷಡ್ಯಂತ್ರಕ್ಕೆ ಬಲಿಯಾಗಿದ್ದೇವೆ. ಇದನ್ನು ಬಿಜೆಪಿ ಹೈಕಮಾಂಡ್‌ನ ಅನುಮತಿ ಪಡೆದ ನಂತರ ಸೋಮವಾರ ತಿಳಿಸುತ್ತೇನೆ. ಈಶ್ವರಪ್ಪ ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರ ತಪ್ಪು ಸಾಬೀತಾದರೆ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಲಿ. ನಾನು ರಾಜೀನಾಮೆ ನೀಡಿ ನೋವನ್ನು ಅನುಭವಿಸಿದ್ದೇನೆ, ಈಶ್ವರಪ್ಪನವರಿಗೆ ಅದೇ ಆಗಬಾರದು” ಎಂದಿದ್ದಾರೆ.

“ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಿನಿಂದಲೂ ನನಗೆ ಹಲವು ಸಂಗತಿಗಳು ತಿಳಿದಿವೆ. ಸಂತೋಷ್ ತನ್ನ ಜೀವನವನ್ನು ಕೊನೆಗೊಳಿಸಬಾರದಿತ್ತು. ಅವರ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡವರಿಗೆ ಎಷ್ಟೋ ಸತ್ಯಗಳು ಗೊತ್ತಿಲ್ಲ. ಹಿಂಡಲಗಾ ಗ್ರಾ.ಪಂ.ಅಧ್ಯಕ್ಷ ನಾಗೇಶ ಮನ್ನೋಳಕರ, ನಾನೇ ಶೀಘ್ರದಲ್ಲೇ ಸಚಿವನಾಗುತ್ತೇನೆ, ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಸಂತೋಷ್‌ಗೆ ಹೇಳಿದ್ದರು” ಎಂದು ಜಾರಕಿಹೊಳಿ ಹೇಳಿದ್ದಾರೆ.

ನನ್ನ ಮೇಲೆ ಆರೋಪ ಮಾಡಿದ್ದ ಸಿಡಿ ಪ್ರಕರಣ ಮತ್ತು ಸಂತೋಷ್ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾರಕಿಹೊಳಿ ಅವರು ಬೆಳಗಾವಿ ತಾಲೂಕಿನ ಬಡಾಸ್ ಗ್ರಾಮದಲ್ಲಿರುವ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, “ಗುತ್ತಿಗೆದಾರರು ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಂತರ ಅನುಮೋದನೆಗಳನ್ನು ನೀಡುವುದು ಸಾಮಾನ್ಯ ಅಭ್ಯಾಸವಾಗಿತ್ತು. ಅವರ ಸಾವಿನ ಹಿಂದೆ ಯಾರ ಕೈವಾಡವಿದೆ ಎಂಬುದು ತಿಳಿಯಬೇಕಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...