ಕೊಲಾರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಮಾಜಿ ಸಿಪಿಐ(ಎಂ) ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಾಘಾತದ ಹಿನ್ನೆಲೆಯಲ್ಲಿ ಅವರನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಹಲವು ಜನಪರ ಹೋರಾಟಗಳಿಗೆ ನೇತೃತ್ವ ನೀಡಿದ್ದ ಶ್ರೀರಾಮ ರೆಡ್ಡಿ ಅವರು ಬಾಗೇಪಲ್ಲಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವಿವಾಹಿತರಾಗಿದ್ದ ಅವರು ನಿಧನದವರೆಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. 2018 ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು 51,697 ಮತಗಳನ್ನು ಪಡೆದು ಸೋಲುಂಡಿದ್ದರು.
ತನ್ನ ಮಾಜಿ ಶಾಸಕನ ನಿಧನಕ್ಕೆ ಸಿಪಿಐಎಂ ರಾಜ್ಯ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
2020 ರ ಜೂನ್‌ನಲ್ಲಿ ಪಕ್ಷದ ತತ್ವ ಸಿದ್ದಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಪಿಐಎಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿತ್ತು. ಆದರೆ ಪಕ್ಷದ ಮೇಲೆ ಅತೀವ ಒಲವು ಹೊಂದಿದ್ದ ಅವರು, ಐದು ತಿಂಗಳ ಹಿಂದೆಯಷ್ಟೆ ಮತ್ತೆ ತನ್ನನ್ನು ಪಕ್ಷಕ್ಕೆ ತೆಗೆದುಕೊಳ್ಳಬೇಕು ಎಂದು ಪಕ್ಷದ ಕೇಂದ್ರ ಸಮಿತಿಗೆ ಪತ್ರ ಬರೆದಿದ್ದರು. ಈ ಪತ್ರವು ಪರಿಶೀಲನೆಯಲ್ಲಿತ್ತು ಎಂದು ಪಕ್ಷ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಶ್ರೀರಾಮ ರೆಡ್ಡಿ ಅವರು ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ ಅವರು, “ಸಿಪಿಎಂ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದ ರೆಡ್ಡಿಯವರು ಇತ್ತೀಚಿನ ವರ್ಷಗಳಲ್ಲಿ ಕೋಮುವಾದದ ವಿರುದ್ದದ ಗಟ್ಟಿದನಿಯಾಗಿದ್ದರು.” ಎಂದು ಹೇಳಿದ್ದಾರೆ.
ಸಿಪಿಎಂ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದ ರೆಡ್ಡಿಯವರು
ಇತ್ತೀಚಿನ ವರ್ಷಗಳಲ್ಲಿ ಕೋಮುವಾದದ ವಿರುದ್ದದ ಗಟ್ಟಿದನಿಯಾಗಿದ್ದರು.
1/2 pic.twitter.com/woNtMGAYr0— Siddaramaiah (@siddaramaiah) April 15, 2022
“ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಸಂಘಟನೆಗೆ ಪ್ರಯತ್ನ ನಡೆಸುತ್ತಿದ್ದ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ರಾಜ್ಯ ಒಬ್ಬ ಧೀಮಂತ ಹೋರಾಟಗಾರನನ್ನು ಮತ್ತು ವೈಯಕ್ತಿಕವಾಗಿ ನಾನು ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬದ ಸದಸ್ಯರ ಮತ್ತು ಅನುಯಾಯಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ


