ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ಧ್ವಂಸಗೊಳಿಸಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಾಮೀನನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಯುವ ಮೋರ್ಚಾದ ಎಂಟು ಮಂದಿಗೆ ಭಾರತೀಯ ಜನತಾ ಪಕ್ಷದ ದೆಹಲಿ ಘಟಕವು ಶುಕ್ರವಾರ ಸನ್ಮಾನಿಸಿದೆ.
ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ‘ಕ್ರಾಂತಿಕಾರಿಗಳು’ ಎಂದು ಕರೆದಿರುವ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ಪಕ್ಷದ ಕಚೇರಿಯಲ್ಲಿ ಹೂಮಾಲೆಯೊಂದಿಗೆ ಕಾರ್ಯಕರ್ತರನ್ನು ಸನ್ಮಾನಿಸಿದ ನಂತರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಹಿಂದೂ ವಿರೋಧಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡೆಸಿ ಜೈಲಿಗೆ ಹೋದ ಯುವಮೊರ್ಚಾದ ಎಂಟು ಕಾರ್ಯಕರ್ತರು 14 ದಿನಗಳ ನಂತರ ನ್ಯಾಯಾಲಯದಿಂದ ಜಾಮೀನು ಪಡೆದರು. ಇಂದು ಪಕ್ಷದ ಕಚೇರಿಯಲ್ಲಿ ಈ ಯುವ ಕ್ರಾಂತಿಕಾರಿಗಳನ್ನು ಸ್ವಾಗತಿಸಲಾಯಿತು. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡುತ್ತಲೇ ಇರುತ್ತಾರೆ” ಎಂದು ಗುಪ್ತಾ ಟ್ವೀಟ್ ಮಾಡಿದ್ದಾರೆ.
हिंदू विरोधी केजरीवाल के खिलाफ प्रदर्शन करते वक्त जेल गए भाजपा युवा मोर्चा के 8 कार्यकर्ताओं को 14 दिनों बाद कोर्ट द्वारा जमानत मिली।
आज प्रदेश कार्यालय में अपने इन युवा क्रांतिकारियों का स्वागत किया।
हमारा प्रत्येक कार्यकर्ता हिंदू विरोधी ताकतों के खिलाफ सदैव लड़ता रहेगा। pic.twitter.com/O3Lo6I9RRd
— Adesh Gupta (@adeshguptabjp) April 14, 2022
ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್ ಅವರ ಮನೆಯ ಸಿಸಿಟಿವಿ ಕ್ಯಾಮೆರಾಗಳು ಮತ್ತು ತಡೆಗೋಡೆಗಳನ್ನು ಹಾನಿ ಮಾಡಿದ್ದಾರೆಂದು ಆರೋಪಿಸಲಾಗಿದೆ. ‘ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ತೆರಿಗೆ ವಿನಾಯಿತಿಯನ್ನು ವಿರೋಧಿಸಿದ್ದ ಕೇಜ್ರಿವಾಲ್, ‘ಕಾಶ್ಮೀರ ಫೈಲ್ಸ್’ ಹೆಸರಲ್ಲಿ ನಿರ್ಮಾಪಕರು ಹಣ ದೋಚುತ್ತಿರುವುದನ್ನು ಉಲ್ಲೇಖಿಸಿದ್ದರು.
ಇದನ್ನೂ ಓದಿರಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?
ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. “ಪಂಜಾಬ್‌ನಲ್ಲಿ ಸೋತ ನಂತರ ಬಿಜೆಪಿಯು ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಿದೆ” ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು.
“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದರು.
RAW CCTV FOOTAGE EXPOSES #BJPKeGunde 🔥@ArvindKejriwal जी को हर धर्म के लोगों का समर्थन मिल रहा है, इसलिए BJP "देशभक्त केजरीवाल" पर हमला करवा रही है। pic.twitter.com/fQbESEQLy9
— AAP (@AamAadmiParty) March 30, 2022
ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದರು.
“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದ್ದರು.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಾರ್ಚ್ 31ರಂದು ಬಂಧಿಸಲಾಯಿತು. ನಂತರ ಕಾರ್ಯಕರ್ತರು ಜಾಮೀನು ಅರ್ಜಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅರ್ಜಿ ತಿರಸ್ಕೃತವಾದ ಕಾರಣ ಅವರು ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು.
ಕೇಜ್ರಿವಾಲ್ ಹೇಳಿದ್ದೇನು?
ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.
ಇದನ್ನೂ ಓದಿರಿ: ಪಂಜಾಬ್: ರಾಜ್ಯಸಭೆ ಅಭ್ಯರ್ಥಿಯಾಗಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ರನ್ನು ಆಯ್ಕೆ ಮಾಡಿದ ಎಎಪಿ
“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.
ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.



Yenthaha katukathana irbeku yee BJP ge nodi…. Sarina idella
ಬಿಜೆಪಿಯು ಗೂಂಡಾಗಿರಿಯನ್ನು ಪ್ರೋತ್ಸಾಹಿಸುತ್ತಿರುವುದು ಕಂಡನಾರ್ಹ.