Homeಮುಖಪುಟಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

- Advertisement -
- Advertisement -

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ “ಗೋವುಗಳ ಮೇವಿನ ವಿಚಾರದಲ್ಲೂ 40 ಕಮಿಷನ್‌” ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ಹಿಂದೂ ಧರ್ಮದ ಹೆಸರಲ್ಲಿ ರಾಜಕೀಯ ಧ್ರುವೀಕರಣ ಮಾಡಲು ಯತ್ನಿಸುವ ಬಿಜೆಪಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಒಂದೆಡೆ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರೆ, ಮತ್ತೊಂದೆಡೆ ಗೋವುಗಳ ಹಸಿವನ್ನು ನೀಗಿಸಲೆಂದು ಮೇವು ಸರಬರಾಜು ಮಾಡಿದ್ದವರನ್ನೂ ಕಮಿಷನ್‌ ಉರುಳಿಗೆ ಸಿಲುಕಿಸಿದೆ. ಗೋವಿನ ಮೇವಿನಲ್ಲೂ, ಮಠ ಮಾನ್ಯಗಳ ಅನುದಾನದಲ್ಲೂ ಪರ್ಸೆಂಟೇಜ್‌ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಎದುರಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದಾರೆ.

“ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಸ್ವಾಮೀಜಿ ಬೇಸರದಿಂದ ಮಾತನಾಡಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

‘‘ಈಗಂತೂ ನಾಡಿನಲ್ಲಿ ಬುದ್ಧಿಗೇಡಿ ಸರ್ಕಾರಗಳು ಬರುತ್ತಿವೆ” ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಸರ್ಕಾರದ ಮೇಲೆ ಕಮಿಷನ್‌ ಆರೋಪಗಳು ಒಂದಾದಾಗಿ  ಒಂದೊಂದಾಗಿ ಹೊರ ಬೀಳತೊಡಗಿವೆ. ಮಾಜಿ ಸಚಿವ ಈಶ್ವರಪ್ಪನವರು ಮಾತ್ರವಲ್ಲ, ಇತರ ಜನಪ್ರತಿನಿಧಿಗಳ ಮೇಲೂ ಇಂತಹದ್ದೇ ಆರೋಪಗಳು ಬರುತ್ತಿವೆ.

ಗೋವಿನ ಮೇವಿನಲ್ಲೂ ಕಮಿಷನ್‌!

ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರೂ.ಗಳನ್ನು ಪಾವತಿಸಲು ಕಂದಾಯ ಇಲಾಖೆಯ ಅಧೀನದಲ್ಲಿರುವ ಜಿಲ್ಲಾಧಿಕಾರಿಗಳು ಮತ್ತು ಪಶುಪಾಲನೆ, ಪಶು ವೈದ್ಯ ಇಲಾಖೆಯ ಉನ್ನತ ಅಧಿಕಾರಿಗಳು ಲಂಚ ಹಾಗೂ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆಂದು ಪ್ರಧಾನಿಯವರಿಗೆ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಮೂಲದ ಹರ್ಷ ಅಸೋಸಿಯೇಟ್ಸ್‌ನ ಜಿ.ಎಂ.ಸುರೇಶ್ ಎಂಬುವರು 2022ರ ಏಪ್ರಿಲ್‌ 14ರಂದು ದೂರು ನೀಡಿದ್ದಾರೆ. ಪಶುಪಾಲನೆ, ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಮಿಷನ್ ದಾಹವನ್ನು ದೂರಿನಲ್ಲಿ ತೆರೆದಿಟ್ಟಿದ್ದಾರೆ ಎಂದು ‘ದಿ ಫೈಲ್‌’ ಇತ್ತೀಚೆಗೆ ವರದಿ ಮಾಡಿದೆ.

ಗೋಶಾಲೆಗೆ ಮೇವು ಸರಬರಾಜು ಮಾಡಿರುವ ಸರಬರಾಜುದಾರರು ಸಚಿವ ಪ್ರಭು ಚೌವ್ಹಾಣ್‌ ಮತ್ತು ಇಲಾಖೆಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳಿಗೆ ಹಲವು ಬಾರಿ ಪತ್ರ ಬರೆದರೂ ಈ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಸರಬರಾಜುದಾರರು ಒಬ್ಬೊಬ್ಬರಾಗಿ ಪ್ರಧಾನಿ ನರೇಂದ್ರ ಮೋದಿಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

ಪ್ರಧಾನಿ ಕಚೇರಿಗೆ ದೂರು ಸಲ್ಲಿಸುವ ಮುನ್ನವೇ 2020ರಿಂದಲೂ ಬಾಕಿ ಇರುವ ಮೊತ್ತಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆದು ಸುಸ್ತಾಗಿದ್ದ ಜಿ.ಎಂ.ಸುರೇಶ್‌ ಈ ಹಿಂದೆ ಟ್ವೀಟ್ ಮಾಡಿದ್ದರು. ‘ಚಿಕ್ಕಬಳ್ಳಾಪುರ ಜಿಲ್ಲೆಯ ದನಗಳಿಗೆ ತಿನ್ನೋಕೆ ಮೇವು ಪೂರೈಸಿ ಬಿಲ್ಲು ಸಿಗದೇ  ಒಂದು ವರ್ಷದಿಂದ ಅಲೆದಾಡಿ ಈಗ ನಾವು ವಿಷ ತಗೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ’ ಎಂದು ಟ್ವೀಟ್ ಮಾಡಿದ್ದರು.

ಈಗ ಪ್ರಧಾನಿಯವರಿಗೆ ಪತ್ರ ಬರೆದಿರುವ ಸುರೇಶ್‌, “ಸರಬರಾಜುದಾರರು ಮೂರು ಲೋಡ್‌ ಮೇವನ್ನು ಸರಬರಾಜು ಮಾಡಿದ್ದರೂ ಲಂಚ ಮತ್ತು ಕಮಿಷನ್ ನೀಡದ ಕಾರಣಕ್ಕೆ ಅದನ್ನು ಒಂದು ಲೋಡ್‌ಗೆ ಪರಿವರ್ತಿಸಿದ್ದಾರೆ. ಇದು ಅನ್ಯಾಯ. ಕಮಿಷನ್ ಮತ್ತು ಲಂಚ ಕೊಡದಿರುವ ಸರಬರಾಜುದಾರರಿಗೆ ಮಾತ್ರ ಇಂತಹ ಅನ್ಯಾಯವಾಗುತ್ತಿದೆ. ಬಾಕಿ ಹಣವನ್ನು ಪಾವತಿಸಲು ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಲಾಗುತ್ತಿದೆ. ಸಾಲ ಮಾಡಿ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಆತ್ಮಹತ್ಯೆಯೊಂದೇ ದಾರಿ” ಎಂದು ತಿಳಿಸಿದ್ದಾರೆ. (‘ದಿ ಫೈಲ್’ ವರದಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...