Homeಕರ್ನಾಟಕಉಡುಪಿ: ಮೇ 7ರ ಶನಿವಾರದಂದು ಸೌಹಾರ್ದ ನಡಿಗೆ ಹಾಗೂ ಸಹಬಾಳ್ವೆ ಸಮಾವೇಶ

ಉಡುಪಿ: ಮೇ 7ರ ಶನಿವಾರದಂದು ಸೌಹಾರ್ದ ನಡಿಗೆ ಹಾಗೂ ಸಹಬಾಳ್ವೆ ಸಮಾವೇಶ

- Advertisement -
- Advertisement -

ರಾಜ್ಯದಾದ್ಯಂತ ಕೋಮು ದ್ವೇಷ ಹರಡುವ ಕೆಲಸವನ್ನು ದುಷ್ಕರ್ಮಿಗಳು ಮಾಡುತ್ತಿರುವ ಹಿನ್ನಲೆಯಲ್ಲಿ ನಾಡಿನ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿದು, ಸಾಮರಸ್ಯ ಸಾರುವ ಉದ್ದೇಶದಿಂದ ಕರಾವಳಿ ಪ್ರದೇಶದ ಜಿಲ್ಲೆಯಾದ ಉಡುಪಿಯಲ್ಲಿ ಮೇ 7ರ ಶನಿವಾರದಂದು ಸಹಬಾಳ್ವೆ ಉಡುಪಿ ಹಾಗೂ ರಾಜ್ಯದ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬೃಹತ್‌ ಸೌಹಾರ್ದ ನಡಿಗೆ ಹಾಗೂ ಸಹಬಾಳ್ವೆ ಸಮಾವೇಶ ನಡೆಯಲಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಮಾವೇಶದ ಸಂಚಾಲನಾ ಸಮಿತಿ “ಕರ್ನಾಟಕವು ಹಲವು ಶತಮಾನಗಳ ಕಾಲ ಹಲವು ಜಾತಿ, ಮತ, ವಿಚಾರ ಪಂಥಗಳ ಜನರು ಸೌಹಾರ್ದಯುತವಾಗಿ ಸಹಬಾಳ್ವೆ ನಡೆಸುತ್ತಿರುವ ನಾಡಾಗಿದೆ. ಆಯಾ ಕಾಲಗಳ ಕಷ್ಟ-ಸುಖಗಳನ್ನು ಜನರು ಸಹಬಾಳ್ವೆಯ ಚೇತನದಲ್ಲಿ ಹಂಚಿ ಬದುಕಿದ ನಾಡು ನಮ್ಮದು. ಆದರೆ, ಇತ್ತೀಚಿಗಿನ ದಶಕಗಳಲ್ಲಿ ಅಧಿಕಾರ ರಾಜಕಾರಣಕ್ಕಾಗಿ ಮತ ದ್ವೇಷ ಸೃಷ್ಟಿಸುವ ಕೆಲಸಗಳು ಹೆಚ್ಚಾಗಿ ನಾಡು ಹಿಂಸೆಯ ಉದ್ವೇಗವನ್ನು ಅನುಭವಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ವರ್ಷವಂತೂ, ಉಡುವ ಬಟ್ಟೆ, ದೈನಂದಿನ ವ್ಯಾಪಾರ ವ್ಯವಾಹಾರ, ತಿನ್ನುವ ತುತ್ತುಗಳಲ್ಲಿಯೂ ಮತ ಭೇದ ಸೃಷ್ಟಿಸಿ, ನಾಡಲ್ಲಿ ಮತ ದ್ವೇಷದ ದಳ್ಳುರಿಯನ್ನು ಹಬ್ಬಿಸುವ ಆತಂಕಕಾರಿ ವಿದ್ಯಮಾನಗಳನ್ನು ಕಾಣುತ್ತಿದ್ದೇವೆ. ಸೌಹಾರ್ದಯುತ ಸಹಬಾಳ್ವೆಯನ್ನು ಬಯಸುವ ಜನವರ್ಗವು ಎಚ್ಚೆತ್ತು ಸಹಬಾಳ್ವೆಯನ್ನು ಉಳಿಸಿ ಪೋಷಿಸುವ ಕಾರ್ಯದಲ್ಲಿ ತೊಡಗುವುದು ಕಾಲದ ತುರ್ತಾಗಿದೆ” ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

“ರಾಜ್ಯದಲ್ಲಿ ಸೌಹಾರ್ದಯುತ ಸಹಬಾಳ್ವೆಯನ್ನು ಬಯಸುವ ಪ್ರಗತಿಪರ ಸಂಘಟನೆಗಳು ಒಗ್ಗೂಡಿ, ‘ಸಹಬಾಳ್ವೆ ಉಡುಪಿ’ ಇದರ ಸಹಯೋಗದಲ್ಲಿ ಮೇ 7ರ ಶನಿವಾರದಂದು ‘ಸೌಹಾರ್ದ ನಡುಗೆ-ಸಹಬಾಳ್ವೆ ಸಮಾವೇಶ’ವನ್ನು ಆಯೋಜಿಸಲಾಗಿದೆ” ಎಂದು ಸಮಾವೇಶದ ಸಂಚಾಲನ ಸಮಿತಿ ತಿಳಿಸಿದ್ದು, ನಾಡಿನ ಸೌಹಾರ್ದ ಪರಂಪರೆಯನ್ನು ಉಳಿಸಲು, ರಾಜ್ಯಮಟ್ಟದ ಈ ಸಾಮರಸ್ಯ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ನಾಡಿನ ಜನತೆಯಲ್ಲಿ ಸಮಿತಿಯ ವಿನಂತಿಸಿದೆ.

ಸೌಹಾರ್ದ ಸಮಾವೇಶದ ಬಗ್ಗೆ ಈ ಹಿಂದೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ್ದ ‘ಸಹಬಾಳ್ವೆ ಉಡುಪಿ’ ತಂಡದ ಸಂಚಾಲಕ ಅಮೃತ ಶೆಣೈ, “ಉಡುಪಿಯಿಂದ ಹಲವಾರು ವಿವಾದಗಳು ಪ್ರಾರಂಭವಾಗಿದೆ. ಇದು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಅವುಗಳೆಲ್ಲವೂ ಬಹುತೇಕ ಸಾಮರಸ್ಯ ಕೆಡಿಸುವಂತ ವಿವಾದ ಹಾಗೂ ವಿಚಾರಗಳಾಗಿವೆ. ಹಾಗಾಗಿ ಶಾಂತಿ, ಸಾಮರಸ್ಯದ ಸಂದೇಶವನ್ನು ಉಡುಪಿಯಿಂದಲೇ ಸಾರಬೇಕು ಎಂಬ ಕಾರಣದಿಂದ ಇದನ್ನು ಹಮ್ಮಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದರು.

ಕಾರ್ಯಕ್ರಮದ ಅಂಗವಾಗಿ ಸೌಹಾರ್ಧ ಪಾದಯಾತ್ರೆ ಮತ್ತು ಬಹಿರಂಗ ಸಭೆ ನಡೆಯಲಿದ್ದು, ಮುಖ್ಯವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಹಾಗೂ ರಾಜಕೀಯೇತರ ನಾಯಕರುಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಅಮೃತ್‌ ಶೆಣೈ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...