Homeಮುಖಪುಟಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ರಾಜ್ಯದಲ್ಲಿ 'ಲವ್ ಜಿಹಾದ್' ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆದಿತ್ತು.

- Advertisement -
- Advertisement -

“ಜೋಯಿಸ್ನಾ ಮೇರಿ ಜೋಸೆಫ್ ಅವರು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಮಹಿಳೆ” ಎಂದು ಕೇರಳ ಹೈಕೋರ್ಟ್ ಹೇಳಿದೆ. ಜೋಯಿಸ್ನಾ ತಂದೆ ಜೋಸೆಫ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮಹತ್ವದ ಸೂಚನೆಗಳನ್ನು ನೀಡಿದೆ.

ಕೇರಳದ ಕ್ರಿಶ್ಚಿಯನ್ ಮಹಿಳೆ ಜೋಯಿಸ್ನಾ ಅವರು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ನಾಯಕ ಶೆಜಿನ್ ಅವರನ್ನು ಹೂಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ವಿವಾಹವಾದರು. ಇದನ್ನು ವಿರೋಧಿಸಿದ ಜೋಯಿಸ್ನಾ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದರು. (ಹೇಬಿಯಸ್ ಕಾರ್ಪಸ್ ಎನ್ನುವುದು ನ್ಯಾಯಾಲಯದ ಮುಂದೆ ನಿರ್ದಿಷ್ಟ ವ್ಯಕ್ತಿಯ ಹಾಜರಾತಿಗೆ ಸೂಚನೆ ನೀಡುವ ಅರ್ಜಿಯಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ, ಏಪ್ರಿಲ್ 19 ರಂದು ಜೋಯಿಸ್ನಾ ಅವರ ಪ್ರತಿಕ್ರಿಯೆಯನ್ನು ಆಲಿಸಿದ ಕೇರಳ ಹೈಕೋರ್ಟ್, ಜೋಯಿಸ್ನಾ ಮತ್ತು ಶೆಜಿನ್ ಒಟ್ಟಿಗೆ ಇರಲು ಅನುಮತಿ ನೀಡಿತು. ಶನಿವಾರ ನ್ಯಾಯಾಲಯದಿಂದ ಸಮನ್ಸ್ ಪಡೆದ ಜೋಯಿಸ್ನಾ ಅವರು ನ್ಯಾಯಮೂರ್ತಿಗಳಾದ ವಿಜಿ ಅರುಣ್, ಸಿಎಸ್ ಸುಧಾ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿದ್ದರು. ಪೀಠವು ನೇರವಾಗಿ ಜೋಯಿಸ್ನಾ ಅವರೊಂದಿಗೆ ಮಾತನಾಡಿತು. ತನ್ನ ಸ್ವಂತ ಇಚ್ಛೆಯಿಂದಲೇ ಮದುವೆಯಾಗಿದ್ದೇನೆ. ತನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ನ್ಯಾಯಾಲಯಕ್ಕೆ ಜೋಯಿಸ್ನಾ ಸ್ಪಷ್ಟಪಡಿಸಿದರು.

“ಆಕೆಯನ್ನು ಅಪಹರಿಸಲಾಗಿದೆ. ಶೆಜಿನ್ ಮತ್ತು ಜೋಯಿಸ್ನಾ ದೇಶವನ್ನು ತೊರೆಯುವ ಸಾಧ್ಯತೆಯಿದೆ” ಎಂದು ಜೋಯಿಸ್ನಾ ತಂದೆ ಜೋಸೆಫ್ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಅವರು ವಿದೇಶಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಆಕೆಗೆ ಬಿಟ್ಟದ್ದು” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಬ್ಬರು ವ್ಯಕ್ತಿಗಳು ಮದುವೆಯಾಗಲು ನಿರ್ಧರಿಸಿದಾಗ ಅದರ ಮಧ್ಯಸ್ಥಿಕೆ ವಹಿಸಲು ನ್ಯಾಯಾಲಯಕ್ಕೆ ಮಿತಿಗಳಿವೆ. ಜೋಯಿಸ್ನಾರನ್ನು ಬಲವಂತಪಡಿಸಲಾಗಿದೆ ಎಂದು ಹೇಳಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾದ ದಂಪತಿಗಳು ಮುಂದೆ ಏನು ಮಾಡಬೇಕೆಂದು ನಿರ್ಧರಿಸಲಿ. ಜೋಯಿಸ್ನಾ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮಹಿಳೆ. ಆಕೆಗೆ 26 ವರ್ಷ ವಯಸ್ಸು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ, ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಶೆಜಿನ್ ಮತ್ತು ಜೋಯಿಸ್ನಾ ಏಪ್ರಿಲ್ 12ರಂದು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡಿದ್ದರು. ಮದುವೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದರು. ಜೋಯಿಸ್ನಾರನ್ನು ಆಕೆಯ ತಾಯಿಯ ಮನೆಗೆ ಕರೆತರುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಆಕೆಯ ತಂದೆ ಜೋಸೆಫ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆಯಿತು.

‘ಲವ್-ಜಿಹಾದ್’ ಎಂಬುದು ಬಲಪಂಥೀಯರು ಹರಡಿರುವ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಹಿಂದೂ ಯುವತಿಯರನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಮಾಡುತ್ತಾರೆಂದು ಹಬ್ಬಿಸಲಾಗಿದೆ. ಜೋಯಿಸ್ನಾ ವಿಚಾರದಲ್ಲಿಯೂ ಹೀಗೆಯೇ ಆಗಿದ್ದು, ಆದರೆ ಜೋಯಿಸ್ನಾ ತನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದು ಸ್ಪಷ್ಟವಾಗಿದೆ.

ಜೋಯಿಸ್ನಾ ಅವರೊಂದಿಗೆ ಓಡಿಹೋಗುವ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವಿನ “ಕೋಮು ಸೌಹಾರ್ದತೆಯನ್ನು ಕದಡುವ” ಶೆಜಿನ್ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಪಿಐ (ಎಂ) ಕೋಯಿಕೋಡ್‌‌ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಎಂ ಥಾಮಸ್ ಹೇಳಿದಾಗ ವಿಷಯ ವಿವಾದದ ಸ್ವರೂಪ ಪಡೆಯಿತು.

“ಇಬ್ಬರು ಪ್ರೀತಿಸುತ್ತಿದ್ದರೆ, ಶೆಜಿನ್ ಪಕ್ಷಕ್ಕೆ ತಿಳಿಸಬೇಕಾಗಿತ್ತು, ಆದರೆ ಆತ ಹಾಗೆ ಮಾಡದೆ ಜೋಯಿಸ್ನಾ ಜೊತೆ ಓಡಿಹೋದನು. ಇದು ಕೋಮು ಸೌಹಾರ್ದತೆಗೆ ಭಂಗ ತರಬಹುದು” ಎಂದಿದ್ದ ಜಾರ್ಜ್, “ಲವ್ ಜಿಹಾದ್ ನಡೆಯುತ್ತಿದೆ” ಎಂದೂ ಪ್ರತಿಪಾದಿಸಿದ್ದರು. ನಂತರ ಮೀಡಿಯಾ ಒನ್ ಜೊತೆ ಮಾತನಾಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ದೂರಿದ್ದರು.

ವರದಿ ಕೃಪೆ: ನ್ಯೂಸ್ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...