Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...