Homeರಾಷ್ಟ್ರೀಯಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

ಇಂಗ್ಲೇಂಡ್‌‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಭೇಟಿ ವೇಳೆ ಪರದೆ ಕಟ್ಟಿ ಸ್ಲಂಗಳನ್ನು ಮರೆಮಾಚಿದ ಗುಜರಾತ್‌‌!

- Advertisement -
- Advertisement -

ಇಂಗ್ಲೇಂಡ್‌‌‌ ಪ್ರಧಾನಿ ಬೋರಿಸ್ ಜಾನ್ಸನ್‌ ಅವರು ಗುರುವಾರದಂದು ಗುಜರಾತ್‌‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ ಮಾರ್ಗದಲ್ಲಿ ದೊಡ್ಡ ಗಾತ್ರದ ಬಿಳಿ ಪರದೆಗಳನ್ನು ಕಟ್ಟಿ ಸ್ಲಂಗಳು ಕಾಣದಂದತೆ ಕಟ್ಟಲಾಗಿತ್ತು. ಅದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ‘ಗುಜರಾತ್‌ ಮಾಡೆಲ್‌‌’ ಎಂದು ಜನರು ವ್ಯಂಗ್ಯವಾಗಿದ್ದಾರೆ.

ಇಂಗ್ಲೇಂಡ್‌‌ ಪ್ರಧಾನಿ ತಮ್ಮ ಭಾರತ ಪ್ರವಾಸದ ಮೊದಲ ದಿನದಂದು ಗುಜರಾತ್‌ಗೆ ಭೇಟಿ ನೀಡಿದ್ದರು. ಅವರ ಭೇಟಿಯ ನಂತರ ಈ ಬಟ್ಟೆಯ ಪರದೆಗಳನ್ನು ತೆಗೆಯಲಾಗಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತೆ ಅಥವಾ ಜಿಲ್ಲಾಡಳಿತ ಮಾಡಿತ್ತೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿತ್ರನಿರ್ಮಾಪಕ ವಿನೋದ್ ಕಪ್ರಿ ಅವರು ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನರೇಂದ್ರ ಮೋದಿಯವರೇ, ನೀವು 12 ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದೀರಿ. 8 ವರ್ಷಗಳಿಂದ ದೇಶದ ಪ್ರಧಾನಿಯಾಗಿದ್ದೀರಿ. ಆದರೂ, ಬೋರಿಸ್‌ ಜೋನ್ಸನ್‌ ಅವರಿಗೆ ಇದನ್ನು ತೋರಿಸಲು ನಿಮಗೆ ನಾಚಿಕೆಯಾಗುವುದು ಏನಿದೆ?” ಎಂದು ಅವರು ವಿಡಿಯೊ ಜೊತೆಗೆ ಬರೆದುಕೊಂಡಿದ್ದಾರೆ.

ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್  ಅವರು ಗುರುವಾರ ಸಂಜೆ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬಿಳಿ ಪರದೆಗಳನ್ನು ತೆಗೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೊದಲ್ಲಿ ಸ್ಲಂಗಳಲ್ಲಿ ಇರುವ ಗುಡಿಸಲುಗಳು ಮತ್ತು ಹಿಂದೆ ನಿಲ್ಲಿಸಿದ ವಾಹನಗಳನ್ನು ಕಾಣುತ್ತದೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಪ್ರಧಾನಿ ಮೋದಿಯೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದರು. ಈ ಬಗ್ಗೆ ಬರೆದಿರುವ ಅವರು “ಜಾನ್ಸನ್ ಹೊರಡುತ್ತಿದ್ದಂತೆ ಪರದೆಗಳನ್ನು ತೆಗೆಯಲಾಗುತ್ತಿವೆ” ಎಂದು ಬರೆದಿದ್ದಾರೆ.

ತಮ್ಮ ಎರಡು ದಿನಗಳ ಭಾರತದ ಪ್ರವಾಸಕ್ಕಾಗಿ ಬೋರಿಸ್‌ ಜಾನ್ಸನ್ ಅವರು ಗುರುವಾರದಂದು ಗುಜರಾತ್‌ಗೆ ಬಂದಿಳಿದಿದ್ದರು. ಅವರು ಅಹಮದಾಬಾದ್‌ನ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತವನ್ನು ಪಡೆದು, ಮಹಾತ್ಮ ಗಾಂಧಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಗಾಂಧಿಯವರ ಪ್ರಸಿದ್ಧ ಚರಕ ಜೊತೆ ಕುಳಿತು ಪೋಸ್ ನೀಡಿದರು.

ಅವರ ಗುಜರಾತ್ ಭೇಟಿಯನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಆಯೋಜಿಸಿದ್ದರು. ಬೋರಿಸ್‌ ಅವರು ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗಿ, ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನಗಳನ್ನು ಸಹ-ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಅದಾನಿ ಗ್ರೂಪ್ ಮತ್ತು ಬ್ರಿಟಿಷ್ ಕಂಪನಿಗಳು ಹೇಗೆ ಸಹಕರಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ.

ಕೊರೊನಾ ಸಮಯದಲ್ಲಿ ಭಾರತಕ್ಕೆ ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಅವರು ಗುಜರಾತ್‌ಗೆ ಭೇಟಿ ನೀಡಿದಾಗ ಈ ಸ್ಲಂಗಳು ಕಾಣದಂತೆ ದೊಡ್ಡ ಗೋಡೆಗಳನ್ನು ಕಟ್ಟಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...