ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ತನ್ನ ಸ್ಥಾನಕ್ಕೆ ಹಠಾತ್ ರಾಜೀನಾಮೆಯ ನೀಡಿದ್ದಾರೆ. ಇದರ ನಂತರ ಒಕ್ಕೂಟ ಸರ್ಕಾರವು ಸುಮನ್ ಕೆ. ಬೆರಿ ಅವರನ್ನು ಆಯೋಗದ ಉಪಾಧ್ಯಕ್ಷರನ್ನಾಗಿ ಶುಕ್ರವಾರ ನೇಮಿಸಿದೆ. ಬೆರಿ ಅವರು ಮೇ 1, 2022 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಆದೇಶ ತಿಳಿಸಿದೆ. ರಾಜೀವ್ ಕುಮಾರ್ ಅವರ ಅಧಿಕಾರಾವಧಿ ಏಪ್ರಿಲ್ 30ಕ್ಕೆ ಕೊನೆಗೊಳ್ಳಲಿದೆ.
ಖ್ಯಾತ ಅರ್ಥಶಾಸ್ತ್ರಜ್ಞರಾದ ರಾಜೀವ್ ಕುಮಾರ್ ಅವರು 2017ರ ಆಗಸ್ಟ್ ತಿಂಗಳಲ್ಲಿ ನೀತಿ ಆಯೋದಗದ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರಿಗೂ ಮುಂಚೆ ಅರವಿಂದ್ ಪನಗಾರಿಯಾ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸರ್ಕಾರದ ಆದೇಶದ ಪ್ರಕಾರ, ರಾಜೀವ್ ಕುಮಾರ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ಏಪ್ರಿಲ್ 30 ರಿಂದ ಜಾರಿಗೆ ಬರುವಂತೆ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗುತ್ತದೆ.
ಇದನ್ನೂ ಓದಿ: ಉಕ್ರೇನ್ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!
ಕೃಷಿ, ಆಸ್ತಿ ಹಣಗಳಿಕೆ, ಹೂಡಿಕೆ, ಎಲೆಕ್ಟ್ರಿಕ್ ವಾಹನಗಳ ಮೇಲೆ ಕೇಂದ್ರೀಕರಿಸಿ ನೀತಿ ಆಯೋಗದ ನೀತಿ ರಚನೆಯಲ್ಲಿ ರಾಜೀವ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಡಿಪಿಲ್ ಮತ್ತು ಲಕ್ನೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ.
ರಾಜೀವ್ ಕುಮಾರ್ ಅವರು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಹಿರಿಯ ಸಹೋದ್ಯೋಗಿಯಾಗಿದ್ದರು.
ಹೊಸದಾಗಿ ಅಧಿಕಾರ ವಹಿಸುತ್ತಿರುವ ಸುಮನ್ ಕೆ. ಬೆರಿ ಅವರು ಈ ಹಿಂದೆ ನವದೆಹಲಿಯ ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ (NCAER) ನ ಡೈರೆಕ್ಟರ್-ಜನರಲ್ (ಮುಖ್ಯ ಕಾರ್ಯನಿರ್ವಾಹಕ) ಆಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ: ರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ
ಅವರು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ, ಅಂಕಿಅಂಶ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಆಗಿದ್ದರು.


