Homeಮುಖಪುಟಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

ಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮನೆಯೊಂದರಲ್ಲಿ ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಖವಾಜ್‌ಪುರ ಪ್ರದೇಶದಲ್ಲಿ ಘಟನೆ ನಡೆದಿದೆ. ರಾಮ್ ಕುಮಾರ್ ಯಾದವ್ (55), ಅವರ ಪತ್ನಿ ಕುಸುಮ್ ದೇವಿ (52), ಮಗಳು ಮನೀಶಾ (25), ಸೊಸೆ ಸವಿತಾ (27) ಮತ್ತು ಮೊಮ್ಮಗಳು ಮೀನಾಕ್ಷಿ (2) ಕೊಲೆಯಾದವರು.

ಇನ್ನೋರ್ವ ಮೊಮ್ಮಗಳು ಸಾಕ್ಷಿ (5) ಬದುಕುಳಿದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದವ್ ಅವರ ಮಗ ಸುನೀಲ್ (30) ಘಟನೆಯ ಸಮಯದಲ್ಲಿ ಮನೆಯಲ್ಲಿರಲಿಲ್ಲ, ಆದರೆ ತನಿಖೆಗೆ ಸಹಕರಿಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಾ ಐವರ ತಲೆಗೂ ಹೊಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಭೀಕರ ಪ್ರಕರಣದ ತನಿಖೆಗಾಗಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಂತಕರ ಸುಳಿವುಗಳನ್ನು ಸಂಗ್ರಹಿಸಲು ಶ್ವಾನದಳ ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಖತ್ರಿ ವಿವರಣೆಗಳನ್ನು ಪಡೆದುಕೊಂಡಿದ್ದಾರೆ.

“ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರಿಗೆ ಪ್ರಾಥಮಿಕವಾಗಿ ಮಾಹಿತಿ ನೀಡಲಾಯಿತು. ಪೊಲೀಸರು ಮತ್ತು ಅಗ್ನಿಶಾಮಕ ತಂಡಗಳು ತಕ್ಷಣ ಧಾವಿಸಿವು. ಯಾದವ್ ಮತ್ತು ಇತರರ ಶವಗಳು ಮನೆಯಲ್ಲಿ ಪತ್ತೆಯಾಗಿವೆ. ಚಿಕ್ಕ ಹುಡುಗಿ ಮತ್ತು ಆಕೆಯ ತಾಯಿಯ ಶವಗಳು ಬೆಂಕಿ ಹೊತ್ತಿಕೊಂಡ ಕೋಣೆಯ ಸಮೀಪದಲ್ಲಿವೆ. ಯಾದವ್ ಮತ್ತು ಅವರ ಪತ್ನಿ ಇನ್ನೂ ಉಸಿರಾಡುತ್ತಿದ್ದರು, ನಂತರ ಅವರ ಮಗಳ ಮೃತದೇಹ ಪತ್ತೆಯಾಗಿದೆ. ಯಾವುದೇ ದ್ವೇಷಕ್ಕಾಗಿ ಕೊಲೆ ಮಾಡಲಾಗಿದೆಯೇ ಎಂಬ ಮಾಹಿತಿ ದೊರೆತ್ತಿಲ್ಲ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳೀಯ ನಿವಾಸಿಗಳ ಆಕ್ರೋಶವನ್ನು ಎದುರಿಸಬೇಕಾಯಿತು. ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಜಿಲ್ಲೆಯಲ್ಲಿ ಭೀಕರ ಅಪರಾಧ ಕೃತ್ಯ ನಡೆದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಏಪ್ರಿಲ್ 16 ರಂದು, ಖಗಲ್ಪುರ ಗ್ರಾಮದಲ್ಲಿ, 38 ವರ್ಷದ ಮಹಿಳೆ ಪ್ರೀತಿ ತಿವಾರಿ ಮತ್ತು ಅವರ ಮೂವರು ಪುತ್ರಿಯರಾದ ಮಹಿ (12), ಪಿಹು (8) ಮತ್ತು ಕುಹು (3) ಅವರ ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಪ್ರೀತಿ ತಿವಾರಿಯ ಪತಿ ರಾಹುಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳದಲ್ಲಿ ಡೆತ್‌ನೋಟ್‌ ಕೂಡ ಇತ್ತು. ರಾಹುಲ್ ಬರೆದಿದ್ದ ಈ ಪತ್ರದಲ್ಲಿ, ಅತ್ತೆಯ ಮಾನಸಿಕ ಕಿರುಕುಳದ ಕುರಿತು ಪ್ರಸ್ತಾಪಿಸಲಾಗಿತತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...