Homeಕರ್ನಾಟಕಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಸುಳ್ಳು ಮಾಹಿತಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು

- Advertisement -
- Advertisement -

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಪ್ರಿಲ್‌ 5ರ ಸೋಮವಾರ ಮಧ್ಯರಾತ್ರಿ ನಡೆದ ದಲಿತ ಯುವಕ ಚಂದ್ರು ಕೊಲೆಯು, ಉರ್ದು ಭಾಷೆಯ ಕಾರಣಕ್ಕೆ ಸಂಭವಿಸಿಲ್ಲ ಎಂದು ಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಮೃತ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್‌ ಜೊತೆಗೆ ಊಟಕ್ಕೆ ತೆರಳಿ ಬೈಕ್‌ನಲ್ಲಿ ಹಿಂದಿರುಗುತ್ತಿರುವಾಗ, ಮತ್ತೊಂದು ಕಡೆಯಿಂದ ಬಂದ ಆರೋಪಿ ಶಾಹಿದ್‌ ಚಾಲನೆ ಮಾಡುತ್ತಿದ್ದ ಬೈಕ್‌‌ ಪರಸ್ಪರ ತಗುಲಿತ್ತು. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ನಂತರ ಗಲಾಟೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಗಲಾಟೆಗೆ ಇತರರು ಸೇರಿಕೊಂಡಿದ್ದರು. ಇದರ ನಂತರ ಆರೋಪಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದನು. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಅವರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್‌ 6 ರಂದು 3 ಜನ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

ಕೊಲೆಗೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲ ಎಂದು ಕೇಂದ್ರ ಗುಪ್ತಚರ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ವಾರ್ತಾಭಾರತಿ ಉಲ್ಲೇಖಿಸಿದ್ದು, “ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ. ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಚಂದ್ರು ಕೊಲೆ ನಡೆದ ನಂತರ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರು ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಘಟನೆ ಕುರಿತು ಆರಂಭದಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ 

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯ ಪ್ರವೇಶಿಸಿದ್ದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

ಇದರ ನಂತರ ಎಚ್ಚೆತ್ತುಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ” ಎಂದು ತನ್ನ ಹಳೆಯ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಗೃಹ ಸಚಿವರ ಈ ಬೇಜವಾಬ್ದಾರಿ ಹೇಳಿಕೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...