Homeರಾಷ್ಟ್ರೀಯಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ...

ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

- Advertisement -
- Advertisement -

ಕೊರೊನಾ ಸಾಂಕ್ರಮಿಕದ ನಡುವೆಯು ವಿಶ್ವದಾದ್ಯಂತ ಸೈನ್ಯಗಳಿಗೆ ಮಾಡಿರುವ ಖರ್ಚು 2021ರಲ್ಲಿ ಸಾರ್ವಕಾಲಿಕ ಗರಿಷ್ಠ ಮೊತ್ತವನ್ನು ತಲುಪಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ಸೋಮವಾರ ಹೇಳಿದೆ. ಈ ಮೊತ್ತವು 2.1 ಟ್ರಿಲಿಯನ್‌ ಡಾಲರ್‌‌ ಎಂದು ಅದು ಹೇಳಿದೆ. ವಿಶ್ವದಲ್ಲಿ ಸೈನ್ಯಕ್ಕೆ ಅತೀ ಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಅಮೆರಿಕಾ, ಚೀನಾ ನಂತರ ಭಾರತವು ಮೂರನೇ ಸ್ಥಾನದಲ್ಲಿ ಇದೆ ಎಂದು SIPRI ಹೇಳಿದೆ.

“ಒಟ್ಟು ಜಾಗತಿಕ ಮಿಲಿಟರಿ ವೆಚ್ಚವು 2021 ರಲ್ಲಿ 0.7% ದಷ್ಟು ಹೆಚ್ಚಾಗಿದ್ದು, 2113 ಬಿಲಿಯನ್‌ ಅಮೆರಿಕನ್‌ ಡಾಲರ್‌ ತಲುಪಿದೆ. ಅಮೆರಿಕಾ, ಚೀನಾ, ಭಾರತ, ಇಂಗ್ಲೇಂಡ್‌ ಮತ್ತು ರಷ್ಯಾ 2021 ರಲ್ಲಿ ಸೈನ್ಯದ ಮೇಲೆ ಅತೀ ಹೆಚ್ಚು ಖರ್ಚು ಮಾಡಿರುವ ದೇಶಗಳಾಗಿವೆ. ಈ ಐದು ದೇಶಗಳು ಒಟ್ಟಾಗಿ 62% ದಷ್ಟು ಖರ್ಚು ಮಾಡಿವೆ” ಸ್ಟಾಕ್‌ಹೋಮ್ ತನ್ನ ಹೇಳಿಕೆಯಲ್ಲಿ ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಆರ್ಥಿಕ ಕುಸಿತದ ನಡುವೆಯೂ, ವಿಶ್ವ ಮಿಲಿಟರಿ ವೆಚ್ಚವು ದಾಖಲೆಯ ಮಟ್ಟವನ್ನು ತಲುಪಿದೆ” ಎಂದು SIPRI ಯ ಮಿಲಿಟರಿ ವೆಚ್ಚ ಮತ್ತು ಶಸ್ತ್ರಾಸ್ತ್ರ ಉತ್ಪಾದನಾ ಕಾರ್ಯಕ್ರಮದ ಹಿರಿಯ ಸಂಶೋಧಕ ಡಾ ಡಿಯಾಗೋ ಲೋಪೆಸ್ ಡಾ ಸಿಲ್ವಾ ಹೇಳಿದ್ದಾರೆ.

ಇದನ್ನೂ ಓದಿ: ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

2021 ರಲ್ಲಿ ಅಮೇರಿಕಾ ತನ್ನ ಸೈನ್ಯಕ್ಕೆ 801 ಬಿಲಿಯನ್‌‌ ಡಾಲರ್‌‌‌ ಖರ್ಚು ಮಾಡಿದ್ದು, 2020 ಕ್ಕೆ ಹೋಲಿಸಿದರೆ ಇದು 1.4% ದಷ್ಟು ಕಡಿಮೆಯಾಗಿದೆ ಎಂದು ಹೇಳಿಕೆ ತಿಳಿಸಿದೆ. 2012 ರಿಂದ 2021 ರ ಅವಧಿಯಲ್ಲಿ, ಅಮೆರಿಕಾ ಮಿಲಿಟರಿ ಸಂಶೋಧನೆ ಮತ್ತು ಅಭಿವೃದ್ಧಿಗೆ 24% ದಷ್ಟು ಹಣವನ್ನು ಹೆಚ್ಚಿಸಿದೆ. ಶಸ್ತ್ರಾಸ್ತ್ರ ಖರೀದಿಯ ಮೇಲಿನ ವೆಚ್ಚವನ್ನು 6.4% ದಷ್ಟು ಕಡಿಮೆ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡನೇ ಸ್ಥಾನದಲ್ಲಿರುವ ಚೀನಾಕ್ಕೆ 293 ಶತಕೋಟಿ ಡಾಲರ್‌ಗಳನ್ನು ಖರ್ಚು ಮಾಡಿದೆ. 2020 ಹೋಲಿಸಿದರೆ 4.7% ಹೆಚ್ಚಳವಾಗಿದೆ.

ಭಾರತದ ಮಿಲಿಟರಿ ವೆಚ್ಚವು ಕಳೆದ ವರ್ಷ 7,660 ಕೋಟಿ ಡಾಲರ್‌ ಇದ್ದು ಮೂರನೇ ಸ್ಥಾನದಲ್ಲಿದೆ. 2020 ಕ್ಕೆ ಹೋಲಿಸಿದರೆ ಈ ಮೊತ್ತವು 0.9% ಹೆಚ್ಚಳವಾಗಿದೆ.

ಇದನ್ನೂ ಓದಿ: ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಸ್ಟಾಕ್‌ಹೋಮ್ ಮೂಲದ ಸಂಸ್ಥೆಯ ಪ್ರಕಾರ, 7,660 ಕೋಟಿ ಡಾಲರ್‌ ಭಾರತದ ಸೈನ್ಯದ ವೆಚ್ಚವು ವಿಶ್ವದಲ್ಲೇ ಮೂರನೇ ಅತ್ಯಧಿಕ ಸ್ಥಾನದಲ್ಲಿದೆ. ಇದು 2020 ರಿಂದ 0.9% ರಷ್ಟು ಮತ್ತು 2012 ರಿಂದ 33% ರಷ್ಟು ಹೆಚ್ಚಾಗಿದೆ. ಸ್ಥಳೀಯ ಶಸ್ತ್ರಾಸ್ತ್ರ ಉದ್ಯಮವನ್ನು ಬಲಪಡಿಸುವ ಪ್ರಯತ್ನದಲ್ಲಿರುವ ಭಾರತವು, 2021 ರ ಮಿಲಿಟರಿ ಬಜೆಟ್‌ನಲ್ಲಿ 64% ಬಂಡವಾಳವನ್ನು ದೇಶೀಯವಾಗಿ ಉತ್ಪಾದಿಸಿದ ಶಸ್ತ್ರಾಸ್ತ್ರಗಳ ಸ್ವಾಧೀನಕ್ಕೆ ಮೀಸಲಿಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...