Homeಮುಖಪುಟಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

- Advertisement -
- Advertisement -

ಎರಡು ಟ್ವೀಟ್‌ಗಳ ಕುರಿತು ಸ್ಥಳೀಯ ಬಿಜೆಪಿ ನಾಯಕರೊಬ್ಬರು ಬಾರ್‌ಪೇಟಾದಲ್ಲಿ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಅಸ್ಸಾಂ ನ್ಯಾಯಾಲಯವು ಗುಜರಾತ್‌ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರಿಗೆ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ, ಮತ್ತೊಮ್ಮೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದು ಬೇರೆಯೇ ಪ್ರಕರಣವೆಂದೂ ಹೇಳಲಾಗುತ್ತಿದೆ.

ಕೆಲವು ವರದಿಗಳು ಎರಡನೇ ಬಂಧನವನ್ನು ಅದೇ ಟ್ವೀಟ್‌ಗಳಿಗೆ ಲಿಂಕ್ ಮಾಡಲಾಗಿದೆ ಎಂದಿವೆ. ಟ್ವೀಟ್‌ಗಳು ಕೋಮು ಶಾಂತಿಗೆ ಕರೆ ನೀಡಿವೆ. ಆದರೆ ನರೇಂದ್ರ ಮೋದಿಯವರನ್ನು ‘ಗೋಡ್ಸೆ ಆರಾಧಕ’ ಮತ್ತು ಆರ್‌ಎಸ್‌ಎಸ್ ಅನ್ನು “ದೇಶದ್ರೋಹಿ” ಎಂದು ಟೀಕಿಸಿದ್ದರೆಂದು ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇವಾನಿ ಅವರನ್ನು ಸೋಮವಾರ ಮಧ್ಯಾಹ್ನ ಪಶ್ಚಿಮ ಅಸ್ಸಾಂನ ಬಾರ್ಪೇಟಾ ಜಿಲ್ಲೆಯಲ್ಲಿ ಕೋಕ್ರಜಾರ್‌ನ ನ್ಯಾಯಾಲಯ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ ಮತ್ತೆ ಬಂಧಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಾಸಕರ ಆಕ್ಷೇಪಾರ್ಹ ಟ್ವೀಟ್‌ಗೆ ಕ್ರಮ ಕೈಗೊಳ್ಳುವಂತೆ ಕೋಕ್ರಜಾರ್‌ನಲ್ಲಿ ಬಿಜೆಪಿ ನಾಯಕರೊಬ್ಬರು ಎಫ್‌ಐಆರ್ ದಾಖಲಿಸಿದ ನಂತರ ಅಸ್ಸಾಂ ಪೊಲೀಸರ ತಂಡ ಗುರುವಾರ ಗುಜರಾತ್‌ನ ಪಾಲನ್‌ಪುರದಿಂದ ಮೇವಾನಿ ಅವರನ್ನು ಬಂಧಿಸಿತ್ತು.

ಕೋಕ್ರಜಾರ್ ನ್ಯಾಯಾಲಯವು ಭಾನುವಾರ ಅವರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ ಮತ್ತು ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಕ್ರಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇವಾನಿಗೆ ಸೋಮವಾರ ಬೆಳಗ್ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಲಾಗಿದೆ.

ಕೂಡಲೇ ಬಾರ್ಪೇಟಾದಿಂದ ಪೊಲೀಸ್ ತಂಡ ಬಂದು ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಿತು. ಅವರ ವಿರುದ್ಧದ ಹೊಸ ಆರೋಪಗಳೇನು ಎಂಬುದನ್ನು ಬರೆಪ್ಟಾ ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಕೊಕ್ರಜಾರ್ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಮೇವಾನಿ ಅವರು, ತಮ್ಮ ಪ್ರತಿಷ್ಠೆಯನ್ನು ಹಾಳುಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ “ಸೇಡಿನ ರಾಜಕೀಯ” ಎಂದು ಆರೋಪಿಸಿದ್ದಾರೆ.

ಇದನ್ನು ಅವರು ವ್ಯವಸ್ಥಿತವಾಗಿ ಮಾಡುತ್ತಾ ಬಂದಿದ್ದಾರೆ. ರೋಹಿತ್ ವೇಮುಲಾಗೆ ಮಾಡಿದ್ದಾರೆ. ಚಂದ್ರಶೇಖರ್ ಆಜಾದ್‌ಗೆ ಮಾಡಿದ್ದಾರೆ. ಈಗ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮೇವಾನಿ ಕೊಕ್ರಜಾರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಜೆಪಿ ನಾಯಕ ಅರೂಪ್ ಕುಮಾರ್ ಡೇ ಅವರು ಏಪ್ರಿಲ್ 18 ರಂದು ತಮ್ಮ ಎಫ್‌ಐಆರ್‌ನಲ್ಲಿ, “ಮೇವಾನಿ ಅವರ ಟ್ವೀಟ್‌ಗಳು ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಜನಸಾಮಾನ್ಯರನ್ನು ಪ್ರಚೋದಿಸುವ ಸಾಧ್ಯತೆಯಿದೆ” ಎಂದು ಆರೋಪಿಸಿದ್ದಾರೆ. ಆದಾಗ್ಯೂ, ವಿಧಾನಸಭೆ ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ಹೆಚ್ಚುತ್ತಿರುವ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಮೇವಾನಿ ಅವರನ್ನು ಬಂಧಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎಎಪಿಯನ್ನು ಹತ್ತಿಕ್ಕಲು ಬಿಜೆಪಿ ಆಪರೇಷನ್ ಜಾದು ಆರಂಭಿಸಿದೆ..’; ಅರವಿಂದ್ ಕೇಜ್ರಿವಾಲ್

0
"ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕರೊಂದಿಗೆ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಯೋಜಿತ...