Homeಕರ್ನಾಟಕತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ದೌರ್ಜನ್ಯದ ಕುರಿತು ದೂರು ನೀಡಿದರೂ ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ದಲಿತರು ಆರೋಪಿಸಿದ್ದಾರೆ

- Advertisement -
- Advertisement -

ಮುಜರಾಯಿ ಇಲಾಖೆಗೆ ಸೇರಿದ ದೇವರ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಪರಿಶಿಷ್ಠ ಜಾತಿ ಸಮುದಾಯದವರು ವಾಸಿಸುವ ಕಾಲೊನಿಗೆ ಕಳುಹಿಸಲು ಒಪ್ಪದೆ ಜಾತಿ ದೌರ್ಜನ್ಯ ಎಸಗಿರುವ ಘಟನೆ ತುಮಕೂರಿನ ಹುಣಸೆಘಟ್ಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ದೇವರ ಮೆರವಣಿಗೆಯನ್ನು ತಮ್ಮ ಕೇರಿಗೆ ಕಳುಹಿಸಿ ಎಂದು ಕೇಳಿಕೊಂಡರೂ ಅದಕ್ಕೆ ಒಪ್ಪದ ಸವರ್ಣೀಯರು, ದಲಿತರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ಧಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆನ್ನೂ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹುಣಸೆಘಟ್ಟ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯದಲ್ಲಿ ವರ್ಷ ಪ್ರತಿ ನಡೆಯುವಂತೆ ಈ ವರ್ಷವೂ ಎಪ್ರಿಲ್‌ 22 ರಿಂದ 24ರ ವರೆಗೆ ಜಾತ್ರೆ ನಡೆದಿತ್ತು. ಜಾತ್ರೆಯಲ್ಲಿ ಗ್ರಾಮದ ದೇವರುಗಳಾದ ಆಂಜನೇಯ ಸ್ವಾಮಿ ಹಾಗೂ ದೊಡ್ಡಮ್ಮ, ಚಿಕ್ಕಮ್ಮ ದೇವರುಗಳ ಮೆರವಣಿಗೆ ನಡೆಯುತ್ತದೆ. ಆದರೆ ಈ ಮೆರವಣಿಗೆಯನ್ನು ಆದಿದ್ರಾವಿಡ ಜನಾಂಗದ ವಾಸಿಸುವ ಕಾಲೋನಿಗೆ ಕರೆದುಕೊಂಡು ಬರುವಂತೆ ಕೇಳಿದ್ದಕ್ಕಾಗಿ ಅವರ ವಿರುದ್ದ ಜಾತಿ ದೌರ್ಜನ್ಯ ಎಸಗಲಾಗಿದೆ ಎಂದು ದೂರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವರ ಮೆರವಣಿಗೆಯನ್ನು ತಮ್ಮ ಕಾಲೋನಿಯಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಕರೆದುಕೊಂಡು ಬಂದು ಅಲ್ಲಿ ಮಂಗಳಾರತಿ ಮಾಡಿಸಿಕೊಂಡು ಹೋಗುವಂತೆ ದಲಿತರು ಕೇಳಿದ್ದರು. ಆದರೆ ಸವರ್ಣೀಯರು ಅವರ ವಿರುದ್ದವೇ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ದಲಿತರು ತಿಪಟೂರು ತಹಸೀಲ್ದಾರರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ತಮ್ಮ ಕಾಲೋನಿಗೆ ದೇವರ ಮೆರವಣಿಗೆಯನ್ನು ಕಳುಹಿಸಿಕೊಡಿ ಎಂದು ಹಲವು ವರ್ಷಗಳಿಂದಲೂ ದಲಿತರು ಕೇಳುತ್ತಲೇ ಬಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ಜಾತಿ ದೌರ್ಜನ್ಯದ ವಿರುದ್ದ ದಲಿತರು ನೋಣವಿನಕೆರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಮನವಿಯನ್ನು ಕೂಡಾ ಸ್ವೀಕರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀನಿವಾಸ್ ಅವರು, “ನಾವು ಹಲವಾರು ವರ್ಷಗಳಿಂದ ನಮ್ಮ ಕಾಲೋನಿಗೆ ದೇವರ ಉತ್ಸವ ಮೂರ್ತಿ ತರಬೇಕು ಎಂದು ಕೇಳುತ್ತಲೆ ಇದ್ದೇವೆ. ಆದರೆ ಸವರ್ಣೀಯರು ಇದಕ್ಕೆ ಸೋಪ್ಪು ಹಾಕುತ್ತಿಲ್ಲ. ಈ ಬಾರಿ ನಾವು ಅಡ್ಡ ನಿಂತು ಕೇಳಿಕೊಂಡರೂ ಅವರು ನಾವು ದಲಿತರು ಎಂಬ ಕಾರಣಕ್ಕೆ ನಮಗೆ ಜಾತಿ ನಿಂದನೆ ಮಾಡಿ ಮುಂದುವರೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನವಿ ಪತ್ರ ಸ್ವೀಕರಿಸುತ್ತಿಲ್ಲ ಆರೋಪದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನೊಣವಿನಕರೆ ಪೊಲೀಸ್‌ ಠಾಣೆಯ ಪಿಎಸ್‌ಐ ಜಗದೀಶ್‌, “ಆ ರೀತಿ ಎಲ್ಲಾ ನಡೆದಿಲ್ಲ, ಅದು ತಪ್ಪು ಆರೋಪ. ಘಟನೆ ಕುರಿತು ತಹಸಿಲ್ದಾರ್‌ಗೆ ಮನವಿ ನೀಡಿದ್ದಾರೆ. ಅವರು ಹೇಳಿದ್ದನ್ನೆಲ್ಲಾ ಕೇಳಬೇಡಿ. ಇಂತಹ ಘಟನೆ ನಡೆದರೆ ನಾವು ಬೇಗನೇ ದೂರು ಸ್ವೀಕರಿಸುತ್ತೇವೆ. ಅಲ್ಲಿ ದೊಡ್ಡ ಗಲಾಟೆ ನಡೆಯುತ್ತಿರುವಾಗ ತಕ್ಷಣವೇ ನಾನು ಸ್ಥಳಕ್ಕೆ ತೆರಳಿ ಸಮಾಧಾನ ಮಾಡಿದ್ದೇನೆ. ದೇವಾಲಯ ಮುಜರಾಯಿಗೆ ಸೇರಿರುವುದರಿಂದ ನಾವು ತಹಸಿಲ್ದಾರ್‌ಗೆ ಪತ್ರ ಬರೆದಿದ್ದೇವೆ. ಅವರು ಬಂದು ಸ್ಥಳ ಪರಿಶೀಲನೆ ಮಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಕೊಡುತ್ತಾರೆ” ಎಂದು ಹೇಳಿದರು.

ಜಾತಿ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಅವರ ಮನವಿಗಳನ್ನು ನಾವು ಸ್ವೀಕರಿಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನಾನು ಬೇರೆ ಪ್ರಕರಣವೊಂದರ ತನಿಖೆಗೆ ಹೊರಗಡೆ ಹೋಗಿದ್ದೆ. ಪೊಲೀಸ್‌‌ ಸ್ಟೇಷನ್‌ ಎಸ್‌ಎಚ್‌ಓಗಳು ತಗೊಂಡಿರಬಹುದು. ಅದನ್ನು ಪರಿಶೀಲನೆ ಮಾಡಿ ಹೇಳುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ನಂತರ ಮತ್ತೇ ನಾನುಗೌರಿ.ಕಾಂಗೆ ಕರೆ ಮಾಡಿದ ಅವರು, “ಜಾತಿ ದೌರ್ಜನ್ಯದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೀಗಾಗಿ ನಾವು ಡಿಎಸ್‌ಪಿ ಅಥವಾ ಎಎಸ್‌ಪಿ ಜೊತೆಗೆ ಮಾತನಾಡಿ ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿಗೆ ನಾನುಗೌರಿ.ಕಾಂ ಜಿಲ್ಲಾ ಎಎಸ್‌ಪಿ ಸಿದ್ದಾರ್ಥ್‌ ಗೋಯೆಲ್ ಅವರಿಗೆ ಕರೆ ಮಾಡಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೇ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...