Homeರಾಜಕೀಯಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

- Advertisement -
- Advertisement -

ಸುಮಾರು ಎರಡು ವರ್ಷಗಳ ನಂತರ ಮಧ್ಯಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಗುರುವಾರದಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕತ್ವದಿಂದ ರಾಜೀನಾಮೆ ನೀಡಿದ್ದಾರೆ. ಅವರ ಬದಲಿಯಾಗಿ ಏಳು ಬಾರಿ ಶಾಸಕರಾಗಿದ್ದ ಗೋವಿಂದ್ ಸಿಂಗ್ ಅವರನ್ನು ಪಕ್ಷವು ಆಯ್ಕೆ ಮಾಡಿದೆ.

2018 ರಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದ ಕಮಲ್‌ ನಾಥ್‌‌ ಅವರು, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ 25 ನಿಷ್ಠಾವಂತ ಶಾಸಕರ ನಿರ್ಗಮನದಿಂದಾಗಿ ಮಾರ್ಚ್ 20, 2020 ರಂದು ತಮ್ಮ 15 ತಿಂಗಳ ಅವಧಿಯ ಸರ್ಕಾರ ಪತನದ ನಂತರ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷರು ತಕ್ಷಣವೇ ಜಾರಿಗೆ ಬರುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನಿಮ್ಮ ರಾಜೀನಾಮೆಯನ್ನು ಅಂಗೀಕರಿಸಿದೆ. ಸಿಎಲ್‌ಪಿ ನಾಯಕರಾಗಿ ನಿಮ್ಮ ಕೊಡುಗೆಯನ್ನು ಪಕ್ಷವು ಹೃತ್ಪೂರ್ವಕವಾಗಿ ಶ್ಲಾಘಿಸುತ್ತದೆ” ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರದಲ್ಲಿ ಕಮಲ್‌ನಾಥ್‌ಗೆ ತಿಳಿಸಿದ್ದು, 71 ವರ್ಷದ ಗೋವಿಂದ್ ಸಿಂಗ್‌ ಅವರನ್ನು ಮುಂದಿನ CLP ನಾಯಕ ಎಂದು ಅದರಲ್ಲಿ ಹೆಸರಿಸಲಾಗಿದೆ.

ಇದನ್ನೂ ಓದಿ: Explainer: ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಗೆ ಯಾರು ಕಾರಣ? 10 ಅಂಶಗಳು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವತ್ತ ಗಮನವನ್ನು ಕೇಂದ್ರೀಕರಿಸಿದ್ದಾಗಿ ಕಮಲ್ ನಾಥ್ ಅವರು ಮಾಧ್ಯಮಗಳೊಂದಿಗೆ ಸಂವಾದದ ಸಮಯದಲ್ಲಿ ಹೇಳಿದ್ದಾರೆ.

ಪಕ್ಷವು ತಮ್ಮನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದ ಪತ್ರ ಸ್ವೀಕರಿಸಿದ ಕೂಡಲೇ ಗೋವಿಂದ್‌ ಸಿಂಗ್ ಅವರು ಇತರ ನಾಯಕರೊಂದಿಗೆ ಕಮಲ್ ನಾಥ್ ಅವರ ನಿವಾಸಕ್ಕೆ ಒಗ್ಗಟ್ಟಿನ ಪ್ರದರ್ಶನ ತೋರಿಸಿದ್ದು, ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಜನರ ಸಮಸ್ಯೆಗಳು, ವಿಶೇಷವಾಗಿ ಅಕ್ರಮ ಬುಲ್ಡೋಜರ್ ಕ್ರಮ, ನಿರುದ್ಯೋಗ, ರೈತರ ಸಮಸ್ಯೆ, ಬೆಲೆ ಏರಿಕೆ ಎಲ್ಲವನ್ನೂ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

ಭಿಂಡ್ ಜಿಲ್ಲೆಯ ಲಾಹರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಠಾಕೂರ್ ಸಮುದಾಯದ ನಾಯಕರಾಗಿರುವ ಗೋವಿಂದ್ ಸಿಂಗ್‌ 1998 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗಿನಿಂದ ರಾಜ್ಯದ ವಿವಿಧ ಸಚಿವ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಈ ಹಿಂದಿನ ಕಮಲ್ ನಾಥ್ ಸರ್ಕಾರದಲ್ಲಿ ಸಹಕಾರಿ, ಸಂಸದೀಯ ವ್ಯವಹಾರಗಳು ಮತ್ತು ಸಾಮಾನ್ಯ ಆಡಳಿತದ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಗೋವಿಂದ್ ಸಿಂಗ್ ಅವರು 2018 ರಲ್ಲಿ ಮಧ್ಯಪ್ರದೇಶದ 15 ನೇ ವಿಧಾನಸಭೆಗೆ ಸತತ ಏಳನೇ ಬಾರಿಗೆ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...