Homeರಾಷ್ಟ್ರೀಯಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

ಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

- Advertisement -
- Advertisement -

ಕಲ್ಲಿದ್ದಲು ಕೊರತೆ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಮೆಟ್ರೋ ರೈಲುಗಳು ಮತ್ತು ಆಸ್ಪತ್ರೆಗಳು ಸೇರಿದಂತೆ ದೆಹಲಿಯ ಪ್ರಮುಖ ಸಂಸ್ಥೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವಲ್ಲಿ ಹಿನ್ನಡೆ ಸಂಭವಿಸುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ತುರ್ತು ಸಭೆ ನಡೆಸಿದ್ದು, ರಾಷ್ಟ್ರದ ರಾಜಧಾನಿಗೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಸ್ಥಾವರಗಳಿಗೆ ಸಾಕಷ್ಟು ಕಲ್ಲಿದ್ದಲು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾದ್ರಿ-II ಮತ್ತು ಉಂಚಹಾರ್ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯಿಂದಾಗಿ, ದೆಹಲಿ ಮೆಟ್ರೋ ಮತ್ತು ದೆಹಲಿ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಅನೇಕ ಅತ್ಯಗತ್ಯ ಸಂಸ್ಥೆಗಳಿಗೆ 24 ಗಂಟೆಗಳ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಬಹುದು” ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಪ್ರಸ್ತುತ, ದೆಹಲಿಯ ವಿದ್ಯುತ್ ಬೇಡಿಕೆಯ 25% ದಿಂದ 30% ದಷ್ಟು ಈ ವಿದ್ಯುತ್ ಕೇಂದ್ರಗಳ ಮೂಲಕ ಪೂರೈಸಲಾಗುತ್ತಿದೆ. ಅಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿದೆ ಎಂದು ಸತ್ಯೇಂದ್ರ ಜೈನ್‌ ಹೇಳಿದ್ದಾರೆ.

ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಜನರು ವಿದ್ಯುತ್ ಕಡಿತವನ್ನು ಎದುರಿಸದಂತೆ ನೋಡಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಈ ವಿದ್ಯುತ್ ಕೇಂದ್ರಗಳು ದೆಹಲಿಯ ಕೆಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌ಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಮುಂಬರುವ ಬೇಸಿಗೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮ, ಆಸ್ಪತ್ರೆಗಳು ಮತ್ತು ಜನರಿಗೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕೇಂದ್ರ ಅತ್ಯಗತ್ಯ” ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (NTPC) ನ ದಾದ್ರಿ-II ಮತ್ತು ಝಜ್ಜರ್ (ಅರಾವಲಿ) ಅನ್ನು ಪ್ರಾಥಮಿಕವಾಗಿ ದೆಹಲಿಗೆ ಬೇಕಾಗಿರುವ ವಿದ್ಯುತ್‌‌‌ ಅನ್ನು ಪೂರೈಸಲು ಸ್ಥಾಪಿಸಲಾಯಿತು. ಆದರೆ ಈ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ದಾಸ್ತಾನು ಬಹಳ ಕಡಿಮೆ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ದಾದ್ರಿ-II, ಉಂಚಹಾರ್, ಕಹಲ್ಗಾಂವ್, ಫರಕ್ಕಾ ಮತ್ತು ಝಜ್ಜರ್ ವಿದ್ಯುತ್ ಸ್ಥಾವರಗಳು ದೆಹಲಿಗೆ ದಿನಕ್ಕೆ 1,751 ಮೆಗಾವ್ಯಾಟ್ (MW) ವಿದ್ಯುತ್ ಪೂರೈಸುತ್ತವೆ. ದಾದ್ರಿ-II ವಿದ್ಯುತ್ ಕೇಂದ್ರದಿಂದ ಗರಿಷ್ಠ 728 ಮೆಗಾವ್ಯಾಟ್ ಪೂರೈಕೆಯನ್ನು ದೆಹಲಿ ಪಡೆಯುತ್ತಿದ್ದು, ಉಂಚಹಾರ್ ಕೇಂದ್ರದಿಂದ 100 ಮೆಗಾವ್ಯಾಟ್ ಪಡೆಯುತ್ತದೆ.

ನ್ಯಾಷನಲ್ ಪವರ್ ಪೋರ್ಟಲ್‌ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಈ ಎಲ್ಲಾ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ.

ಸುಡು ಬೇಸಿಗೆಯ ನಡುವೆ, ವಿದ್ಯುತ್‌ಗಾಗಿ ದಾಖಲೆಯ ಬೇಡಿಕೆಯನ್ನು ನಿರ್ವಹಿಸಲು ರಾಜ್ಯಗಳು ಹೆಣಗಾಡುತ್ತಿವೆ. ಈಗಾಗಲೆ ದೇಶದ ಹಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌(ಕರೆಂಟ್‌‌ ಕಟ್)ಗಳನ್ನು ಮಾಡಲಾಗುತ್ತಿದೆ.

ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವ ಕ್ರಮಗಳ ಜೊತೆಗೆ, ದಾಸ್ತಾನುಗಳನ್ನು ನಿರ್ಮಿಸಲು ಬೇಕಾಗಿ ಮುಂದಿನ ಮೂರು ವರ್ಷಗಳವರೆಗೆ ಕಲ್ಲಿದ್ದಲಿನ ಆಮದುಗಳನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ರಾಜ್ಯಗಳನ್ನು ಕೇಳಿದೆ.

ಇದನ್ನೂ ಓದಿ: ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ದೇಶಾದ್ಯಂತ ಉಷ್ಣ ಸ್ಥಾವರಗಳು ಕಲ್ಲಿದ್ದಲು ಕೊರತೆಯನ್ನು ಎದುರಿಸುತ್ತಿವೆ. ಇದು ದೇಶದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಸೂಚಿಸುತ್ತದೆ ಎಂದು ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಶನ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...