ದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿ ಕರೆದುಕೊಂಡು ಹೋಗುತ್ತಿದ್ದಾರೆಂಬ ತಿಳಿದುಬಂದಿದೆ. ಹಳೆಯ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಪೊಲೀಸ್ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “2017ರಲ್ಲಿ ಮಾಡಲಾದ ಪೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ರವೀಂದ್ರ ಅವರು 2019ರಿಂದಲೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಂಧಿಸುವಂತೆ ಕೋರ್ಟ್ ಆದೇಶಿಸಿದೆ” ಎಂದು ತಿಳಿಸಿದರು.
ಹಾರೋಹಳ್ಳಿ ರವೀಂದ್ರ ಅವರು ದಲಿತ ಯುವ ಚಿಂತಕರಲ್ಲಿ ಮೈಸೂರು ಭಾಗದ ದಿಟ್ಟ ದನಿ. ದಲಿತರ ವಿಚಾರವಾಗಿ ಅವರು ಸದಾ ದನಿ ಎತ್ತುತ್ತಾ ಕೆಲವು ಪ್ರಕರಣಗಳಲ್ಲಿ ಸಿಲುಕಿದ್ದರು.
2017ರಲ್ಲಿ ಸಂಸದ ಅನಂತ್‌ಕುಮಾರ್ ಹೆಗಡೆ, “ಜಾತ್ಯತೀತರಿಗೆ ಅಪ್ಪ ಅಮ್ಮ ಇಲ್ಲ” ಎಂದು ಹೇಳಿಕೆ ನೀಡಿದ್ದರು. ಹೆಗಡೆ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆಗ ಹಾರೋಹಳ್ಳಿಯವರು ಕಟುವಾಗಿ ಪೋಸ್ಟ್ ಹಾಕಿದ್ದರು. ಹಿಂದೂ ದೇವರುಗಳಿಗೆ ಅಪಮಾನ ಮಾಡಲಾಗಿದೆ ಎಂದು ರವೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಚಂದ್ರಶೇಖರ್ ಬಾಪು ಮುಂಡೆ ಎಂಬವರು ಚಿಕ್ಕೋಡಿಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು. “ಸಾಮಾಜಿಕ ಜಾಲತಾಣವಾದ ವಾಟ್ಸ್‌ಅಪ್ ಹಾಗೂ ಫೇಸ್‌ಬುಕ್‌ನಲ್ಲಿ ದಿನಾಂಕ 27-12-2017ರಂದು ಹಿಂದೂ ಧರ್ಮದ ಹಿಂದೂ ದೇವರಾದ ಶ್ರೀಕೃಷ್ಣನ ಬಗ್ಗೆ ಉದ್ದೇಶಪೂರ್ವಕವಾಗಿ ಅತ್ಯಂತ ಹೀನಾಯವಾಗಿ ಕೀಳು ಅಸಹ್ಯ ಪದಗಳನ್ನು ಬಳಸಿದ್ದಾರೆ. ಮತೀಯ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿತ್ತು.
ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ
ಹಾರೋಹಳ್ಳಿ ರವೀಂದ್ರ ಅವರ ಬಂಧನವನ್ನು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಖಂಡಿಸಿದ್ದಾರೆ. “ಮೊನ್ನೆ ಜಿಗ್ನೇಶ್, ಇಂದು ಹಾರೋಹಳ್ಳಿ ರವೀಂದ್ರ..! ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿದ ಕಾರಣಕ್ಕೆ ದಲಿತ ಪರ ಹೋರಾಟಗಾರರು, ಬರಹಗಾರರನ್ನ ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಶಿಸ್ಟ್ ನಡೆಯನ್ನ ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರರನ್ನ ಬಿಡುಗಡೆ ಮಾಡಬೇಕು” ಎಮದು ಆಗ್ರಹಿಸಿದ್ದಾರೆ.
ದಲಿತ ಹೋರಾಟಗಾರರ ಬಂಧನ
ಇತ್ತೀಚೆಗೆ ದಲಿತ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿಯವರನ್ನು ಬಂಧಿಸಲಾಗಿತ್ತು. ಪ್ರಧಾನಿ ಮೋದಿಯವರನ್ನು ಟೀಕಿಸಿದ ಹಿನ್ನೆಲೆಯಲ್ಲಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಬಳಿಕ ಜಾಮೀನು ದೊರೆದಿತ್ತು. ಆದರೆ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪ ಹೊರಿಸಿ ಮತ್ತೊಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈಗ ಆ ಪ್ರಕರಣದಲ್ಲೂ ಜಾಮೀನು ದೊರೆತಿದೆ.
ಜಿಗ್ನೇಶ್ ಬಂಧನದ ಅವಧಿಯಲ್ಲಿ ಗುಜರಾತ್‌ನ ವಿವಿಧೆಡೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜಿಗ್ನೇಶ್ ಅವರ ಒಡನಾಡಿಗಳು ಹಾಗೂ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಅವರ ಮನೆಗಳಿಗೆ ತೆರಳಿ ಸರ್ಚ್ ಮಾಡಿದ್ದರು. ಖಾಸಗಿ ಮಾಹಿತಿಗಳಿರುವ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದರು.
ರವೀಂದ್ರ ಅವರ ಮೇಲಿನ ಎಫ್‌ಐಆರ್ ಪ್ರತಿ



