Homeಮುಖಪುಟ‘ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

‘ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

- Advertisement -
- Advertisement -

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ನ್ಯಾಯಾಲಯವು ಶುಕ್ರವಾರ ಹೇಳಿದೆ.

ದಲಿತ ಹಕ್ಕುಗಳ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್‌ ಮೇವಾನಿ ಅವರು ಮಹಿಳಾ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ನ್ಯಾಯಾಲಯವು, ‘ಪ್ರಕರಣದ ಬಗ್ಗೆ ಪೊಲೀಸರು ಸುಳ್ಳು ಎಫ್‌ಐಆರ್‌ ದಾಖಲಿಸಿದ್ದಾರೆ’ ಎಂದು ಹೇಳಿದ್ದು, ಅವರಿಗೆ ಜಾಮೀನು ಮಂಜೂರು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ

ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಅವರನ್ನು ಕರೆದೊಯ್ಯುತ್ತಿದ್ದಾಗ ಜಿಗ್ನೇಶ್‌ ಮೇವಾನಿ ತನ್ನ ಮೇಲೆ, ‘ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ’, ‘ದೈಹಿಕವಾಗಿ ತಳ್ಳಿದ್ದಾರೆ’ ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ತಯಾರಿಸಲ್ಪಟ್ಟಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ 

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...