ಸಂವಿಧಾನವು ಮೂರು ಅಂಗಗಳ ನಡುವೆ ದೇಶದ ಅಧಿಕಾರವನ್ನು ಪ್ರತ್ಯೇಕಿಸುತ್ತದೆ ಮತ್ತು ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ಈ ‘ಲಕ್ಷ್ಮಣ ರೇಖೆ’ಯ ಬಗ್ಗೆ ಜಾಗರೂಕರಾಗಿರಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಶನಿವಾರ ಹೇಳಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.
“ಸಂವಿಧಾನವು ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಿಸುತ್ತದೆ. ಈ ಮೂರು ಅಂಗಗಳ ನಡುವಿನ ಸಾಮರಸ್ಯದ ಕಾರ್ಯವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವಾಗ, ನಾವು ಈ ಅಂಗಗಳ ಲಕ್ಷ್ಮಣ ರೇಖೆಯ ಬಗ್ಗೆ ಜಾಗರೂಕರಾಗಿರಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಕಳೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶಾಸಕಾಂಗ ಪರಿಶೀಲನೆಯ ಕುರಿತು ಅವರು ಮಾಡಿದ ಟೀಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಶಾಸಕಾಂಗ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸ್ಪಷ್ಟಪಡಿಸಿದ್ದಾರೆ. ಆದರೆ ಲೋಕಸಭೆ ಸ್ಪೀಕರ್ ಅವರ ಹೇಳಿಕೆಯನ್ನು ಬಳಸಿಕೊಂಡು ಕಾನೂನುಗಳನ್ನು ಅಂಗೀಕರಿಸುವ ಮೊದಲು ಸರಿಯಾದ ಶಾಸಕಾಂಗ ಪರಿಶೀಲನೆಯ ಅಗತ್ಯವನ್ನು ಅವರು ಪುನರುಚ್ಚರಿಸಿದ್ದಾರೆ.
ಮುಖ್ಯನ್ಯಾಯಮೂರ್ತಿ ಅವರು ಸಾರ್ವಜನಿಕ ಹಿತಾಸಕ್ತಿ ದಾವೆಗಳ (ಪಿಐಎಲ್) ದುರುಪಯೋಗದ ಬಗ್ಗೆ ಕೂಡಾ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.
PIL ಗಳು ಈಗ ‘ವೈಯಕ್ತಿಕ ಹಿತಾಸಕ್ತಿ ಮೊಕದ್ದಮೆ’ಗಳಾಗಿ ಮಾರ್ಪಟ್ಟಿವೆ. ಇದನ್ನು ವೈಯಕ್ತಿಕ ಪ್ರಭಾವ ಹೆಚ್ಚಿಸುವುದಕ್ಕೆ ಬಳಸಲಾಗುತ್ತಿದೆ, ಆದರೆ ನ್ಯಾಯಾಲಯಗಳು ಈಗ ಅದರ ಬಗ್ಗೆ ಹೆಚ್ಚು ಜಾಗರೂಕವಾಗಿವೆ ಎಂದು ಅವರು ಹೇಳಿದ್ದಾರೆ.
ನ್ಯಾಯಾಂಗ ತೀರ್ಪುಗಳ ಹೊರತಾಗಿಯೂ ಸರ್ಕಾರಗಳು ಉದ್ದೇಶಪೂರ್ವಕ ನಿಷ್ಕ್ರಿಯತೆ ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಇದನ್ನೂ ಓದಿ: ಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ
ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪರಿಚಯಿಸುವ ಕಾನೂನು ವ್ಯವಸ್ಥೆಗೆ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಹಿಂದಿ ಮತ್ತು ದೇಶದಲ್ಲಿನ ಭಾಷಾ ವೈವಿಧ್ಯತೆಯ ಚರ್ಚೆ ನಡೆಯುತ್ತಿರುವ ಹಿನ್ನಲೆಯಲ್ಲಿ ಅವರ ಈ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ.


