Homeರಾಷ್ಟ್ರೀಯಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

- Advertisement -
- Advertisement -

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಇದರ ನಂತರ ಅವರಿಗೆ ತಿರುವನಂತಪುರಂನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಪಿಸಿ ಜಾರ್ಜ್ ಅವರನ್ನು ಪೊಲೀಸರು ಅವರ ನಿವಾಸದಿಂದ ರಸ್ತೆ ಮಾರ್ಗವಾಗಿ ತಿರುವನಂತಪುರಕ್ಕೆ ಕರೆತಂದು ಅವರನ್ನು ಔಪಚಾರಿಕವಾಗಿ ಬಂಧನವನ್ನು ದಾಖಲಿಸಿದ್ದಾರೆ. ನಂತರ ಅವರನ್ನು ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಅವರು ಅವರಿಗೆ ಜಾಮೀನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಮಂಜೂರು ಆದ ನಂತರ, ನ್ಯಾಯಾಲಯದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ. ಜಾರ್ಜ್, “ತನಿಖೆಯಲ್ಲಿ ಮಧ್ಯಪ್ರವೇಶಿಸದಂತೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಅಥವಾ ಯಾವುದೇ ದ್ವೇಷದ ಭಾಷಣಗಳನ್ನು ಮಾಡದಂತೆ ಅಥವಾ ಯಾವುದೇ ವಿವಾದಗಳಲ್ಲಿ ಭಾಗಿಯಾಗದಂತೆ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿರುವ ಅವರ ನಿವಾಸದಿಂದ ಮುಂಜಾನೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ನಂತರ ಅವರ ವೈಯಕ್ತಿಕ ವಾಹನದಲ್ಲಿ ತಿರುವನಂತಪುರಂ ಎ.ಆರ್. ಕ್ಯಾಂಪ್‌ಗೆ ರಸ್ತೆಯ ಮೂಲಕ ಕರೆದೊಯ್ದು, ಅಲ್ಲಿ IPC ಯ ಸೆಕ್ಷನ್ 153A ಅಡಿ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ) ಯಲ್ಲಿ ಅವರ ಬಂಧನವನ್ನು ಔಪಚಾರಿಕವಾಗಿ ದಾಖಲಿಸಲಾಗಿದೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರ ನಿರ್ದೇಶನದ ಮೇರೆಗೆ ತಿರುವನಂತಪುರಂ ಫೋರ್ಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಪಿಸಿ ಜಾರ್ಜ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆವರನ್ನು ಕಸ್ಟಡಿಗೆ ತೆಗೆದುಕೊಂಡಾಗಿನಿಂದ ಆತನ ಬಂಧನ ದಾಖಲಾಗುವವರೆಗೆ ತಿರುವನಂತಪುರದ ರಸ್ತೆಯ ವಿವಿಧ ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಿದ್ದಾರೆ.

ಈ ಮಧ್ಯೆ ಎ.ಆರ್. ಕ್ಯಾಂಪ್‌ ಹೊರಗೆ ಡಿವೈಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟವನ್ನು ಬೀಸಿ, ಪಿ.ಸಿ. ಜಾರ್ಜ್ ಅವರಿಗೆ ಧಿಕ್ಕಾರ ಕೂಗಿದ್ದು, ಆರೋಪಿ ಪಿಸಿ ಜಾರ್ಜ್ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೊಳೆತ ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರನ್ನು ಭೇಟಿ ಮಾಡಲು ಬಂದ ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರಿಗೆ ಎಆರ್ ಕ್ಯಾಂಪ್ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಪಿ.ಸಿ ಜಾರ್ಜ್ ವಿರುದ್ಧ ಹಲವು ಸಂಘಟನೆಗಳು ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಿ.ಸಿ. ಜಾರ್ಜ್, “ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಿಗೆ ಹೋಗಬಾರದು. ಅವರು ದೇಶದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಚಹಾದಲ್ಲಿ ಸಂತಾನಹರಣ ಆಗುವ ದ್ರವವನ್ನು ಅದರಲ್ಲಿ ಬಳಸುತ್ತಾರೆ” ಎಂದು ಹೇಳಿದ್ದರು.

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಅಂದಿನ ಭಾಷಣದಲ್ಲಿ ಒತ್ತಾಯಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...