Homeಮುಖಪುಟಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

- Advertisement -
- Advertisement -

ಸರ್ಕಾರ 4.8 ಲಕ್ಷ ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದೆ. ಆದರೆ 47 ಲಕ್ಷ ಭಾರತೀಯರು ಕೋವಿಡ್‌ನಿಂದ ಪ್ರಾಣ ಬಿಟ್ಟಿದ್ದಾರೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಭಾರತದ ಕೋವಿಡ್ ಸಾವುಗಳ ಕುರಿತು WHO ಬಿಡುಗಡೆ ಮಾಡಿದ ವರದಿಯ ತುಣುಕು ಹಂಚಿಕೊಂಡಿರುವ ಅವರು, ಕೋವಿಡ್‌ನಿಂದ ಪ್ರಾಣಬಿಟ್ಟ ಕುಟುಂಬಗಳನ್ನು ಗೌರವಿಸಬೇಕು. ಪ್ರತಿ ಕುಟುಂಬಕ್ಕೂ ತಲಾ 4 ಲಕ್ಷ ರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

2020ರ ಜನವರಿಯಿಂದ 2022ರ ಡಿಸೆಂಬರ್‌ವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಸುಮಾರು 47 ಲಕ್ಷಕ್ಕೂ ಹೆಚ್ಚುವರಿ ಕೋವಿಡ್ ಸಾವುಗಳು ಸಂಭವಿಸಿವೆ ಎಂದು WHO ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ. ಇದು ಭಾರತದ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿ ಅಂಶಗಳಿಗಿಂತ ಹತ್ತು ಪಟ್ಟು ಹೆಚ್ಚು ಇದ್ದು, ಪ್ರಪಂಚದ ಮೂರನೇ ಒಂದು ಭಾಗದಷ್ಟು ಸಾವುಗಳು ಭಾರತದಲ್ಲಿಯೇ ಸಂಭವಿಸಿದೆ ಎಂದು ವರದಿ ಹೇಳಿದೆ.

ಇಡೀ ಪ್ರಪಂಚದಲ್ಲಿ 60 ಲಕ್ಷ ಕೋವಿಡ್ ಸಾವುಗಳು ಸಂಭವಿಸಿವೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳುತ್ತವೆ. ಆದರೆ ಅದು ಒಂದೂವರೆ ಕೋಟಿಗೂ ಹೆಚ್ಚಿದೆ ಎಂದು WHO ಹೇಳಿದೆ.

2020 ರಲ್ಲಿ ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ಭಾರತವು 4,74,806 ಸಾವುಗಳನ್ನು ದಾಖಲಿಸಿದೆ.

ಕೋವಿಡ್ ಸಾವುಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಬಳಸಿದ ಸಂಖ್ಯಾಶಾಸ್ತ್ರೀಯ ಮಾದರಿಯ ಬಳಕೆಯನ್ನು ಭಾರತ ಸರ್ಕಾರ ಬಲವಾಗಿ ನಿರಾಕರಿಸಿದೆ. ದೇಶವು ಜನನ – ಮರಣಗಳ ನೋಂದಣಿಯ ಅತ್ಯಂತ ದೃಢವಾದ ವ್ಯವಸ್ಥೆಯನ್ನು ಹೊಂದಿದೆ. WHOದ ಅಂಕಿ ಸಂಖ್ಯೆಗಳು ವಾಸ್ತವಕ್ಕೆ ದೂರವಾಗಿವೆ. ಈ ದತ್ತಾಂಶ ಸಂಗ್ರಹದ ವ್ಯವಸ್ಥೆಯನ್ನು “ಸಂಖ್ಯಾಶಾಸ್ತ್ರೀಯವಾಗಿ ಅಸ್ಪಷ್ಟ ಮತ್ತು ವೈಜ್ಞಾನಿಕವಾಗಿ ಪ್ರಶ್ನಾರ್ಹ” ಎಂದು ಕರೆದಿದೆ.

ಹದಿನೇಳು ಭಾರತೀಯ ರಾಜ್ಯಗಳಿಗೆ ಸಂಬಂಧಿಸಿದಂತೆ ಡೇಟಾವನ್ನು ಕೆಲವು ವೆಬ್‌ಸೈಟ್‌ಗಳು ಮತ್ತು ಮಾಧ್ಯಮ ವರದಿಗಳಿಂದ ಪಡೆಯಲಾಗಿದ್ದು, ಇದನ್ನು ಭಾರತವು ಸತತವಾಗಿ ಪ್ರಶ್ನಿಸಿದೆ. ಆದರೆ ಭಾರತದ ವಿರೋಧದ ನಡುವೆಯೂ ಕೋವಿಡ್ ಸಾವುಗಳ ಲೆಕ್ಕಾಚಾರದ ಪ್ರಕ್ರಿಯೆಯನ್ನು WHO ಮುಂದುವರೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಇದನ್ನೂ ಓದಿ; ರಾಜಾರಾಂ ತಲ್ಲೂರು ಅವರ ’ಕರಿಡಬ್ಬಿ ಪುಸ್ತಕದಿಂದ ಆಯ್ದ ಅಧ್ಯಾಯ; #WHOCARES

ಈ ಪ್ರಕ್ರಿಯೆಯಲ್ಲಿ WHO ಜೊತೆ ನಡೆಸಿದ ಸಂವಾದ-ಸಂವಹದನಲ್ಲಿ ಅದು ಹಲವಾರು ಮಾದರಿಗಳನ್ನು ಉಲ್ಲೇಖಿಸಿ ವಿವಿಧ ಹೆಚ್ಚುವರಿ ಮರಣದ ಅಂಕಿಅಂಶಗಳನ್ನು ಯೋಜಿಸಿದೆ. ಸಿವಿಲ್ ನೋಂದಣಿ ವ್ಯವಸ್ಥೆಯ ಅಡಿಯಲ್ಲಿ ದಾಖಲಾದ ಅಂಕಿ ಅಂಶಗಳನ್ನು WHO ಜೊತೆಗೆ ಹಂಚಿಕೊಂಡಿದ್ದೇವೆ. ಆದರೂ ನಮ್ಮೆಲ್ಲ ಅಂಕಿ ಅಂಶಗಳನ್ನು ತಿರಸ್ಕರಿಸಿ ಹೆಚ್ಚಿನ ಮರಣ ಸಂಭವಿಸಿವೆ ಎಂದು ವರದಿ ನೀಡಿದೆ. ಆದರೆ ಅದು ಬಳಸಿದ ಮಾದರಿಗಳ ಸಿಂಧುತ್ವ ಮತ್ತು ದೃಢತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಭಾರತ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....