Homeಮುಖಪುಟಹೈದರಾಬಾದ್ ಮಾರ್ಯಾದೆಹೀನ ಹತ್ಯೆ: ಸಂವಿಧಾನ ಮತ್ತು ಇಸ್ಲಾಂ ಪ್ರಕಾರ ಕ್ರಿಮಿನಲ್ ಕೃತ್ಯ - ಅಸಾದುದ್ದೀನ್ ಓವೈಸಿ

ಹೈದರಾಬಾದ್ ಮಾರ್ಯಾದೆಹೀನ ಹತ್ಯೆ: ಸಂವಿಧಾನ ಮತ್ತು ಇಸ್ಲಾಂ ಪ್ರಕಾರ ಕ್ರಿಮಿನಲ್ ಕೃತ್ಯ – ಅಸಾದುದ್ದೀನ್ ಓವೈಸಿ

- Advertisement -
- Advertisement -

ಹೈದರಾಬಾದ್‌ನ ಸರೂರ್‌ನಗರದಲ್ಲಿ ನಡೆದಿರುವ ಮಾರ್ಯಾದೆಹೀನ ಹತ್ಯೆಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ. ಅದು ಸಂವಿಧಾನದ ಪ್ರಕಾರ ಕ್ರಿಮಿನಲ್ ಪ್ರಕರಣವಾದರೆ ಇಸ್ಲಾಂ ಪ್ರಕಾರ ಹೀನ ಕ್ರಿಮಿನಲ್ ಕೃತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೈದರಾಬಾದ್‌ನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದಲಿತ ಯುವಕನನ್ನು ಮುಸ್ಲಿಂ ಯುವತಿ ಪ್ರೀತಿಸಿ ಮದುವೆಯಾಗಿದ್ದಳು. ಆ ಯುವತಿಯ ಸಹೋದರನಿಗೆ ಕೊಲ್ಲುವ ಯಾವುದೇ ಹಕ್ಕು ಇಲ್ಲ. ಇದು ಕ್ರಿಮಿನಲ್ ಅಪರಾಧವಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಾವು ಕೊಲೆಗಾರರನ್ನು ಎಂದಿಗೂ ಸಮರ್ಥಿಸುವುದಿಲ್ಲ” ಎಂದು ಓವೈಸಿ ಹೇಳಿದ್ದಾರೆ.

ಜಹಾಂಗೀರ್‌ ಪುರಿ ಮತ್ತು ಖಾರ್ಗೋನ್‌ನಲ್ಲಿನ ಹಿಂಸಾಚಾರದ ಕುರಿತು ಮಾತನಾಡಿದ ಓವೈಸಿ, “ಯಾವುದೇ ಧರ್ಮದ ಮೆರವಣಿಗೆಗಳು ನಡೆದರೂ ಮಸೀದಿ ಸೇರಿದಂತೆ ಆ ರಸ್ತೆಯಲ್ಲಿ ಉತ್ತಮ ರೆಸೂಲೇಷನ್ ಇರುವ ಸಿಸಿಕ್ಯಾಮರಗಳನ್ನು ಅಳವಡಿಸಬೇಕು. ಇಡೀ ಮೆರವಣಿಗೆಯನ್ನು ಫೇಸ್‌ಬುಕ್ ಲೈವ್ ಮಾಡಬೇಕು. ಆಗ ಕಲ್ಲು ತೂರುವವರು ಯಾರೆಂದು ತಿಳಿಯುತ್ತದೆ” ಎಂದಿದ್ದಾರೆ.

ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ದಲಿತ ಯುವಕನನ್ನು ಕೊಚ್ಚಿ ಕೊಲ್ಲಲಾದ ಆರೋಪದಲ್ಲಿ ಸಯ್ಯದ್ ಮೊಬಿನ್ ಅಹ್ಮದ್ ಮತ್ತು ಮೊಹಮ್ಮದ್ ಮಸೂದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

5 ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗರಾಜು ಮತ್ತು ಅಶ್ರಿನ್ ಸುಲ್ತಾನ ಇದೇ ಜನವರಿ 30 ರಂದು ಹಿಂದೂ ಧರ್ಮದ ಅನುಸಾರ ಮದುವೆಯಾಗಿದ್ದರು. ಆದರೆ ಯುವಕ ಬೇರೆ ಧರ್ಮದವನಾದ ಕಾರಣಕ್ಕೆ ಈ ಮದುವೆಗೆ ಸುಲ್ತಾನ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು.

ಇದನ್ನೂ ಓದಿ; ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಅಶ್ರೀನ್ ಸುಲ್ತಾನನ ಸಹೋದರ ಸಯ್ಯದ್ ಮೊಬಿನ್ ಮತ್ತು ಇತರರು ನಾಗರಾಜುರನ್ನು ಅವರು ಕೆಲಸ ಮಾಡವು ಸ್ಥಳದಲ್ಲಿ ಕೊಲ್ಲಲು ನಿರ್ಧರಿಸಿದ್ದರು. ಅದು ಸಾಧ್ಯವಾಗದಿದ್ದಾಗ ತಮ್ಮ ಸಂಬಂಧಿಗಳ ಮನೆಯಿಂದ ನಾಗರಾಜು ಮತ್ತು ಸುಲ್ತಾನ ಹಿಂತಿರುಗುತ್ತಿದ್ದಾಗ ಸರೂಜ್‌ನಗರದ ನಡುರಸ್ತೆಯಲ್ಲಿ ಹಲ್ಲೆ ನಡೆಸಿ, ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...