ಕಲ್ಲಿದ್ದಲು ಹಗರಣ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ವಾರಂಟ್ ಹೊರಡಿಸಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಯಿಂದ ತನಿಖೆಗೆ ಹಾಜರಾಗಲು ಅವರಿಗೆ ಸಮನ್ಸ್ ನೀಡಲಾಗಿತ್ತು, ಆದರೆ ಅವರು ತನಿಖೆಗೆ ಹಾಜರಾಗದ ಕಾರಣ ಅವರಿಗೆ ವಾರಂಟ್ ಹೊರಡಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಆಪಾದಿತ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅವರಿಗೆ ಸಮನ್ಸ್ ನೀಡಿತ್ತು. ಆದರೆ ಅವರು ಹಾಜರಾಗಿರಲಿಲ್ಲ, ಹೀಗಾಗಿ ಅವರಿಗೆ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಅವರು ವಾರಂಟ್ ಹೊರಡಿಸಿದ್ದಾರೆ. ನ್ಯಾಯಾಲಯವು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಜಾರಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ರುಜಿರಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 20 ರಂದು ನಡೆಯಲಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರು ಇಡಿಯನ್ನು ಪ್ರತಿನಿಧಿಸಿ, ಆರೋಪಿಗಳು ಅನೇಕ ಸಮನ್ಸ್‌ಗಳನ್ನು ನೀಡಿದ್ದರೂ ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲಿಲ್ಲ ಎಂದು ಐಎಎನ್‌ಎಸ್‌ನ ವರದಿ ಮಾಡಿದೆ.
ಕಳೆದ ತಿಂಗಳು, ಪ್ರಕರಣದಲ್ಲಿ ಇಡಿ ಸಮನ್ಸ್ ಅನ್ನು ಪ್ರಶ್ನಿಸಿ ದಂಪತಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಮಾರ್ಚ್ 21 ಮತ್ತು 22 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ದಂಪತಿಗೆ ಸಮನ್ಸ್ ನೀಡಿದೆ.
ಅಭಿಷೇಕ್ ಮತ್ತು ರುಜಿರಾ ಬ್ಯಾನರ್ಜಿ ಅವರು ಈ ಹಿಂದೆ ಇಡಿ ಸಮನ್ಸ್‌ನ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಇಬ್ಬರೂ ಪಶ್ಚಿಮ ಬಂಗಾಳದ ನಿವಾಸಿಗಳಾಗಿರುವುದರಿಂದ, ದೆಹಲಿಯಲ್ಲಿ ವಿಚಾರಣೆಗೆ ಕರೆಯಬಾರದು ಎಂದು ಪ್ರತಿಪಾದಿಸಿದ್ದರು. ಆದರೆ ಮಾರ್ಚ್ 11 ರಂದು ಹೈಕೋರ್ಟ್ ಅವರ ಮನವಿಯನ್ನು ವಜಾಗೊಳಿಸಿತ್ತು.
ಇದನ್ನೂ ಓದಿ: ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದಂಪತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಿ ಕಾರಣಕ್ಕೆ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಅವರನ್ನು ಗುರಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಕೋಲ್ಕತ್ತಾದಲ್ಲಿ ಮೊದಲು ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸಲು ಇಡಿ ಪ್ರಯತ್ನಿಸಲಿಲ್ಲ ಮತ್ತು ನಗರದಲ್ಲಿರುವ ಅವರ ಪೂರ್ಣ ಪ್ರಮಾಣದ ಕಚೇರಿಯಲ್ಲಿ ಅವರನ್ನು ವಿಚಾರಣೆ ನಡೆಸಿದರೆ ಇಡಿ ಎದುರಿಸುವ ಅಡೆತಡೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.


