Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....