Homeರಾಷ್ಟ್ರೀಯಡಾಲರ್‌ ಮುಂದೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

ಡಾಲರ್‌ ಮುಂದೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

- Advertisement -
- Advertisement -

ಅಮೆರಿಕನ್‌ ಡಾಲರ್‌ ಮುಂದೆ ಭಾರತದ ರುಪಾಯಿಯ ಮೌಲ್ಯವು ಸಾರ್ವಕಾಲಿಕ ಕುಸಿತ ದಾಖಲಾಗಿದ್ದು, ಡಾಲರ್‌ ಮುಂದೆ ರುಪಾಯಿ ಮೌಲ್ಯ 77.42 ಕ್ಕೆ ಇಳಿದಿದೆ. ದೇಶಗಳ ನಡುವೆ ಸೋಮವಾರ ನಡೆದ ವಹಿವಾಟಿನ ಆರಂಭದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 77.17 ಇತ್ತು, ಆದರೆ ನಂತರ ರುಪಾಯಿಯ ಮೌಲ್ಯ 52 ಪೈಸೆ ನಷ್ಟವಾಗುವುದರೊಂದಿಗೆ 77.42 ರೂಗೆ ಇಳಿದಿದೆ.

ಕಳೆದ ಮಾರ್ಚ್‌ನಲ್ಲಿ ರುಪಾಯಿ ಮೌಲ್ಯ 76.98 ಇಳಿಯುವುದರೊಂದಿಗೆ ಸಾರ್ವಕಾಲಿಕ ಕನಿಷ್ಠ ಮೌಲ್ಯ ದಾಖಲಾಗಿತ್ತು. ಅದರ ನಂತರ ಕಳೆದ ಶುಕ್ರವಾರ ಅಮೆರಿಕದ ಕರೆನ್ಸಿ ಎದುರು 55 ಪೈಸೆ ಕುಸಿದು ರುಪಾಯಿ ಮೌಲ್ಯ 76.90ಕ್ಕೆ ಇಳಿದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಾಯಕಾರಿ ಆಸ್ತಿಗಳ ಬೇಡಿಕೆ ಮತ್ತು ವಿದೇಶಿ ಹೂಡಿಕೆದಾರರು ದೇಶೀಯ ಷೇರುಗಳನ್ನು ಕೈಬಿಡುತ್ತಿರುವುದು ರೂಪಾಯಿ ಮೌಲ್ಯದ ಕುಸಿತದ ಹಿಂದಿನ ಕಾರಣ ಎಂದು ‘ಮಿಂಟ್‌’ ವರದಿ ಮಾಡಿದೆ. ಚೀನಾದ ಶಾಂಘೈನಲ್ಲಿ ಹೇರಲಾಗಿರುವ ಕೊರೊನಾ ಲಾಕ್‌ಡೌನ್‌ನಿಂದಾಗಿ ಏಷ್ಯಾದ ಷೇರುಗಳು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ, ಇದು ಕೂಡಾ ಜಾಗತಿಕ ಆರ್ಥಿಕ ಬೆಳವಣಿಗೆಯನ್ನು ಅಡ್ಡಿಪಡಿಸಲಿದೆ.

ಇದನ್ನೂ ಓದಿ: ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

“ದೃಢವಾದ ಡಾಲರ್ ಮತ್ತು ನಿರಾಶಾವಾದಿ ಜಾಗತಿಕ ಮಾರುಕಟ್ಟೆಗಳ ನಡುವೆ ರೂಪಾಯಿ ಇಂದು ಕುಸಿಯುವ ನಿರೀಕ್ಷೆಯಿದೆ. ಹೆಚ್ಚುತ್ತಿರುವ ಹಣದುಬ್ಬರ, ಜಗತ್ತಿನ ಪ್ರಮುಖ ರಾಷ್ಟ್ರಗಳಾದ್ಯಂತ ವಿತ್ತೀಯ ನೀತಿ ಬಿಗಿಗೊಳಿಸುವಿಕೆ, ಆರ್ಥಿಕ ಮಂದಗತಿ ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ ಬಗ್ಗೆ ಹೂಡಿಕೆದಾರರು ಚಿಂತಿತರಾಗಿರುವ ಕಾರಣ ಮಾರುಕಟ್ಟೆ ಘಾಸಿಗೊಂಡವು. ಇದಲ್ಲದೆ, ಏರುತ್ತಿರುವ ಕಚ್ಚಾ ತೈಲ ಬೆಲೆಗಳು ಭಾರತದ ವ್ಯಾಪಾರ ಮತ್ತು ಚಾಲ್ತಿ ಖಾತೆಗೆ ಹಾನಿಯುಂಟುಮಾಡುತ್ತದೆ ಎಂದು ಹೂಡಿಕೆದಾರರು ಭಾವಿಸುತ್ತಾರೆ” ಎಂದು ಬ್ರೋಕರೇಜ್ ಐಸಿಐಸಿಐ ಸೆಕ್ಯುರಿಟೀಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರ್ಥಶಾಸ್ತ್ರ ಗೊತ್ತಿಲ್ಲದವರಿಗೆ ಅಧಿಕಾರ ಕೊಟ್ಟರೆ ಹೀಗೇ ಆಗುವುದು…..

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...