Homeರಾಷ್ಟ್ರೀಯದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

- Advertisement -
- Advertisement -

ಸರ್ಕಾರ ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್‌‌ ಬುಧವಾರದಂದು ಮಹತ್ವದ ಆದೇಶ ನೀಡಿದೆ. ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

“ಭಾರತ ಸರ್ಕಾರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುತ್ತದೆ. ಅರ್ಜಿದಾರರು ಕಾನೂನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಹೇಳುತ್ತಾರೆ. ಅಟಾರ್ನಿ ಜನರಲ್ ಅವರು ಹನುಮಾನ್ ಚಾಲೀಸಾ ಪ್ರಕರಣದಲ್ಲಿ ದಾಖಲಾದ ದೇಶದ್ರೋಹದ ಆರೋಪವನ್ನು ಪ್ರಸ್ತಾಪಿಸಿದ್ದಾರೆ. ಮುಂದಿನ ಮರುಪರಿಶೀಲನೆಯವರೆಗೆ ಈ ಕಾನೂನಿನ ನಿಬಂಧನೆಯನ್ನು ಬಳಸದಿರುವುದು ಸೂಕ್ತವಾಗಿರುತ್ತದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“124ಎ ಅಡಿಯಲ್ಲಿ ಯಾವುದೇ ಎಫ್‌ಐಆರ್ ದಾಖಲಿಸಿಕೊಳ್ಳುವುದರಿಂದ ಅಥವಾ ಮರು ಪರಿಶೀಲನೆ ಮುಗಿಯುವವರೆಗೆ ಅದರ ಅಡಿಯಲ್ಲಿ ಮುಂದುವರಿಯುವುದನ್ನು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೈಬಿಡುತ್ತವೆ ಎಂದು ನಾವು ಭಾವಿಸುತ್ತೇವೆ ಮತ್ತು ನಿರೀಕ್ಷಿಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

“ಯಾವುದೇ ಹೊಸ ಪ್ರಕರಣಗಳು ದಾಖಲಾದರೆ, ಆರೋಪಿಗಳು ನ್ಯಾಯಾಲಯವನ್ನು ಸಂಪರ್ಕಿಸಬಹುದು. ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಲು ಭಾರತ ಸರ್ಕಾರದ ಅಧಿಕಾರದಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...