Homeಕರ್ನಾಟಕ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ಸುಳ್ಳು ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಕನ್ನಡ ಮಾಧ್ಯಮಗಳ ಕುಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಅವರು, “ಪಿ.ಇ.ಎಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಸೌದಿ ಪ್ರವಾಸಕ್ಕೆ ಪೊಲೀಸ್ ಇಲಾಖೆ ಅನುಮತಿ ಅಗತ್ಯವಿಲ್ಲ. ಮುಸ್ಕಾನ್ ವಿದೇಶ ಪ್ರವಾಸ ಹೊರಟಿರುವುದು ಅವರ ವೈಯಕ್ತಿಕ ವಿಚಾರ. ಅದಕ್ಕೂ ನಮಗೂ ಸಂಬಂಧವಿಲ್ಲ. ಮುಸ್ಕಾನ್ ಮತ್ತು ಅವರ ಕುಟುಂಬದವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ವಾರ್ತಾಭಾರತಿ’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ವಾರ್ತಾಭಾರತಿ ಎಂಬ ಮತಾಂಧ ,ಪಾಕಿಸ್ತಾನ್ ಪ್ರೇಮಿ ಮಾಧ್ಯಮದ ವರದಿಯನ್ನು ಸಮರ್ಥ ಮಾಡುವ ಈ ನಗರ ನಕ್ಸಲರ ಪತ್ರಿಕೆಯ ಬಂಡವಾಳ ಏನೆಂಬುದು ದೇಶದ ಜನರಿಗೆ ತಿಳಿದ ವಿಷಯವೇ ಆಗಿದೆ

  2. ಮಾನಗೆಟ್ಟ, ನೀಚ ಕನ್ನಡ ಮಾಧ್ಯಮಗಳು ಮತ್ತು ಲಂಭಕ್ತರಿಗೆ ಯಾವುದೇ ಅಧಿಕೃತ ಸುದ್ದಿ ಮೂಲಗಳ ಅವಶ್ಯಕತೆ ಇಲ್ಲ. ಅವು ನರಹಂತಕನ ಅನೈತಿಕ ಕೂಸುಗಳು. ಅವಕ್ಕೆ ಅವರಪ್ಪ ಅಧಿಕಾರದಲ್ಲಿರುವುದು ಮುಖ್ಯ.

  3. ಮಾನಗೆಟ್ಟ ಸುದ್ದಿಮಾಧ್ಯಮಗಳಿಗೆ ರಾಷ್ಟ್ರದಾದ್ಯಂತ ಸಾಕಷ್ಟು ಸುದ್ದಿಗಳಿವೆ. ಬೆಲೆ ಏರಿಕೆ… ನಿರುಧ್ಯೋಗ….. ಜಿಡಿಫಿ ದರ. …. ಸಣ್ಣ ಕೈಗಾರಿಕೆಗಳ ದುಸ್ಥಿತಿ…. ಇವುಗಳ ಬಗ್ಗೆ ಅವರು ಬಿತ್ತರ ಮಾಡಲಿ

  4. ಇಂಥಾ ಮಿಂಡಿ ಮೀಡಿಯಾಗಳು ಜಾತಿ ಧರ್ಮ ಹೇಳಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇವರು ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ ವಸ್ತುಗಳ ಬೆಲೆಯೇರಿಕೆ ಬಗ್ಗೇ ಮಾತನಾಡಲು ದೈರ್ಯ ಇಲ್ಲ.

  5. ಈ ನಾಚಿಕೆ ಗೆಟ್ಟ ಕೊಮುವಾದಿ ಮಾಧ್ಯಮ ಗಳದ್ದು ಇದು ಎನು ಹೊಸದೆನಲ್ಲ. ಸುಳ್ಳು ಸುದ್ದಿ ಹಬ್ಬಿಸಿ ದೇಶದಲ್ಲಿ ಬೆಂಕಿ ಹಚ್ಚುವುದರಲ್ಲಿ ಇವರಿಗೆ ಮೋದಲನೆ ಸ್ಥಾನ. ಥು… ಇವ್ರ ಜನ್ಮ ಕುಕ್ಕೆ ಥು…

  6. History itself is controlled and diverted since many decades..schools are educated false history to destroy peaceful culture in India. Check history ..
    Since independence secularism had taken its max advantage politically .advantagies does not like to know true history .it’s right time to cancel all benefits, reservations and fight for transparency rule ,equal education, equal hospitality, that too free of cost canceling all subsidies, private schools, universities, hospitals..sd be taken over by Indian government.
    Stop doing news about muslim student girl.let them roam anywhere why r we bothered.
    Hope intelligence is wise enough to track her.
    She is communal minded supportive by same mindsets.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...