Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...