Homeಸಿನಿಮಾಕ್ರೀಡೆRCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

RCB ಪ್ಲೇಆಫ್‌ ತಲುಪಬೇಕಾದರೆ ಈ ತಂಡಗಳು ಸೋಲಬೇಕು

ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದರೆ RCBಗೆ ಅನುಕೂಲ.

- Advertisement -
- Advertisement -

15ನೇ ಆವೃತ್ತಿಯ IPL2022 ರೋಚಕ ಘಟ್ಟಕ್ಕೆ ತಲುಪಿದೆ. ಲೀಗ್ ಹಂತದ ಕೇವಲ 6 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇಆಫ್‌ ಹಂತಕ್ಕೆ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದೆ. ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿದ್ದು, ಎಲ್ಲಾ ತಂಡಗಳಿಗೂ ಸಾಧ್ಯತೆಯಿದೆ. ಆದರೆ ಹೆಚ್ಚಿನ ಸಾಧ್ಯತೆ RCB ತಂಡಕ್ಕಿದೆ. ಆದರೆ ಈ ತಂಡಗಳು ಸೋತರಷ್ಟೆ ಅದಕ್ಕೆ ಅವಕಾಶ. ಅದು ಹೇಗೆ ಎಂಬುದನ್ನು ನೋಡೋಣ

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಉಳಿದ ನಾಲ್ಕು ತಂಡಗಳು ಸೋಲಬೇಕು ಮತ್ತು RCB ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಅದರೊಂದಿಗೆ ಪ್ಲೇಆಫ್ ಪೈಪೋಟಿಯಲ್ಲಿರುವ ಉಳಿದ ನಾಲ್ಕು ತಂಡಗಳ ನೆಟ್‌ ರನ್‌ರೇಟ್ ಹೆಚ್ಚಿದೆ ಮತ್ತು ಕೆಲವು ತಂಡಗಳಿಗೆ ಇನ್ನು ಎರಡು ಪಂದ್ಯ ಆಡುವ ಅವಕಾಶವಿದೆ. ಹಾಗಾಗಿ ಅವುಗಳು ಸೋತರಷ್ಟೆ ಆರ್‌ಸಿಬಿಗೆ ಅವಕಾಶ. ಒಂದೊಂದೆ ತಂಡಗಳ ವಿವರ ನೋಡೋಣ.

ಡೆಲ್ಲಿ ಕ್ಯಾಪಿಟಲ್ಸ್

13 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕ ಗಳಿಸಿರುವ ಉತ್ತಮ ಎನ್ನಬಹುದಾದ +255 ನೆಟ್ ರನ್‌ರೇಟ್ ಹೊಂದಿದೆ. ಅದು ಶನಿವಾರ ಮುಂಬೈ ಎದುರು ಸೆಣಸಲಿದೆ. ಅಲ್ಲಿ ಸೋತರೂ ಅದರ ಪ್ಲೇ ಆಫ್ ಕನಸು ಭಗ್ನಗೊಳ್ಳಲಿದೆ. ಅದು ಆರ್‌ಸಿಬಿಗೆ ರಹದಾರಿ ಮಾಡಿಕೊಡುತ್ತದೆ. ಒಂದು ವೇಳೆ ಆ ಪಂದ್ಯ ಗೆದ್ದಲ್ಲಿ ಅದು ಪ್ಲೇ ಆಫ್ ಪ್ರವೇಶಿಸುತ್ತದೆ ಮತ್ತು ಆರ್‌ಸಿಬಿ ಮನೆಗೆ ಹೋಗುತ್ತದೆ. ಏಕೆಂದರೆ ಡೆಲ್ಲಿ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಹೆಚ್ಚಿದೆ.

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಹೈದರಾಬಾದ್ ಸನ್‌ರೈಸರ್ಸ್

12 ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 10 ಅಂಕ ಗಳಿಸಿರುವ ಹೈದರಾಬಾದ್ ತಂಡ -270 ರನ್ ರೇಟ್ ಹೊಂದಿದೆ. ಅದು ಮಂಗಳವಾರ ಚನ್ನೈ ಎದುರು ನಡೆಯುವ ಪಂದ್ಯದಲ್ಲಿ ಸೋಲಬೇಕು ನಂತರ ಭಾನುವಾರ ನಡೆಯುವ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಗೆಲ್ಲಬೇಕು. ಆಗ ಅದು ಒಟ್ಟು 12 ಅಂಕ ಗಳಿಸಿರುತ್ತದೆ (ಆರ್‌ಸಿಬಿಗಿಂತ ಕಡಿಮೆ)

ಪಂಜಾಬ್ ಕಿಂಗ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಪಂಜಾಬ್ ಕಿಂಗ್ಸ್ -043 ನೆಟ್ ರನ್ ರೇಟ್ ಹೊಂದಿದೆ. ಈ ತಂಡವು ಭಾನುವಾರ ಹೈದರಾಬಾದ್ ಎದುರು ನಡೆಯುವ ಪಂದ್ಯದಲ್ಲಿ ಸೋತರೆ ಆರ್‌ಸಿಬಿಗೆ ಅನುಕೂಲ. ಆಗ ಪಂಜಾಬ್ ಒಟ್ಟು 14 ಅಂಕ ಗಳಿಸಿರುತ್ತದೆ ಅಷ್ಟೇ.

ಕೋಲ್ಕತ್ತಾ ನೈಟ್ ರೈಡರ್ಸ್

13 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ +160 ನೆಟ್ ರನ್ ರೇಟ್ ಹೊಂದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಬುಧವಾರ ಲಕ್ನೋ ಸೂಪರ್ ಜೈಂಟ್ಸ್ ಎದುರು ಆಡಲಿದ್ದು ಅಲ್ಲಿ ಸೋತರೆ ಅದು ಮನೆಗೆ ಹೋಗುತ್ತದೆ. ಏಕೆಂದರೆ ಅದು ಕೇವಲ 12 ಅಂಕಗಳಿಗೆ ಸೀಮತವಾಗಲಿದೆ.

ಇಷ್ಟೆಲ್ಲಾ ಆಗಬೇಕಾದರೆ ಆರ್‌ಸಿಬಿ ತನ್ನ ಕಡೆಯ ಪಂದ್ಯ ಗುಜರಾತ್ ಎದುರು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕು. ಅಲ್ಲಿ ಸೋತರೆ ಉಳಿದ ತಂಡಗಳಿಗೆ ವರವಾಗುತ್ತದೆ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಮುಂಬೈ ತಂಡ ಗೆಲ್ಲಲಿ ಎಂದು ಆರ್‌ಸಿಬಿ ಹಾರೈಸಬೇಕಾಗಿದೆ. ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ವಿರುದ್ಧ ಆಡಲಿದೆ. ಆ ಎರಡನ್ನು ಗೆದ್ದರೆ ಆ ಎರಡೂ ತಂಡಗಳನ್ನು ತಮ್ಮೊಡನೆ ಮನೆಗೆ ಕರೆದುಕೊಂಡು ಹೋಗಬಹುದಾಗಿದೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...