Homeಕರ್ನಾಟಕಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

- Advertisement -
- Advertisement -

ಗನ್‌ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಹೇಳಿಕೆಯನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೀಡಿದ್ದು, ಮಡಿಕೇರಿಯಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಜಾಗರಣಾ ವೇದಿಕೆ ಶಸ್ತ್ರಾಸ್ತ್ರ ತರಬೇತಿ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

ಪೊನ್ನಂಪೇಟೆಯಲ್ಲಿ ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ ಹಾಗೂ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಫೋಟೋಗಳು ವೈರಲ್‌ ಆದ ಬಳಿಕ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ, ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ನೀಡಿರುವ ಹೇಳಿಕೆಗೂ ಸಿ.ಟಿ.ರವಿಯವರ ಪ್ರತಿಕ್ರಿಯೆಗೂ ವಿರೋಧಾಭಾಸ ಕಂಡು ಬರುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


“ವಿಚಾರ ತಿಳಿಯದೆ ಆಕ್ಷೇಪಿಸುತ್ತಿರುವರಿಗೆ ತಲೆ ಸರಿಯಿಲ್ಲ. ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಸ್ತ್ರಾಸ್ತ್ರ ತರಬೇತಿ ಕೊಡುವುದಿಲ್ಲ. ಯೋಗ ಕಲಿಸುವ, ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯಲಿದೆ”
ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ (ಪ್ರಜಾವಾಣಿ ವರದಿ). ಆದರೆ ಸಿ.ಟಿ.ರವಿಯವರ ಹೇಳಿಕೆ ಇದಕ್ಕೆ ತದ್ವಿರುದ್ಧವಾಗಿದ್ದು, ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಕನ್ನಡದ ವಿಶ್ವಾಸಾರ್ಹ ಮಾಧ್ಯಮ ‘ಪ್ರಜಾವಾಣಿ’ಯಲ್ಲಿ ಆಗಿರುವ ವರದಿ

ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿ.ಟಿ.ರವಿ, “ಅದರಲ್ಲೇನಿದೆ ವಿಶೇಷ. ಪ್ರತಿ ವರ್ಷ ರಾಜ್ಯ ಮತ್ತು ಜಿಲ್ಲೆಗಳಿಂದ ಸ್ವರಕ್ಷಣೆಗಾಗಿ ತರಬೇತಿ ನೀಡಲಾಗುತ್ತದೆ. ಪೊಲೀಸ್ ಇಲಾಖೆಯಿಂದಲೂ ಕೊಡುತ್ತಾರೆ. ಅದರಲ್ಲೇನಿದೆ? ಏರ್‌ಗನ್‌ ಟ್ರೈನಿಂಗ್‌ ಕೊಟ್ಟಿದ್ದಾರೆಯೇ ಹೊರತು ಎ.ಕೆ. 47 ಗನ್‌ ಟ್ರೈನಿಂಗ್ ಕೊಟ್ಟಿಲ್ಲ. ಬಾಂಬ್‌ ಹಾಕುವ ಟ್ರೈನಿಂಗ್ ಕೊಟ್ಟಿಲ್ಲ. ಆತ್ಮರಕ್ಷಣೆಯ ತರಬೇತಿಯನ್ನು ಪೊಲೀಸ್ ಇಲಾಖೆಯೂ ಆಯೋಜನೆ ಮಾಡುತ್ತದೆ, ಬಜರಂಗದಳವೂ ಮಾಡುತ್ತದೆ. ಅದರಲ್ಲೇನಿದೆ ವಿಶೇಷ?” ಎಂದು ಪ್ರಶ್ನಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಘಟನೆಗೆ ವ್ಯಾಪಕವಾದ ಟೀಕೆಗಳು ವ್ಯಕ್ತವಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳು ಹರಿದಾಡಿವೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿರಿ: ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ನಾಲ್ಕಾರು ಬಾರಿ ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸುತ್ತಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...