Homeಅಂತರಾಷ್ಟ್ರೀಯ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

- Advertisement -
- Advertisement -

ನ್ಯಾಟೋ ಮಿಲಿಟರಿ ಮೈತ್ರಿಗೆ ಸೇರುವ ಮೂಲಕ ಫಿನ್‌ಲ್ಯಾಂಡ್ ಮತ್ತು ಸ್ವೀಡನ್‌ ದೇಶಗಳು ಗಂಭೀರ ತಪ್ಪುಗಳನ್ನು ಮಾಡುತ್ತಿದ್ದು, ಇದರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ರಷ್ಯಾ ಸೋಮವಾರ ಎಚ್ಚರಿಸಿದೆ.

“ಇದು ದೂರಗಾಮಿ ಪರಿಣಾಮಗಳಿಂದ ಕೂಡಿರುವ ಮತ್ತೊಂದು ಗಂಭೀರ ತಪ್ಪು” ಎಂದು ಉಪ ವಿದೇಶಾಂಗ ಸಚಿವ ಸೆರ್ಗೆಯ್ ರಿಯಾಬ್ಕೋವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದರಿಂದಾಗಿ “ಸೇನಾ ಉದ್ವಿಗ್ನತೆಯ ಸಾಮಾನ್ಯ ಮಟ್ಟವು ಹೆಚ್ಚಾಗುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಸ್ತುತ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎಂಬ ಕೆಲವು ಫ್ಯಾಂಟಮ್ ಕಲ್ಪನೆಗಳಿಗೆ ಸಾಮಾನ್ಯ ಜ್ಞಾನವನ್ನು ಬಲಿಕೊಡುತ್ತಿರುವುದು ವಿಷಾದನೀಯ. ಈ ಕ್ರಮದಿಂದ ಉಭಯ ದೇಶಗಳ ಭದ್ರತೆಯು ಬಲಗೊಳ್ಳುವುದಿಲ್ಲ ಮತ್ತು ಇದರ ವಿರುದ್ದ ರಷ್ಯಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ರಿಯಾಬ್ಕೋವ್ ಹೇಳಿದ್ದಾರೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಇದನ್ನು ನಾವು ಸಹಿಸಿಕೊಳ್ಳುತ್ತೇವೆ ಎಂಬ ಭ್ರಮೆ ಅವರಿಗೆ ಇರಬಾರದು ಎಂದು ಅವರು ಹೇಳಿದ್ದಾರೆ.

ದಶಕಗಳ ಕಾಲ ಪಾಲಿಸಿಕೊಂಡು ಬಂದಿದ್ದ ಮಿಲಿಟರಿ ಅಲಿಪ್ತ ನೀತಿಯನ್ನು ತೊಡೆದುಹಾಕಲು ಫಿನ್‌ಲ್ಯಾಂಡ್ ಮತ್ತು ಸ್ವೀಡನ್ ದೇಶಗಳು ಸಿದ್ಧವಾಗಿವೆ. ರಶಿಯಾದ ಆಕ್ರಮಣದ ವಿರುದ್ಧ ರಕ್ಷಣೆಯಾಗಿ ಈ ದೇಶಗಳು NATO ಪಡೆಗೆ ಸೇರುತ್ತಿದೆ ಎಂದು ವರದಿಯಾಗಿದೆ.

ತನ್ನ ಜೊತೆಗೆ 1,300 ಕಿಲೋಮೀಟರ್ (800 ಮೈಲಿ) ಗಡಿಯನ್ನು ಹಂಚಿಕೊಂಡಿರುವಗ ಫಿನ್‌ಲ್ಯಾಂಡ್‌ಗೆ ‘ಬದಲಿ ಕ್ರಮಗಳನ್ನು’ ತೆಗೆದುಕೊಳ್ಳಲಾಗುವುದು ಎಂದು ರಷ್ಯಾ ಎಚ್ಚರಿಸಿದೆ.

ನ್ಯಾಟೊ ಸದಸ್ಯತ್ವಕ್ಕಾಗಿ ದೇಶವು ಅರ್ಜಿ ಸಲ್ಲಿಸಿರುವ ಕುರಿತು ಫಿನ್ನಿಷ್ ಅಧ್ಯಕ್ಷ ಸೌಲಿ ನಿನಿಸ್ಟೊ ಶನಿವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ. ಫಿನ್‌ಲ್ಯಾಂಡ್‌ನ ಮಿಲಿಟರಿ ಆಲಿಪ್ತ ನೀತಿಯನ್ನು ಕಿತ್ತೊಗೆಯುವುದನ್ನು ಪುಟಿನ್ ‘ತಪ್ಪು’ ಎಂಬಂತೆ ನೋಡಿದ್ದಾರೆ ಎಂದು ರಷ್ಯಾ ಹೇಳಿದೆ.

ಇದನ್ನೂ ಓದಿ: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ? 

ಸ್ವೀಡನ್‌ನ ಆಡಳಿತ ಪಕ್ಷವು ಸದಸ್ಯತ್ವವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದರಿಂದ ಫಿನ್‌ಲ್ಯಾಂಡ್ ಭಾನುವಾರ NATO ಗೆ ಸೇರುವ ತನ್ನ ತೀರ್ಮಾನವನ್ನು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...