Homeರಾಷ್ಟ್ರೀಯಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ...

ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

- Advertisement -
- Advertisement -

ಉತ್ತರ ಪ್ರದೇಶ ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೊ ಚಿತ್ರೀಕರಣ ಸಮಯದಲ್ಲಿ ವುಝೂ ಖಾನಾದಲ್ಲಿ ಕಂಡು ಬಂದ ‘ಕಾರಂಜಿ’ಯನ್ನು ಬಲಪಂಥೀಯ ವಕೀಲರು ‘ಶಿವಲಿಂಗ’ ಎಂದು ಪ್ರತಿಪಾದಿಸಿದ್ದರು. ಈ ಹಿನ್ನಲೆಯಲ್ಲಿ ನಗರದ ನ್ಯಾಯಾಲಯವು ವುಝೂ ಖಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಸುಪ್ರೀಂಕೋರ್ಟ್‌‌, “ಶಿವಲಿಂಗ ನಿಖರವಾಗಿ ಎಲ್ಲಿ ಕಂಡುಬಂದಿದೆ” ಎಂದು ವಾರಣಾಸಿ ಆಡಳಿತವನ್ನು ಕೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಆಡಳಿತಕ್ಕೆ ಶಿವಲಿಂಗದ ಬಗ್ಗೆ ಪ್ರಶ್ನಿಸಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ನಾವು ವರದಿಯನ್ನು ನೋಡಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಾಳೆಯವರೆಗೆ ಸಮಯ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗಿರುವ ಸ್ಥಳವನ್ನು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸೀಲ್ ಮಾಡಲಾಗಿದೆ ಎಂದು ತುಷಾರ್‌‌ ಮೆಹ್ತಾ ಹೇಳಿದ್ದಾರೆ.

ದೇವಸ್ಥಾನದ ಪರ ದೂರುದಾರರು ಮಸೀದಿ ಚಿತ್ರೀಕರಣದ ವೇಳೆ ಮಸೀದಿಯ ಕೊಳದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಕೊಳವನ್ನು ನಮಾಜ್‌ ಮಾಡುವುದಕ್ಕಿಂತ ಮೊದಲು ಕೈಕಾಲು ಶುದ್ದೀಕರಣಕ್ಕೆ ಬಳಸಲಾಗುತ್ತದೆ. ಇದಕ್ಕೆ ವುಝೂ ಖಾನ ಎಂದು ಕರೆಯಲಾಗುತ್ತದೆ.

ಕೊಳದಲ್ಲಿ ‘ಶಿವಲಿಂಗ’ ಕಂಡುಬಂದರೆ, ಆ ಪ್ರದೇಶವನ್ನು ರಕ್ಷಿಸಬೇಕು, ಆದರೆ ಮುಸ್ಲಿಮರು ನಮಾಜ್‌ಗೆ ಮಸೀದಿಗೆ ಬರಲು ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಿದೆ.

ಈ ಮಧ್ಯೆ, ಸಮೀಕ್ಷೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಸ್ಥಳೀಯ ವಾರಣಾಸಿ ನ್ಯಾಯಾಲಯವು ವಕೀಲ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಿದೆ.

ಇದನ್ನೂ ಓದಿ: ಕೋಮು ಕುದುರೆಯೇರಿ ಚುನಾವಣೆ ಗೆಲ್ಲುವ ಬಿಜೆಪಿ ತಂತ್ರ: ಚುನಾವಣೆ ಇರುವ ರಾಜ್ಯಗಳೆ ಟಾರ್ಗೆಟ್

ನಿನ್ನೆ, ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಬಲಪಂಥೀಯ ಅರ್ಜಿದಾರರ ಹೇಳಿಕೆ ನೀಡಿದ ನಂತರ, ಸ್ಥಳೀಯ ನ್ಯಾಯಾಲಯವು ಅದನ್ನು ಸೀಲ್ ಮಾಡಲು ಆದೇಶಿಸಿತ್ತು. ಮಸೀದಿ ಸಮಿತಿ ಇದನ್ನು ತಿರಸ್ಕರಿಸಿದ್ದು, ಅದು “ಕಾರಂಜಿ”ಯಾಗಿದ್ದು ಶಿವಲಿಂಗವಲ್ಲ ಎಂದು ಪ್ರತಿಪಾದಿಸಿದೆ.

“ಮಸೀದಿಯ ವಿಡಿಯೊ ಸಮೀಕ್ಷೆಯ ವರದಿ ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಸ್ಥಳವನ್ನು ಸೀಲ್ ಮಾಡಲು ಆದೇಶ ನೀಡಲು ಹೇಗೆ ಸಾಧ್ಯ?” ಎಂದು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಪ್ರಶ್ನಿಸಿದೆ.

“ಇತರರ ಅರ್ಜಿಯನ್ನು ಆಧರಿಸಿ ನ್ಯಾಯಾಲಯವು ಹೇಗೆ ಮುಂದುವರೆಯಿತು? ಸ್ಥಳವನ್ನು ಸೀಲ್ ಮಾಡಲು ಹೇಗೆ ಸಾಧ್ಯ? ಈ ಆದೇಶಗಳು ಹೇಗೆ ಜಾರಿಯಾಗುತ್ತವೆ ಎಂಬುದನ್ನು ನೋಡಿ” ಎಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೇಳಿದೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಐವರು ಮಹಿಳಾ ಅರ್ಜಿದಾರರು ಮಸೀದಿ ಹೊರ ಗೋಡೆಗಳ ಮೇಲಿನ ವಿಗ್ರಹಗಳ ಮುಂದೆ ಮತ್ತು ಇತರ ‘ಹಳೆಯ ದೇವಾಲಯದ ಸಂಕೀರ್ಣದೊಳಗೆ ಗೋಚರಿಸುವ ಮತ್ತು ಅಗೋಚರ ದೇವತೆಗಳ’ ದೈನಂದಿನ ಪ್ರಾರ್ಥನೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರದೇಶವನ್ನು ಪ್ರಸ್ತುತವಾಗಿ ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗುತ್ತದೆ.

ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿತು. ಅದಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...