Homeಕರ್ನಾಟಕಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಬಜರಂಗದಳದ ನಾಯಕರು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ಮಾಡಲು ಹೊರಟಿದ್ದಾರೋ?: ಕುಮಾರಸ್ವಾಮಿ ಕಿಡಿ

ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿಯಾಗಿದ್ದ, ಅಂತವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶಾಲೆಗಳಲ್ಲಿ ಮಕ್ಕಳಿಗೆ ಶಸ್ತ್ರಾಭ್ಯಾಸವನ್ನು ನೀಡಲು ಬಜರಂಗದಳ ಮುಖಂಡರು ಮುಂದಾಗಿದ್ದು, ಏರ್‌ಗನ್ ಶಸ್ತ್ರಾಭ್ಯಾಸ ಎಂದು ಹೇಳಿದ್ದಾರೆ. ಇವರು ಮಕ್ಕಳನ್ನು ಸಹ ಉಗ್ರಗಾಮಿಗಳ ಗುಂಪುಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? ಅಥವಾ ಸಮಾಜದಲ್ಲಿ ಶಾಂತಿ ಮೂಡಿಸುವ ನಿಟ್ಟಿನಲ್ಲಿ ಉತ್ತೇಜಿಸಲು ಹೊರಟಿದ್ದಾರಾ? ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರು ಹಾಸನದ ಅರಕಲಗೂಡು ತಾಲ್ಲೂಕಿನ, ಮಲ್ಲಿತಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಒಂದು ಕಡೆ ಸಮಾಜದ ಭಾವೈಕ್ಯತೆ ಹಾಗೂ ಸಾಮರಸ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ ಸಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದನ್ನೇ ಗಾಂಧೀಜಿ ಸಹ ಬಯಸಿದ್ದರು. ಶಸ್ತ್ರದಿಂದ ನಮ್ಮ ಹೋರಾಟ ಅಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಹೋರಾಟ ಹಾಗೂ ಜಯಗಳು ನಮ್ಮ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತದ್ದಾಗಬೇಕು. ಶಾಂತಿಯುತ ಹೋರಾಟದಿಂದ ನಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬೇಕೆ ಹೊರತು ಶಸ್ತ್ರಾಭ್ಯಾಸ ಗಳನ್ನು ಮಾಡಿ ಅಥವಾ ಶಸ್ತ್ರಗಳನ್ನು ಇಟ್ಟುಕೊಂಡು ಪರಿಹಾರ ಪಡೆಯಲು ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು: ಭಗತ್‌‌ ಸಿಂಗ್

ಪಠ್ಯಕ್ರಮದ ಬದಲಾವಣೆ ಕುರಿತು ಮಾತನಾಡಿದ ಅವರು, “ಯಾವುದೇ ವಿಚಾರವಿರಲಿ ಮಕ್ಕಳಿಗೆ ಅನುಕೂಲವಾಗುವ ವಿಚಾರಗಳನ್ನು ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಬೇಕು. ಗುಣಾತ್ಮಕವಾದ ಶಿಕ್ಷಣ ಬೇಕು. ಮಕ್ಕಳಿಗೆ ಮೊದಲು ಕಲಿಸಬೇಕಾದ್ದು ಮನುಷ್ಯತ್ವವೇ ಹೊರತು ಯಾವುದೇ ವ್ಯಕ್ತಿಯ ಬಗ್ಗೆ ಅಲ್ಲ. ಹೃದಯ ವೈಶಾಲ್ಯತೆ ಹಾಗೂ ಬದುಕು ಕಲ್ಪಿಸಿಕೊಳ್ಳುವ ಕಲಿಕೆಯನ್ನು ನೀಡಬೇಕು ಎನ್ನುವುದು ನನ್ನ ಆಶಯ” ಎಂದು ಅವರು ಹೇಳಿದ್ದಾರೆ.

“ಭಗತ್‌ಸಿಂಗ್ ಒಬ್ಬ ದೇಶಪ್ರೇಮಿ, ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದಂತ ವ್ಯಕ್ತಿ. ಅಂತಹವರ ವಿಷಯಗಳನ್ನು ತೆಗೆದು ಹಾಕಿ ಹೆಡ್ಗೆವಾರ್ ಸೇರಿಸಲು ಹೊರಟಿದ್ದಾರೆ. ಗೋಡ್ಸೆ, ಸಾವರ್ಕರ್ ಅಂಥವರ ಪಠ್ಯವನ್ನು ತರುತ್ತಾರೋ ಎಂಬ ಬಿಜೆಪಿಯ ಅಜೆಂಡಾ ನನಗೂ ಗೊತ್ತಿಲ್ಲ. ಇದರಿಂದ ಈ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಆಗುವ ವಾತಾವರಣ ಬಿಜೆಪಿಯವರಿಗೆ ಬೇಕಾಗಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ‘ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!’- ‘ಭಗತ್‌ ಸಿಂಗ್ ಜೈಲ್ ಡೈರಿ’

“ದಿ ಕಾಶ್ಮೀರ ಪೈಲ್ಸ್ ಚಿತ್ರ ನಿರ್ಮಿಸಿದಿರಿ. ಇದರಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಅವಕಾಶ ನೀಡಿದ್ದೀರಾ? ಅಲ್ಲಿನ ರಾಜಕಾರಣಿಗಳು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗಮನಿಸಿದ್ದೇನೆ. ಇಲ್ಲಿ ದ್ವೇಷದ ವಾತಾವರಣ ಬಿತ್ತುವ ಕಾರ್ಯವನ್ನು ಮಾಡಬೇಡಿ. ಪ್ರತಿಯೊಬ್ಬರಲ್ಲೂ ಸಹೋದರತ್ವ ಸಾಮರಸ್ಯ ಹಾಗೂ ಭಾವೈಕ್ಯತೆ ಹೇಗಿರಬೇಕು ಎಂಬ ಬಗ್ಗೆ ಗಮನ ನೀಡಿ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...