Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...