Homeಕರ್ನಾಟಕಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು?

- Advertisement -
- Advertisement -

ಅಪ್ರತಿಮ ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಕ್ಕಾಗಿ ಜೀವವನ್ನೇ ಬಲಿಕೊಟ್ಟ ಮಹಾನ್‌ ವ್ಯಕ್ತಿ ಭಗತ್‌ಸಿಂಗ್ ಕುರಿತ ಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ರಚನೆಯಾಗಿದ್ದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಹಲವು ಬದಲಾವಣೆಗಳನ್ನು ಮಾಡಿದೆ. ಕನ್ನಡ ಖ್ಯಾತ ಲೇಖಕರಾದ ಪಿ.ಲಂಕೇಶ್‌, ಸಾ.ರಾ.ಅಬೂಬುಕರ್‌ ಅವರ ಪಠ್ಯಗಳ ಜೊತೆಗೆ ಸರಳ ಸಜ್ಜನಿಕೆಗೆ ಹೆಸರಾದ ಡಾ.ಜಿ.ರಾಮಕೃಷ್ಣ ಅವರು ಬರೆದಿರುವ ‘ಭಗತ್‌ಸಿಂಗ್‌’ ಪಠ್ಯವನ್ನು ಹೊರಗಿಡಲಾಗಿದೆ.

ಜಾತಿವಾದ, ಮತೀಯವಾದವನ್ನು ಪ್ರತಿಪಾದಿಸಿದ, ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ‘ಧ್ವಜ’ (ಭಗವಾಧ್ವಜ)ದ ಕುರಿತು ಮಾತನಾಡುವ ಈ ಪಠ್ಯವನ್ನು ಸೇರಿಸಿಕೊಂಡು, ಆರ್‌ಎಸ್‌ಎಸ್‌ ಕುರಿತು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಭಗತ್‌ಸಿಂಗ್ ಪಠ್ಯವನ್ನು ಕೈಬಿಡಲು ಕಾರಣವೇನು? ಎರಡು ಪುಟಗಳ ಈ ಪುಟ್ಟ ಪಾಠದಲ್ಲಿ ಅಂತಹ ಯಾವ ಆಕ್ಷೇಪಣೀಯ ಅಂಶಗಳಿವೆ? ಅಷ್ಟಕ್ಕೂ ಸರ್ಕಾರಕ್ಕೆ ಭಗತ್‌ಸಿಂಗ್‌ ಅವರನ್ನು ಕಂಡರೆ ಭಯ ಯಾಕೆ? ಒಬ್ಬ ಕ್ರಾಂತಿಕಾರಿ ಸ್ವಾತಂತ್ಯ್ರ ಯೋಧನ ಬಗ್ಗೆ ನಮ್ಮ ಮಕ್ಕಳಿಗೆ ಕಲಿಸಿದರೆ ತಪ್ಪೇನು? ನಾಡಿನ ಜನತೆಯೇ ಓದಿ ನಿರ್ಧರಿಸಬೇಕೆಂದು ಜಿ.ರಾಮಕೃಷ್ಣ ಅವರು ಬರೆದಿರುವ ಈ ಪಾಠವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಓದಿ….


ಪಠ್ಯಪೂರಕ ಅಧ್ಯಯನ; ಪುಟ ಸಂಖ್ಯೆ-169


೩. ಭಗತ್‌ಸಿಂಗ್‌‌

– ಡಾ. ಜಿ. ರಾಮಕೃಷ್ಣ

ಪ್ರವೇಶ: ಭಾರತ ಸ್ವತಂತ್ರಗೊಂಡು ಸ್ವಾತಂತ್ರ್ಯದ ಸವಿಯನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆದರೆ ಆ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಮಡಿದವರು ಅಸಂಖ್ಯಾತ ದೇಶಭಕ್ತರು. ಸ್ವಾತಂತ್ರ್ಯ ತ್ಯಾಗ ಬಲಿದಾನದ ಫಲ. ವೀರ ಸ್ವಾತಂತ್ರ್ಯ ಯೋಧರ ಬಲಿದಾನವನ್ನು ಸ್ಮರಿಸುವುದು ಭಾರತೀಯರೆಲ್ಲರ ಜವಾಬ್ದಾರಿ.

ಹನ್ನೆರಡು ವರ್ಷದ ಒಬ್ಬ ಬಾಲಕ ಅಮೃತಸರದ ಜಲಿಯನ್‌ ವಾಲಾಬಾಗ್‌ನಲ್ಲಿ ಮೂಕನಂತೆ ಅತ್ತಿಂದಿತ್ತ ಓಡಾಡುತ್ತಿದ್ದ. ಶಾಲೆಗೆ ಹೋಗಬೇಕಾಗಿದ್ದ ಆ ಬಾಲಕ ಅಂದು ತನ್ನ ಹಳ್ಳಿಯಿಂದ ರೈಲಿನಲ್ಲಿ ಅಮೃತಸರದಲ್ಲಿ ಬಂದಿಳಿದಿದ್ದ. ಒಂದೆರೆಡು ಪುಸ್ತಕಗಳು ಹಾಗೂ ಒಂದು ಪುಟ್ಟ ಡಬ್ಬಿಯಿದ್ದ ಕೈಚೀಲ ಅವನ ಬಳಿಯೇ ಇತ್ತು. ತುಸು ಹೊತ್ತಿನ ನಂತರ ಹುಡುಗ ಜಲಿಯನ್‌ ವಾಲಾಬಾಗ್‌ನಲ್ಲಿ ಒಂದೆಡೆ ಅಂತರ್ಮುಖಿಯಾಗಿ ಬಹುಕಾಲ ನಿಂತ. ನಂತರ ಅಲ್ಲಿದ್ದ ಸ್ವಲ್ಪ ಮಣ್ಣನ್ನು ತೆಗೆದುಕೊಂಡು ಹಣೆಗಿಟ್ಟುಕೊಂಡ. ಇನ್ನಷ್ಟನ್ನು ತನ್ನಲ್ಲಿದ್ದ ಡಬ್ಬಿಯಲ್ಲಿ ಶೇಖರಿಸಿಕೊಂಡು ಹಿಂತಿರುಗಿದ. ರಾತ್ರಿ ಮನೆಗೆ ಹಿಂತಿರುಗಿದಾಗ ಅವನ ಸಹೋದರಿ ಎಂದಿನಂತೆ ಅವನನ್ನು ಊಟಕ್ಕೆಬ್ಬಿಸಿದರೆ ಒಲ್ಲೆನೆಂದು ಮುಖ ತಿರುಗಿಸಿದ. ಅವನಿಗೆ ಪ್ರಿಯವಾದ ಮಾವಿನ ಹಣ್ಣೊಂದನ್ನು ಕೂಡ ನಿರಾಕರಿಸಿ, ಅವಳನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು. ತನ್ನ ಡಬ್ಬಿಯಲ್ಲಿದ್ದ ಮಣ್ಣನ್ನು ತೋರಿಸಿದ. ರಕ್ತದಲ್ಲಿ ಕಲೆಸಿದಂತಿದ್ದ ಆ ಮಣ್ಣು ಎಲ್ಲಿಯದೆಂದು ತಿಳಿದಾಗ ಅವನ ಉಪವಾಸಕ್ಕೆ ಕಾರಣ ಅವಳಿಗೆ ಗೊತ್ತಾಯಿತು. ‘ತ್ಯಾಗದ ಪ್ರತೀಕ ಆ ಮಣ್ಣು’ ಎಂದವಳಿಗೆ ತಿಳಿಯ ಹೇಳಿದ.

ಏಪ್ರಿಲ್‌ ೧೩, ೧೯೧೯ ರಂದು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡಿದ್ದವರಿಗೆ ನಮನ ಸಲ್ಲಿಸಲು ಹೋಗಿದ್ದ ಆ ಬಾಲಕ ಭಗತ್‌ಸಿಂಗ್‌. ಇಂದು ಜಲಿಯನ್‌ ವಾಲಾಬಾಗ್‌ನಲ್ಲಿರುವ ಒಕ್ಕಣೆ ಹೀಗಿದೆ: “ಏಪ್ರಿಲ್‌- ೧೩- ೧೯೧೯ ರಂದು ಬ್ರಿಟೀಷರ ಗುಂಡುಗಳಿಗೆ ಆಹುತಿಯಾದ ಸುಮಾರು ೨೦೦೦ ಮುಗ್ಧ ಹಿಂದೂ, ಸಿಖ್‌ ಮತ್ತು ಮುಸಲ್ಮಾನರ ಸಮ್ಮಿಳಿತ ರಕ್ತದಿ೦ದ ಈ ಪ್ರದೇಶ ಪಾವನವಾಗಿದೆ.” ಭಗತ್‌ಸಿಂಗ್‌ ಅಲ್ಲಿಗೆ ಹೋಗಿ ಅಂತರ್ಮುಖಿಯಾಗಿ ನಿಂತಾಗ ಈ ಭಾವನೆ ಅವನ ಮನಸ್ಸಿನಲ್ಲಿ ಹಾಯುತ್ತಿರಬೇಕು.

ಜಲಿಯನ್‌ ವಾಲಾಬಾಗ್‌ನಲ್ಲಿ ನೆರೆದಿದ್ದ ಜನಕ್ಕೆ ತಾವೊಂದು ರಾಜಕೀಯ ಆಂದೋಳನದಲ್ಲಿ ಭಾಗಿಗಳಾಗಬೇಕೆಂಬ ಆಕಾಂಕ್ಷೆಯಾಗಲಿ ಹುತಾತ್ಮರಾಗಬೇಕೆಂಬ ಅಭಿಲಾಷೆಯಾಗಲಿ ಇದ್ದಿರಲಾರದು. ಜನರಲ್‌‌ ಡಯರ್‌ ಸಹ ತನ್ನ ಪೈಶಾಚಿಕ ಘಾತುಕತೆಯನ್ನುಳಿದ ಬೇರಾವ ಭಾವನೆಯಿಂದಲೂ ಪ್ರೇರಿತನಾಗಿದ್ದ ಎಂದು ನಂಬುವುದು ಕಷ್ಟ. ಕ್ರೂರ ಮಾರ್ಗದಿಂದ ಭಾರತೀಯರನ್ನೂ ಬಗ್ಗು ಬಡಿಯಬಹುದೆಂದು ಅವನ ಎಣಿಕೆ. ಬ್ರಿಟಷ್‌ ಸಾಮ್ರಾಜ್ಯದ ಅನವರತ ಏಳಿಗೆಗೆ ಇದಕ್ಕಿಂತಲೂ ಸುಲಭವಾದ ಮಾರ್ಗವನ್ನು ಚಿಂತಿಸಲು ಅವನು ಅಶಕ್ತನಾಗಿದ್ದ. ಒಟ್ಟು ೧೬೫೦ ಸುತ್ತುಗಳಷ್ಟು ಗುಂಡಿನ ಮಳೆ ಕರೆಯಿಸಿದ್ದ ಅವನು ಹೆಮ್ಮೆಯಿಂದ ಹೇಳಿಕೊಂಡದ್ದು ಇದು “ಒಂದೇ ಒಂದು ಗುಂಡು ಸಹ ದಂಡವಾಗಲಿಲ್ಲ”. ಅಂದು ಪ್ರಾಣ ಕಳೆದುಕೊಂಡವರ ಸಂಖ್ಯೆ ಇದನ್ನು ಖಚಿತಗೊಳಿಸಿತ್ತು.

ಜಲಿಯನ್‌ ವಾಲಾಬಾಗಿನ ರಕ್ತಸಿಕ್ತವಾಗಿದ್ದ ಮಣ್ಣನ್ನು ನಿಧಿಯಂತೆ ಕಾಪಾಡಿಕೊಂಡು ಬಂದಿದ್ದ ಬಾಲಕ ಭಗತ್‌ಸಿಂಗ್‌ ಮುಂದೆ ತನ್ನ ಕ್ರಾಂತಿಕಾರಿ ಗುಂಪಿನ ಸಹಾಯದಿಂದ ಬ್ರಿಟಿಷ್‌ ಸರ್ಕಾರದ ವಿರುದ್ಧ ತನ್ನ ಸೇಡನ್ನು
ತೀರಿಸಿಕೊಳ್ಳುತ್ತಾನೆ. ಇದರ ಫಲವಾಗಿ ಮರಣ ದಂಡನೆಗೆ ಈಡಾಗಿ ತನ್ನ ಸಹಚರರಾದ ಸುಖ್‌ದೇವ್‌, ರಾಜ್‌ಗುರು, ಭಟುಕೇಶ್ವರ ದತ್ತರೊಂದಿಗೆ ಹಸನ್ಮುಖಿಯಾಗಿ ತಾಯಿ ಭಾರತಾಂಬೆಯ ಸ್ವಾತಂತ್ರ್ಯದ ಹಣತೆಗೆ ತೈಲವೆಂಬಂತೆ ವೀರಯೋಧನಾಗಿ ಅಮರನಾದನು.

ಇಂಕ್ವಿಲಾಬ್‌ ಜಿಂದಾಬಾದ್‌…!

ಕೃತಿಕಾರರ ಪರಿಚಯ

ಡಾ. ಜಿ. ರಾಮಕೃಷ್ಣ : ಗಂಪಲಹಳ್ಳಿ ರಾಮಕೃಷ್ಣರವರು ಕ್ರಿ.ಶ. ೧೯೩೯ರಲ್ಲಿ ಬೆಂಗಳೂರು ಗ್ರಾಮಾಂತರ ಮಾಗಡಿ ಬಳಿಯ ಕೆಂಪಸಾಗರದಲ್ಲಿ ಜನಿಸಿದರು. ಮಹಾರಾಷ್ಟ್ರದ ಅಂಬೇಡ್ಕರ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರೊಫೆಸರಾಗಿ, ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜಿನಲ್ಲಿ ಇಂಗ್ಲಿಷ್‌‌ ಪ್ರಾಧ್ಯಾಪಕರಾಗಿ, ಹಂಪಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.ದೇವಿಪ್ರಸಾದ್‌ ಮತ್ತು ಲೋಕಾಯತ ದರ್ಶನ, ಭಗತ್‌ಸಿಂಗ್‌, ಭೂಪೇಶಸುಪ್ತ, ಚೆಗೆವಾರ, ಲೆನಿನ್‌, ಅನುವಾದ – ಬಾ ನೊಣವೇ, ವಾನರನಿಂದ ಮಾನವ ದರ್ಶನ ಮತ್ತು ಹಲವಾರು ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನವನ್ನು ನೀಡಿ ಗೌರವಿಸಲಾಗಿದೆ. ಪ್ರಸ್ತುತ ಪಾಠವನ್ನು ಜಿ. ರಾಮಕೃಷ್ಣರ ‘ಭಗತ್‌ಸಿಂಗ್‌’ ಎಂಬ ಜೀವನ ಚರಿತ್ರೆಯಿಂದ ಆರಿಸಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...