ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನೀಡಲು ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿದೆ.
“ಇದೊಂದು ಐತಿಹಾಸಿಕ ದಿನ. ಸತ್ಯಕ್ಕೆ ಸೋಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ಸಾಬೀತಾಗಿದೆ. ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳುತ್ತೇನೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ನಾವು ಚುನಾವಣೆ ಬೇಕು ಆದರೆ ಒಬಿಸಿ ಮೀಸಲಾತಿ ಎಂದು ಹೇಳಿದ್ದೇವೆ. ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ಹೋಗಿ ಪಾಪ ಮಾಡಿದೆ. ಅದು ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡುವಂತೆ ನ್ಯಾಯಾಲಯದಲ್ಲಿ ಕೇಳಿತ್ತು” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ
ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ವರದಿಯನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಚುನಾವಣೆಯನ್ನು ಘೋಷಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ತನ್ನ ವರದಿಯನ್ನು ಮಂಡಿಸಿದ್ದು, ಅದರಲ್ಲಿ ‘ತ್ರಿವಳಿ ಪರೀಕ್ಷೆ’ ಅನುಸರಿಸಲಾಗಿದೆ ಎಂದು ಹೇಳಿತ್ತು.
ಸ್ಥಳೀಯ ಚುನಾವಣೆಗಳಲ್ಲಿ ಒಬಿಸಿ ಮೀಸಲಾತಿಯನ್ನು ತೆರವುಗೊಳಿಸದ ಸುಪ್ರೀಂ ಕೋರ್ಟ್‌ನ ಮೇ 10 ರ ಆದೇಶಕ್ಕೆ ಬದಲಾವಣೆಗಳನ್ನು ಕೋರಿ ಮಧ್ಯಪ್ರದೇಶ ಸರ್ಕಾರವು ತಿದ್ದುಪಡಿ ಅರ್ಜಿಯನ್ನು ಸಲ್ಲಿಸಿತ್ತು.
ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?
ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಎರಡು ವರ್ಷಗಳಿಂದ ನಡೆದಿರಲಿಲ್ಲ. ಹೀಗಾಗಿ ಅಲ್ಲಿ ಪ್ರಸ್ತುತ 23,000 ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಸ್ಥಾನಗಳು ಖಾಲಿ ಇದೆ.


