Homeಕರ್ನಾಟಕSSLC Result | ಎಸ್ಸೆಸ್ಸೆಲ್ಸಿ ರಿಸಲ್ಟ್‌‌ ಪ್ರಕಟ | ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

SSLC Result | ಎಸ್ಸೆಸ್ಸೆಲ್ಸಿ ರಿಸಲ್ಟ್‌‌ ಪ್ರಕಟ | ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ರಾಜ್ಯದ ಎಸ್‌ಎಸ್‌ಎಲ್‌ಸಿ ( SSLC | ಎಸ್ಸೆಸ್ಸೆಲ್ಸಿ ) ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ.  12:30ಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಬುಧವಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅವರು, “ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ” ಎಂದು ಅವರು ಹೇಳಿದ್ದರು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಕೂಡಾ ಫಲಿತಾಂಶಗಳನ್ನು ಕಳುಹಿಸಲಾಗುತ್ತದೆ ಎಂದು ಅವರು ಹೇಳಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ಈ ವರ್ಷ ಸುಮಾರು 8.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಹಿಜಾಬ್ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿವಾದಕ್ಕೆ ಒಳಗಾಗಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ತಲೆಗೆ ಬಟ್ಟೆ ಧರಿಸುವುದನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿತ್ತು. ಹಿಜಾಬ್ ಧಾರಣೆಗೆ ಅನುಮತಿ ನೀಡಬೇಡಿ ಎಂದು ಶಿಕ್ಷಕರಿಗೆ ಕೂಡಾ ಸಲಹೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...