Homeಸಿನಿಮಾಕ್ರೀಡೆಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

ಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...