Homeಮುಖಪುಟ'ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್' ಎಂಬ ದ್ವೇಷ ಹರಡುವ ವಿಡಿಯೋ ಪ್ರಸಾರ: ಬಲಪಂಥೀಯ ಸಂವಾದ ಯೂಟ್ಯೂಬ್ ಚಾನೆಲ್‌...

‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್’ ಎಂಬ ದ್ವೇಷ ಹರಡುವ ವಿಡಿಯೋ ಪ್ರಸಾರ: ಬಲಪಂಥೀಯ ಸಂವಾದ ಯೂಟ್ಯೂಬ್ ಚಾನೆಲ್‌ ಮೇಲೆ FIR

- Advertisement -
- Advertisement -

‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್:2022’ ಎಂಬ ಶೀರ್ಷಿಕೆಯೊಂದಿಗೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಬಲಪಂಥೀಯ ವಿಚಾರ ಪ್ರತಿಪಾದಿಸುವ ಸಂವಾದ ಯೂಟ್ಯೂಬ್ ಚಾನೆಲ್‌ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬಿಜೆಪಿ ಮತ್ತು ಆರ್‌ಎಸ್ಎಸ್‌ ಬೆಂಬಲಿಸುವ, ಹಿಂದುತ್ವ ಪ್ರತಿಪಾದಿಸುವ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಕಿಡಿಕಾರುವ ಸಂವಾದ ಯೂಟ್ಯೂಬ್‌ ಚಾನೆಲ್‌ ಮತ್ತು ಫೇಸ್‌ಬುಕ್‌ ಪೇಜ್‌ನಲ್ಲಿ ಮೇ 14 ರಂದು ‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್:2022’ ಎಂಬ ಶೀರ್ಷಿಕೆಯೊಂದಿಗೆ 1.48 ನಿಮಿಷದ ವಿಡಿಯೋ ಒಂದನ್ನು ಪ್ರಸಾರ ಮಾಡಿತ್ತು. ಅದು ಎಲ್ಲೆಡೆ ವೈರಲ್ ಆಗಿ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಗಿತ್ತು.

ನ್ಯಾಯಾಲಯದ ಆವರಣಕ್ಕೆ ಅನುಮತಿ ಇಲ್ಲದೆ ಪ್ರವೇಶ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ಹೈಕೋರ್ಟ್‌ನ ಆಡಳಿತ ವಿಭಾಗದ ಉಸ್ತುವಾರಿ ರಿಜಿಸ್ಟ್ರಾರ್‌ ಎನ್‌.ಜಿ ದಿನೇಶ್‌ರವರು ಮೇ 16ರಂದು ದೂರು ನೀಡಿದ್ದರು. ಅದರ ಆಧಾರದಲ್ಲಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮ ಪ್ರವೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣ) ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸದ್ಯ ಈ ವಿಡಿಯೋ ಸಂವಾದ ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಲ್ಲಿ ಡಿಲೀಟ್ ಆಗಿದ್ದರೂ ಸಹ ಇದೇ ವಿಡಿಯೋವನ್ನು ವಿಜಯವಾಣಿ ಪತ್ರಿಕೆಯ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಸಹ ಪ್ರಕಟಿಸಲಾಗಿದೆ. ಅಲ್ಲದೆ ಇಂಡಿಯಾ ಟಿವಿ, ನಮೋ ಟಿವಿ ಸೇರಿ ಹಲವು ಫೇಸ್‌ಬುಕ್‌ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

ಇದನ್ನೂ ಓದಿ: ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ: ಪೊಲೀಸರ ಎದುರೇ ಬಜರಂಗದಳ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...