Homeರಾಷ್ಟ್ರೀಯ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ; ‘ಅಂಬೇಡ್ಕರ್‌ ನಾಮ’ ಸಂಪಾದಕ ಬಂಧನ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ (ಡಿಯು) ಪ್ರೊಫೆಸರ್, ‘ಅಂಬೇಡ್ಕರ್‌ ನಾಮ’ ಸಂಪಾದಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಆದರೆ ಶನಿವಾರ, ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ.

ಅವರ ಬಂಧನದ ಬಗ್ಗೆ ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ದೃಢಪಡಿಸಿದ್ದಾರೆ. “ಪ್ರೊಫೆಸರ್‌‌ ರತನ್ ಅವರು ಮಂಗಳವಾರ ಕಟ್ಟಡವೊಂದರ ಫೋಟೋವನ್ನು ಪೋಸ್ಟ್ ಮಾಡಿ ಆಕ್ಷೇಪಾರ್ಹ ಕಾಮೆಂಟ್‌‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದ್ದು, ತನಿಖೆಯನ್ನು ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರತನ್‌‌ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್‌ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ವಕೀಲ ವಿನೀತ್ ಜಿಂದಾಲ್ ಅವರು ತನ್ನ ದೂರಿನಲ್ಲಿ, ರತನ್‌ ಲಾಲ್ ಅವರು ಇತ್ತೀಚೆಗೆ “ಶಿವಲಿಂಗದ ಮೇಲೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್” ಅನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿದೆ ಎನ್ನಲಾಗಿರುವ ‘ಶಿವಲಿಂಗ’ದ ವಿಚಾರದ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ಸ್ವರೂಪದ್ದಾಗಿದೆ. ಈ ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪ್ರೊಫೆಸರ್‌ ರತನ್ ಲಾಲ್ ಅವರು ತಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ. “ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೆ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಇಂತಹ ಹಲವಾರು ಅವಲೋಕನಗಳನ್ನು ಮಾಡಿದ್ದೇನೆ ಮತ್ತು ಅವುಗಳನ್ನು ಬರೆದಿದ್ದೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಹಿಂದೂ ಭಾವನೆಗಳ ಬಗ್ಗೆ ಮಾತನಾಡಿದ ಈ ಅಯೋಗ್ಯನನ್ನ ಅಲ್ಲೇ ಕಡಿದು ಹಾಕಬೇಕಿತ್ತು .ಈ ಕಮ್ಯೂನಿಸ್ಟ್ ಭೋಳಿ ಮಗನ್ನ ಕಡಿದು ಊರಿನ ಬಾಗಲಿಗೆ ನೇತಾಡಬೇಕಿತ್ತು

  2. ಹಿಂದೂ ವೈದಿಕರಲ್ಲಿ 33 ಕೋಟಿ ದೇವರಿದ್ದು ಅವರ ಕುರಿತು ಅತಿ ವಿಚಿತ್ರ ಕಥೆಗಳೂ ಇರುವುದರಿಂದ, ನಾವು ಜೋರಾಗಿ ಕೆಮ್ಮಿದರೂ 33 ಕೋಟಿ ದೇವರಲ್ಲಿ ಯರಾದರೊಬ್ಬ ದೇವರಿಗೆ ಅವಮಾನ ಆಗುವುದು ಖಚಿತ. ಹಾಗಾದರೆ ನಾವು ಕೆಮ್ಮುವುದನ್ನು ಸೀನುವುದನ್ನು ನಿಲ್ಲಿಸಬೇಕೇ ??😢😢

  3. ಬ್ರಾಹ್ಮಣ್ಯ ಹಿಂದುತ್ವದ ಮುಖವಾಡ ಧರಿಸಿ ಮೇರೆಯಲು ಪ್ರಾರಂಭಿಸಿದೆ ಬಹುಸಂಖ್ಯಾತರಿಗೆ ವಿದ್ಯೆ ನಿಶಿದ್ದವಾಗಿದ್ದ ಕಾಲದಲ್ಲಿ ಎನೆನೊ ಸುಳ್ಳು ಪುಸ್ತಕಗಳು ಕಾಲ್ಪನಿಕ ವೇದ ಪುರಾಣ ಬರೆದು ಜನರನ್ನು ನಂಬಿಸಿ ತಮ್ಮ ಹೊಟ್ಟೆಪಾಡು ಮಾಡಿಕೊಂಡು ಸುಖ ಜೀವನ ಮಾಡಿಕೊಂಡು ರಾಜ ಮಹಾರಾಜರನ್ನು ಓಲೈಸಿಕೊಂಡು ಬದುಕಿದ್ದ ವೈದಿಕ ಸನಾತನಿಗಳಿಗೆ ಆದುನಿಕ ಶಿಕ್ಷಣ ಪಡೆದ ಜನ ತಮ್ಮ ಕಾಲ್ಪನಿಕ ಕಥೆಗೆ ಪ್ರತಿಕ್ರಿಯಿಸುತ್ತಿರುವುದು ಹತಾಶೆ ಮೂಡಿಸಿದೆ.

  4. ಇದೆಲ್ಲ ಮಾಟ ಮಂತ್ರ ಮಾಡಿ ಕಲ್ಪನೆ ಯಾ ಸಂಕಲ್ಪ ಮಾಡಿದ್ದಾರೆ ಬಿಜೆಪಿ ಸರ್ಕಾರ ಬಾರುತ್ತೆ ಅಂತಾ ಈ ಮಾಂತ್ರಿಕ ಚೀನಾ ದ ಮಾಂತ್ರಿಕ ವಿದ್ಯೆ ಜೋತೆಗೆ ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಜನರ ನೆಮ್ಮದಿ ಕೆಡಿಸಿ ಸೀನಿಮಾ ತರ ಎಲ್ಲಾರನ್ನು ನಟನೆ ಮಾಡುತ್ತಾನೆ ತುಮಕೂರು ಪ್ರಸಾದ್ ಬಂಗಾರಿ ಮತ್ತು ಮಂತೇಶ್ ಬಾಬು ವಿರಪುರ (ಶಿವಕೂಮಾರ್ ಸ್ವಾಮಿ ಜಿ ಊರು) ಪಕ್ಕಾ ಶಾಂತಪುರ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...