HomeಮುಖಪುಟRSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ತಜ್ಞರಲ್ಲದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಟ್ವಿಟರ್‌ನಲ್ಲಿ ಜೋರು ಸದ್ದು ಕೇಳಿಬಂದಿದೆ. #RejectRSSTextBooks #RejectBrahminTextBooks ಎಂಬ ಹ್ಯಾಷ್‌ಟ್ಯಾಗ್‌ಗಳು ಭಾರತ ಮಟ್ಟದಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಪಠ್ಯಪುಸ್ತಕ ಸಮಿತಿಯಲ್ಲಿ ಇರುವವರು ಎಲ್ಲರೂ ಬ್ರಾಹ್ಮಣರೇ ಆಗಿದ್ದಾರೆ. 09 ಜನ ಬ್ರಾಹ್ಮಣ ಲೇಖಕರ ಪಠ್ಯ ಸೇರಿಸಲಾಗಿದೆ. 06 ಜನ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಜೀವನದುದ್ದಕ್ಕೂ ಸುಳ್ಳನ್ನೇ ಹೇಳಿಕೊಂಡು ಬಂದ ಚಕ್ರವರ್ತಿ ಸೂಲಿಬೆಲೆ ಪಠ್ಯ ಸೇರಿಸುವ ಮೂಲಕ ಮಕ್ಕಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಟ್ರೋಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷನನ್ನಾಗಿ ನೇಮಿಸಿದ್ದಾಗಲೇ ಕರ್ನಾಟಕ ಮರ್ಯಾದೆ ಹಾಳಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಟ್ವಿಟರ್‌ನಲ್ಲಿ #RejectRSSTextBooks #RejectBrahminTextBooks ಹ್ಯಾಷ್‌ಟ್ಯಾಗ್‌ಗಳು 13 ಸಾವಿರಕ್ಕೂ ಹೆಚ್ಚು ಟ್ವೀಟ್ ಆಗಿದ್ದು, ಭಾರತ ಮಟ್ಟದಲ್ಲಿ ಟ್ರೆಂಡ್ ಆಗುತ್ತಿವೆ.

ವಿದ್ಯಾರ್ಥಿಗಳು ಕಲಿಯುವ ಇತಿಹಾಸದ ಪಠ್ಯಪುಸ್ತಕಗಳು ನಾಡಿನ ಭವಿಷ್ಯತ್ತಿಗೆ ಮಾರಕವಾಗಬಾರದು, ಪೂರಕವಾಗಿರಬೇಕು. ಹಿಂಸೆ, ದ್ವೇಷ, ಅಸೂಯೆಗಳ ಪುಷ್ಠಿಕರಿಸುವ ವೈದೀಕರಣವನ್ನ ಖಂಡಿಸಿಬೇಕಿದೆ. ಕನ್ನಡದ ಅಸ್ಮಿತೆಗೆ ಧಕ್ಕೆ ತರುವ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ತಡೆ ನೀಡಬೇಕು #RejectRSSTextBooks ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್‌ರವರು ಟ್ವೀಟ್ ಮಾಡಿದ್ದಾರೆ.

RSS ಮತ್ತು ನಕಲಿ ದೇಶಪ್ರೇಮಿಗಳನ್ನು ಪಠ್ಯದೊಳಗೆ ಸೇರಿಸಿ ಅವರ ವಿಷಕಾರಿ ನೀತಿಗಳನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ಸರ್ಕಾರಕ್ಕೆ ಯಾವುದರ ಬಗ್ಗೆಯೂ ಸ್ಪಷ್ಟತೆ ತಿಳುವಳಿಕೆ ಇಲ್ಲ. ಇಂತಹ ಅಪದ್ದಗಳಿಗೆ ಕಾರಣವಾಗಿರುವ ಸಚಿವ ಬಿ.ಸಿ ನಾಗೇಶ್ ಅಸಮರ್ಥರಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಉತ್ತೇಜಿಸುತ್ತಿದ್ದಾರೆ #RejectRSSTextBooks ಎಂದು ಮಾಜಿ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಆಧುನಿಕ ಶಿಕ್ಷಣವನ್ನು ತಂದುಕೊಟ್ಟವರು ಕ್ರಿಶ್ಚಿಯನ್ನರು. ಕರ್ನಾಟಕವನ್ನು ಜಾಗತಿಕ ಭೂಪಟಕ್ಕೆ ಸೇರಿಸಿದವರು ಮುಸ್ಲಿಮರು. ಕರ್ನಾಟಕದ ಮೂಲನಿವಾಸಿಗಳು ದಲಿತರು. ಪಠ್ಯಪುಸ್ತಕ ರಚನೆ ಮಾಡುವಾಗ ಸಮಿತಿಯಲ್ಲಿ ಇವರು ಇರಬೇಕಾದ್ದು ಅಗತ್ಯ. ಮಕ್ಕಳಿಗೆ ಜನಾಂಗ ದ್ವೇಷ ಕಲಿಸಬಾರದು #RejectRSSTextBooks #RejectBrahminTextBooks ಎಂದು ಹಿರಿಯ ಚಿಂತಕರು ಮತ್ತು ಜೆಎನ್‌ಯು ಕನ್ನಡ ಪೀಠದ ಅಧ್ಯಕ್ಷರಾಗಿದ್ದ ಪುರುಷೋತ್ತಮ ಬಿಳಿಮಲೆಯವರು ಬರೆದಿದ್ದಾರೆ.

ಕನ್ನಡ ಮಕ್ಕಳು ಓದಬೇಕಿರುವುದು ಸಿದ್ದಲಿಂಗಯ್ಯನವರ ಬಂಡಾಯದ ಹಾಡುಗಳನ್ನು. ಸಂಸ್ಕಾರದ ಹೆಸರಲ್ಲಿ ಬರೀ ವೈದಿಕ ಆಚರಣೆಗಳು, ನಂಬಿಕೆಗಳನ್ನೇ ಕನ್ನಡ ಮಕ್ಕಳಿಗೆ ಕಲಿಸಿದರೆ ಅದು ತಪ್ಪು. ಸಂಸ್ಕಾರ ಬರೀ ಬ್ರಾಹ್ಮಣರಿಗಶ್ಟೇ ಇದೆಯಾ? ಇದೊಂದು ಹೊಣೆಗೇಡಿ ಪುರೋಹಿತಶಾಹಿ ಸರಕಾರ ಎಂದು ಚೈತನ್ಯ ಗೌಡ ಎಂಬುವವರು ಬರೆದಿದ್ದಾರೆ.

ಅರವಿಂದ ಮಾಲಗತ್ತಿಯವರ ಪದ್ಯವನ್ನು ಕಿತ್ತುಹಾಕಲಾಗಿದೆ ಎಂಬುದಷ್ಟೇ ಮುಖ್ಯ ವಿಷಯವಲ್ಲ, ಕಿತ್ತು ಹಾಕಿರುವುದು ಬುದ್ಧನ ಕುರಿತ ಪದ್ಯ. ಕ್ರೂರ ಜನಾಂಗೀಯವಾದಿಗಳಷ್ಟೇ ಹೀಗೆ ಮಾಡಬಲ್ಲರು ಎಂದು ಹೋರಾಟಗಾರರಾದ ದಿನೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸರ್ವಜನಾಂಗದ ಶಾಂತಿಯ ಬೀಡಾದ ಕರ್ನಾಟಕದ ಮಕ್ಕಳಿಗೆ ಒಳ್ಳೆಯ ಪಠ್ಯಪುಸ್ತಕ ಕೊಡುವಂಥ ಬಲಪಂಥೀಯ ವಿದ್ವಾಂಸರನ್ನು ಹುಡುಕಲು ಸರಕಾರಕ್ಕೆ ಅಸಾಧ್ಯವಾದುದು ಅವರ ಬೌದ್ಧಿಕ ದಾರಿದ್ರ್ಯವನ್ನು ಸೂಚಿಸುವುದೇ? ಚಕ್ರತೀರ್ಥ ಬಿಟ್ಟರೆ ಅವರಲ್ಲಿ ಯಾರೂ ಇಲ್ಲವೇ? ಎಂದು ಬಹುತ್ವ ಕರ್ನಾಟಕ ಸಂಘಟನೆ ಪ್ರಶ್ನಿಸಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದರ ಚಿಂತನೆಗಳ ತಿರುಚುವಿಕೆ: ಪ್ರಗತಿಪರ ವಿಚಾರ ಕೈಬಿಟ್ಟು, ಶಾಸ್ತ್ರ, ವೇದಾಂತ ಹೇರಿದ ನೂತನ ಪಠ್ಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Twitter system is not voice of public..
    It’s RSS or any it sd be truth in calabash.. not appraisal of sm wrong history.
    Be courageous to know the real fact instead of trying to divide Brahman,Muslim,dalit etc..
    Don’t try to fill ur bank appraising anti communists.
    Twitter Andolan is to have good dreams by blaming truth

  2. Since 2014-15 this nation is witnessing intolerance . Brahminocracy , Brahmin egimony have ruined the 7 decade old Democracy.
    Textbook committee is luring Brahminical lessons into the Academic curriculum is highly condemnable.
    Karnataka education minister Mr. Nagesh must resign immediately for dropping some of the historical patriots lessons from kannada textbooks.
    Reject out right RSS textbooks…….

  3. What a shame! Although we call ourselves citizens of 21st century, we behave as if we never went through any civilization. We are to teach that love conquerors and hate destroys. Unfortunately, hate is become more sweeter than genuine love. People of goodwill please help each other to build a better society by electing sound minded people.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...