Homeಕರ್ನಾಟಕಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...