Homeಸಿನಿಮಾಕ್ರೀಡೆIPL: ಕೋಲ್ಕತ್ತಾದಲ್ಲಿ ಮಳೆ ನಿಲ್ಲದಿದ್ದರೆ RCB ಟೂರ್ನಿಯಿಂದ ಹೊರಕ್ಕೆ - ಆತಂಕದಲ್ಲಿ ಅಭಿಮಾನಿಗಳು

IPL: ಕೋಲ್ಕತ್ತಾದಲ್ಲಿ ಮಳೆ ನಿಲ್ಲದಿದ್ದರೆ RCB ಟೂರ್ನಿಯಿಂದ ಹೊರಕ್ಕೆ – ಆತಂಕದಲ್ಲಿ ಅಭಿಮಾನಿಗಳು

- Advertisement -
- Advertisement -

ಅದೃಷ್ಟದ ರೀತಿಯಲ್ಲಿ ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ ತಂಡಕ್ಕೆ ಮತ್ತು ಆತಂಕ ಎದುರಾಗಿದೆ. ಕೋಲ್ಕತ್ತಾದಲ್ಲಿ ಸುರಿಯುತ್ತಿರುವ ಮಳೆಯು ಆರ್‌ಸಿಬಿಯ ಪ್ಲೇಆಫ್‌ ಪಂದ್ಯಕ್ಕೆ ಅಡ್ಡಿಯುಂಟು ಮಾಡಿದ್ದು ಒಂದು ವೇಳೆ ಮಳೆ ನಿಲ್ಲದಿದ್ದರೆ ಆರ್‌ಸಿಬಿ ಅನಿವಾರ್ಯವಾಗಿ ಟೂರ್ನಿಯಿಂದ ಹೊರಕ್ಕೆ ಬೀಳುವ ಅಪಾಯ ಎದುರಿಸುತ್ತಿದೆ.

ಇಂದು ರಾತ್ರಿ 7.30ಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವರ್ಸಸ್ ಆರ್‌ಸಿಬಿ ನಡುವಿನ ಕ್ವಾಲಿಫೈಯರ್ ಪಂದ್ಯ ಆರಂಭವಾಗಬೇಕಿತ್ತು. ಮಳೆಯ ಕಾರಣದಿಂದ ಇನ್ನು ಟಾಸ್ ಆಗಿಲ್ಲ. ಮಳೆ ಸುರಿಯುತ್ತಿರುವುದರಿಂದ ಟಾಟಾ ಐಪಿಎಲ್ ಸಮಿತಿಯು ನಾಲ್ಕು ನಿಯಮಗಳನ್ನು ಮುಂದಿಟ್ಟಿದೆ. ಅವುಗಳೆಂದರೆ

  1. ಮಳೆ ನಿಂತರೆ ರಾತ್ರಿ 9.40ಕ್ಕೆ ಪ್ಲೇ ಆಫ್ ಪಂದ್ಯ ಆರಂಭವಾಗುತ್ತದೆ. (ಯಾವುದೇ ಓವರ್‌ಗಳ ಕಡಿತವಿಲ್ಲದೆ)
  2. ಆಗಲೂ ಮಳೆ ನಿಲ್ಲದೆ ಪಂದ್ಯ ಆರಂಭವಾಗದಿದ್ದರೆ ತಲಾ 5 ಓವರ್‌ಗಳ ಪಂದ್ಯವನ್ನು ರಾತ್ರಿ 11.56ಕ್ಕೆ ಆರಂಭಿಸಲಾಗುತ್ತದೆ.
  3. ಆಗಲೂ ಮಳೆ ನಿಲ್ಲದಿದ್ದರೆ ಬೆಳಗ್ಗಿನ ಜಾವ 12.50 ಕ್ಕೆ ತಲಾ ಕೇವಲ ಒಂದು ಓವರ್‌ನ ಸೂಪರ್ ಓವರ್ ಪಂದ್ಯ ಆಡಿಸಲಾಗುತ್ತದೆ.
  4. ಆಗಲೂ ಮಳೆ ನಿಲ್ಲದಿದ್ದರೆ ಪಂದ್ಯ ರದ್ದು ಮಾಡಿ ಗ್ರೂಪ್ ಹಂತದಲ್ಲಿ ಹೆಚ್ಚಿನ ಅಂಕ ಪಡೆದ ತಂಡವನ್ನು ವಿಜೇತ ಎಂದು ಘೋಷಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ಕಳಿಸಲಾಗುತ್ತದೆ.

ಸದ್ಯ ಅಂಕಪಟ್ಟಿಯಲ್ಲಿ 18 ಅಂಕಗಳೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ 3ನೇ ಸ್ಥಾನದಲ್ಲಿದೆ. ಆದರೆ ಆರ್‌ಸಿಬಿ 16 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಹಾಗಾಗಿ ಮಳೆಯಿಂದ ಪಂದ್ಯ ರದ್ದುಗೊಂಡರೆ ಆರ್‌ಸಿಬಿ ಮನೆಗೆ ಹೋಗಬೇಕಾಗುತ್ತದೆ. ಲಕ್ನೋ ಮುಂದಿನ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಎದುರಿಸಲಿದೆ. ಹಾಗಾಗಿ ಮಳೆ ನಿಲ್ಲಲಿ ಪಂದ್ಯ ನಡೆಯಲಿ ಎಂದು ಆರ್‌ಸಿಬಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...