Homeಸಿನಿಮಾಕ್ರೀಡೆIPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

IPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ.

- Advertisement -
- Advertisement -

ಶುಕ್ರವಾರ ರಾತ್ರಿ ನಡೆದ ಐಪಿಎಲ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು 7 ವಿಕೆಟ್ ಅಂತರದ ಸೋಲು ಕಂಡ RCB ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ‘ಈ ಸಲ ಕಪ್ ನಮ್ದೆ’ ಎನ್ನುವ ಕನಸನ್ನು ಕನಸಾಗಿಯೇ ಇಟ್ಟಿದೆ. ಆದರೆ ಪಂದ್ಯದ ನಂತರ ಸ್ಪಿನ್ ದಿಗ್ಗಜ ಶೇನ್ ವಾರ್ನ್ ನೆನೆದು RCB ಫ್ರಾಂಚೈಸಿ ಟ್ವೀಟ್ ಮಾಡುವ ಮೂಲಕ ಕ್ರಿಕೆಟ್ ಪ್ರಿಯರ ಮನಗೆದ್ದಿದೆ.

ಟಾಸ್‌ ಗೆದ್ದ ರಾಜಸ್ಥಾನ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವೈಫಲ್ಯ ಕಂಡಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ರಜತ್ ಪಾಟಿದಾರ್ 42 ಎಸೆತೆಗಳಲ್ಲಿ 58 ರನ್ ಗಳಿಸಿದ್ದು ಬಿಟ್ಟರೆ ಉಳಿದ ಎಲ್ಲಾ ಬ್ಯಾಟ್ಸ್‌ಮನ್‌ಗಳು ನೀರಸ ಪ್ರದರ್ಶನ ನೀಡಿದರು. 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಸಾಧ್ಯವಾಯಿತು. ರಾಜಸ್ಥಾನ್ ತಂಡದ ಪರವಾಗಿ ಪ್ರಸಿದ್ದ್ ಕೃಷ್ಣ ಮತ್ತು ಒಬೆಡ್ ಮ್ಯಕೊಯ್ ತಲಾ ಮೂರು ವಿಕೆಟ್ ಗಳಿಸಿ ಮಿಂಚಿದರು.

ಆರ್‌ಸಿಬಿ ಎದರು ರಾಜಸ್ಥಾನ್ ರಾಯಲ್ಸ್ ತಂಡ ಸ್ಪೋಟಕ ಬ್ಯಾಟಿಂಗ್ ದಾಳಿ ಆರಂಭಿಸಿತು. ಜಾಸ್ ಬಟ್ಲರ್ 60 ಎಸೆತಗಳಲ್ಲಿ 106 ರನ್ ಚಚ್ಚುವ ಮೂಲಕ ಆರ್‌ಆರ್‌ ಸುಲಭವಾಗಿ ಗೆಲುವಿನ ದಡ ಸೇರಿತು. 7 ವಿಕೆಟ್‌ಗಳ ಅಧಿಕಾರಯುತ ಗೆಲುವಿನೊಂದಿಗೆ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಿತು.

ಪಂದ್ಯದ ಬಳಿಕ RCB ಫ್ರಾಂಚೈಸಿ ರಾಜಸ್ಥಾನ್ ತಂಡಕ್ಕೆ ಶುಭ ಹಾರೈಸಿ ಮಾಡಿದ ಟ್ವೀಟ್ ಎಲ್ಲೆಡೆ ಗಮನ ಸೆಳೆಯಿತು. “ಇಂದು ರಾತ್ರಿ ಚೆನ್ನಾಗಿ ಆಡಿದಿರಿ. ದಿವಂಗತ ದಿ ಗ್ರೇಟ್ ಶೇನ್ ವಾರ್ನ್ ನಿಮ್ಮನ್ನು ನೋಡಿ ಖುಷಿಪಡುತ್ತಿರುತ್ತಾರೆ. ರಾಜಸ್ಥಾನ್ ರಾಯಲ್ಸ್ ಫೈನಲ್ ಪಂದಕ್ಕೆ ನಿಮಗೆ ಶುಭವಾಗಲಿ” ಎಂದು ಆರ್‌ಸಿಬಿ ಟ್ವೀಟ್ ಮಾಡಿತ್ತು. ಅದಕ್ಕೆ ಪ್ರತಿಯಾಗಿ ರಾಜಸ್ಥಾನ ರಾಯಲ್ಸ್ ತಂಡ ಹೃದಯ ಇಮೋಜಿ ಹಾಕಿ ಸಂಭ್ರಮ ವ್ಯಕ್ತಪಡಿಸಿತ್ತು.

ಶೇನ್ ವಾರ್ನ್ 2008ರ ಮೊದಲ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದರು ಮತ್ತು ಆ ಬಾರಿ ರಾಜಸ್ಥಾನ್ ತಂಡ ಚಾಂಪಿಯನ್ ಆಗಿತ್ತು. ತದನಂತರ ಅದು ಫೈನಲ್ ಹಂತಕ್ಕೆ ತಲುಪಿರುವುದು ಈ ಬಾರಿ ಮಾತ್ರ. ಫೈನಲ್ ಪಂದ್ಯ ಭಾನುವಾರ ರಾತ್ರಿ 8 ಗಂಟಗೆ ನಡೆಯಲಿದ್ದು, ಪ್ರಶಸ್ತಿಗಾಗಿ ರಾಜಸ್ಥಾನ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಲಿವೆ.

RCB ಗೆ ಸೋಲು: ಮೀಮ್‌ಗಳ ಸುರಿಮಳೆ

RCB ತಂಡ ಪಂದ್ಯ ಸೋಲುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಸುರಿಮಳೆಯಾಗಿದೆ. ಈ ಸಲ ಕಪ್ ನಮ್ದೆ ಎನ್ನುವ ಸ್ಲೋಗನ್ ಅನ್ನು ಮುಂದಿನ ಸಲ ಕಪ್ ನಮ್ದೆ ಎಂದು ಬದಲಿಸಿ ಹಂಚಿಕೊಳ್ಳಲಾಗಿದೆ. ಆ ಮೂಲಕ ಭರವಸೆ ಕಳೆದುಕೊಳ್ಳುವುದಿಲ್ಲ ಎಂದು ವ್ಯಂಗ್ಯವಾಡಲಾಗಿದೆ.

ಇದನ್ನೂ ಓದಿ; ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...