Homeಕರ್ನಾಟಕKSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

- Advertisement -
- Advertisement -

ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌‌‌ ಅವರು ರೈತ ಹೋರಾಟ ಮತ್ತು ಕೆಎಸ್‌ಆರ್‌‌ಟಿಸಿ ಬಸ್‌‌‌ ಮುಷ್ಕರವನ್ನು ನಿಲ್ಲಿಸುವುದಾಗಿ ಕೋಟಿ ಕೋಟಿ ಡೀಲ್‌ ಮಾಡಿದ್ದಾರೆ ಎಂದು ಕನ್ನಡದ ಖಾಸಗಿ ಚಾನೆಲ್‌ ಆರೋಪಿಸಿದೆ. ಈ ಬಗ್ಗೆ ರಾಜ್ಯದಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್‌ ಅವರು 2021 ರ ಎಪ್ರಿಲ್‌‌ನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಹೋರಾಟವನ್ನು ನಿಲ್ಲಿಸಲು 35 ಕೋಟಿ ಲಂಚ ಕೇಳಿದ್ದಾರೆ ಎಂದು ಕನ್ನಡದ ಖಾಸಗಿ ಸುದ್ದಿ ಚಾನೆಲ್‌ ಪವರ್‌ ಟಿವಿ ಆರೋಪಿಸಿದ್ದು ಸುದ್ದಿಯನ್ನು ಪ್ರಸಾರ ಮಾಡಿದೆ. ಕೆಎಸ್‌ಆರ್‌ಟಿಸಿ ನೌಕರರ ಹೋರಾಟದ ಸಮಯದಲ್ಲಿ ಹೋರಾಟದ ನೇತೃತ್ವವನ್ನು ಕೋಡಿಹಳ್ಳಿ ಚಂದ್ರಶೇಖರ್‌ ಅವರು ವಹಿಸಿದ್ದರು. ದೇಶದ ಐತಿಹಾಸಿ ರೈತ ಹೋರಾಟವನ್ನು ನಿಲ್ಲಿಸಲು ಸಾವಿರಾರು ಕೋಟಿ ರುಪಾಯಿಗೆ ಅವರು ಡೀಲ್ ನಡೆಸಿದ್ದಾರೆ ಎಂದು ಪವರ್‌‌‌ ಟಿವಿ ವರದಿಯು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಶನಿವಾರದಂದು ಮೈಸೂರಿನ ನ್ಯಾಯಾಲಯದ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೋಡಿಹಳ್ಳಿ ಚಂದ್ರಶೇಖರ್ ಅವರ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡುವಂತೆ ಹಾಗೂ ತಪ್ಪಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್‌ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಇಂತಹ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೇವೆ” ಎಂದು ಹೇಳಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ. ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ.

ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು. ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಕಳ್ಳರು😡😡😡

    ಯಾರನ್ನೂ ನಂಬೋ ಹಾಗಿಲ್ಲ.

    ಇವನ ಐಶಾರಾಮಿ ಜೀವನ, ಬಹುಕೋಟಿ ಬಂಗಲೆ, ಫಾರ್ಚುನರ್ ಕಾರಿನ ದರ್ಬಾರ್ ನೋಡಿ ಆಗಲೇ ನಾವು ಎಚ್ಚೆತ್ತು ಕೊಳ್ಳಬೇಕಿತ್ತು.

  2. Govt. To give a benefits to KSRTC staff.
    Department is not giving security to Staff.
    Staff are very imbalanced life in their life.

    Specially full and enjoying in department all the Ticket Checkers..

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...